
ಚಿತ್ರದುರ್ಗ ನ್ಯೂಸ್. ಕಾಂ: ನಾಲ್ಕು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.
ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದಿಂದ ಕಂಗೆಟ್ಟಿದ್ದ ಬಿಜೆಪಿ ಕಾರ್ಯಕರ್ತರಿಗೆ ಈ ಫಲಿತಾಂಶ ಬೂಸ್ಟ್ ನೀಡಿದೆ ಎಂದು ಬಿಜೆಪಿ ಕಾರ್ಯಕರ್ತರು ತಿಳಿಸಿದರು.
ಮೊಳಕಾಲ್ಮೂರು ಹಾಗೂ ಹಿರಿಯೂರಿನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಮಧ್ಯಪ್ರದೇಶ, ರಾಜಾಸ್ಥಾನ ಹಾಗೂ ಛತ್ತೀಸ್ಗಢ ಚುನಾವಣೆಯಲ್ಲಿ ಬಿಜೆಪಿ ಜಯ ದಾಖಲಿಸಿದ್ದನ್ನು ಸಂಭ್ರಮಿಸಿದರು.

ಪಂಚ ರಜ್ಯಗಳ ಚುನಾವಣೆ ಮುಂಬರುವ ಲೋಕಸಭೆ ಚುಮಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿದೆ ಡಂದು ಹಿರಿಯೂರು ಕಾರ್ಯಕರ್ತರು ಅಭಿಪ್ರಾಯ ಹಂಚಿಕೊಂಡರು.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೆ 25 ಸ್ಥಾನ ಗೆಲ್ಲುವಷ್ಟು ಉತ್ಸಾಹ ಮೂಡಿದೆ. ಕಾಂಗ್ರೆಸ್ ಜನರಿಗೆ ಭರವಸೆ ಇಲ್ಲ ಎನ್ನುವುದು ಈ ಚುನಾವಣೆಯಲ್ಲಿ ಸಾಬೀತಾಗಿದೆ. ದೇಶಕ್ಕೆ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಆಗಬೇಕು. ಈ ನಿಟ್ಟಿನಲ್ಲಿ ಇಂದಿನಿಂದಲೇ ಕೆಲಸ ಮಾಡುತ್ತೇವೆ ಎಂದು ಮೊಳಕಾಲ್ಮೂರು ಕಾರ್ಯಕರ್ತರು ಅಭಿಪ್ರಾಯ ಹಂಚಿಕೊಂಡರು.
ಮೊಳಕಾಲ್ಮೂರು ತಾಲೂಕಿನಲ್ಲಿ ನಡೆದ ವಿಜಯೋತ್ಸವದಲ್ಲಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷರುಗಳಾದ ಟಿ.ಟಿ.ರವಿ ಮತ್ತು ಪಿ. ಲಕ್ಷಣ ಮತ್ತು ಪಟ್ಟಣ ಪಂಚಾಯತಿ ಉಪಾಧ್ಯಕ್ಷರು ಬಿ.ಮಂಜಣ್ಣ ನಗರ ಘಟಕದ ಅಧ್ಯಕ್ಷ ಕಿರಣ್ ಗಾಯಕ್ವಾಡ್ ಮತ್ತು ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೂರಮ್ಮನಹಳ್ಳಿ ನಾಗರಾಜ್, ಮಂಡಲದ ಪ್ರಧಾನ ಕಾರ್ಯದರ್ಶಿ ಎನ್.ಪಿ.ಪ್ರಭಾಕರ, ಯುವ ಮೋರ್ಚಾ ಅಧ್ಯಕ್ಷರಾದ ಹರೀಶ್ ಕಡೆತೋಟ , ಕುಮಾರಸ್ವಾಮಿ ,ಪಟ್ಟಣ ಪಂಚಾಯತಿ ಸದಸ್ಯರಾದ ಭಾಗ್ಯಮ್ಮ ಬೀಮಣ್ಣ , ಶುಭ ಪ್ರಥ್ವಿ ರಾಜ್ , ಸಿದ್ದಣ್ಣ, ಶಿವಕುಮಾರ್ ಕೇರೆ, ಹೇಮಂತ್ ,ಹರೀಶ್ ಪಾಳೇಗಾರ, ಬಸವರಾಜ, ಮಾರಣ್ಣ, ಜಿಂದೆ ಪಕೀರಪ್ಪ,ಮತ್ತಿತರರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

