ಚಳ್ಳಕೆರೆ
ನನ್ನ ದೇಶ ನನ್ನ ಮಣ್ಣು ಕಾರ್ಯಕ್ರಮಕ್ಕೆ ಬಿಜೆಪಿ ಸಿದ್ಧತೆ
ಚಿತ್ರದುರ್ಗ ನ್ಯೂಸ್.ಕಾಂ: ದೇಶದ ಮಣ್ಣು ಮತ್ತು ಮಹನೀಯರ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಬಿಜೆಪಿ ದೇಶಾದ್ಯಂತ ‘ನನ್ನ ಮಣ್ಣು ನನ್ನ ದೇಶ’ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸೆ.11 ರಂದು ಚಿತ್ರದುರ್ಗ ಹಾಗೂ ಚಳ್ಳಕೆರೆಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.
ಚಿತ್ರದುರ್ಗ ನಗರದ ಜೆಸಿಆರ್ ಬಡಾವಣೆಯಲ್ಲಿರುವ ಗಣಪತಿ ದೇವಸ್ಥಾನದ ಬಳಿ ಬೆಳಗ್ಗೆ 11 ಗಂಟೆಗೆ ಆನಂತರ ಮಧ್ಯಾಹ್ನ 1 ಗಂಟೆಗೆ ಚಳ್ಳಕೆರೆಯ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದ ಸಮೀಪದ ಬನ್ನು ಮರದ ಬಳಿ ಸಂಸದರು, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರಾದ ಎ.ನಾರಾಯಣಸ್ವಾಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಇದನ್ನೂ ಓದಿ: ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರ ಆಕ್ರೋಶ | ಡಿಸಿ ಕಚೇರಿ ಬಳಿ ಸರ್ಕಾರದ ವಿರುದ್ಧ ವಾಗ್ದಾಳಿ
ಈ ನಾಡಿನ ಎಲ್ಲಾ ಮಹಾನೀಯರಿಗೂ ದೇಶದ ಮಣ್ಣು ಮತ್ತು ದೇಶಾಭಿಮಾನದ ಬಗ್ಗೆ ಜಾಗೃತಿ ಮೂಡಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪ್ರಾರಂಭದ ಹಂತದಲ್ಲಿ ಚಿತ್ರದುರ್ಗ ಮತ್ತು ಚಳ್ಳಕೆರೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಿ ಮುಂದೆ ಹಂತ ಹಂತವಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಈ ಕಾರ್ಯಕ್ರಮ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಾಳೆಕಾಯಿ ರಾಮದಾಸ್ ತಿಳಿಸಿದ್ದಾರೆ.
(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/J6cH6HirXqYERmT1X09kSk)
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ https://www.facebook.com/chitradurganews?mibextid=ZbWKwL)