Connect with us

    ಕೋಟೆನಾಡಲ್ಲಿಂದು ಬಿಜೆಪಿ-ಕಾಂಗ್ರೆಸ್ ಶಕ್ತಿ ಪ್ರದರ್ಶನ | ನಾಮಪತ್ರ ಸಲ್ಲಿಕೆಗೆ ಭರ್ಜರಿ ಅಖಾಡ | ರೋಡ್ ಶೋ | ಬೃಹತ್ ಸಮಾವೇಶಕ್ಕೆ ಸಿದ್ಧತೆ

    ಲೋಕಸಮರ 2024

    ಕೋಟೆನಾಡಲ್ಲಿಂದು ಬಿಜೆಪಿ-ಕಾಂಗ್ರೆಸ್ ಶಕ್ತಿ ಪ್ರದರ್ಶನ | ನಾಮಪತ್ರ ಸಲ್ಲಿಕೆಗೆ ಭರ್ಜರಿ ಅಖಾಡ | ರೋಡ್ ಶೋ | ಬೃಹತ್ ಸಮಾವೇಶಕ್ಕೆ ಸಿದ್ಧತೆ

    CHITRADURGA NEWS | 4 MARCH 2024

    ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳೇ ಪ್ರಮುಖ ಎದುರಾಳಿಗಳಾಗಿದ್ದು, ಗುರುವಾರವೇ(ಇಂದು) ಎರಡೂ ಪಕ್ಷಗಳ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಲು ಭರ್ಜರಿ ಸಿದ್ಧತೆ ನಡೆದಿದೆ.

    ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ನಾಮಪತ್ರ ಸಲ್ಲಿಸುವ ಕಾರ್ಯಕ್ರಮಕ್ಕೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸುತ್ತಿದ್ದಾರೆ.

    ಇದನ್ನೂ ಓದಿ: ಶಾಸಕ ಚಂದ್ರಪ್ಪ ಮನೆಗೆ ಕಾರಜೋಳ ಭೇಟಿ | ಮಾತಿಗೆ ತಪ್ಪಲ್ಲ ಎಂದ ರಘುಚಂದನ್

    ನಗರದ ಬಿ.ಡಿ.ರಸ್ತೆಯಲ್ಲಿ ಭರ್ಜರಿ ರೋಡ್ ಶೋ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದ ನಂತರ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಯೋಜಿಸಿರುವ ಸಾರ್ವಜನಿಕ ಸಮಾವೇಶದಲ್ಲಿ ಸಿದ್ದರಾಮಯ್ಯ ಮಾತನಾಡಲಿದ್ದಾರೆ.

    ಇನ್ನೂ ಬಿಜೆಪಿ ಅಭ್ಯರ್ಥಿ ಗೋವಿಂದ ಎಂ. ಕಾರಜೋಳ ನಾಮಪತ್ರ ಸಲ್ಲಿಕೆ ಹಾಗೂ ರೋಡ್ ಶೋ ಹಮ್ಮಿಕೊಂಡಿದ್ದಾರೆ.

    ಇದನ್ನೂ ಓದಿ: ಹೊಳಲ್ಕೆರೆಯಲ್ಲಿ ಚುನಾವಣಾ ಪೂರ್ವಭಾವಿ ಸಭೆ | ಶಾಸಕ ಎಂ.ಚಂದ್ರಪ್ಪ, ಅಭ್ಯರ್ಥಿ ಗೋವಿಂದ ಕಾರಜೋಳ ಭಾಗೀ

    ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಮುಖಂಡರಾದ ಜೆ.ಸಿ.ಮಾಧುಸ್ವಾಮಿ, ಬಿ.ಶ್ರೀರಾಮುಲು, ಜನಾರ್ಧನ ರೆಡ್ಡಿ ಸೇರಿದಂತೆ ಹಲವು ನಾಯಕರು ಬರುತ್ತಿದ್ದಾರೆ. ಇದರೊಟ್ಟಿಗೆ ಜೆಡಿಎಸ್ ನಾಯಕರು ಕೂಡಾ ಸಾಥ್ ನೀಡುತ್ತಿದ್ದಾರೆ.

    ಎರಡೂ ಪಕ್ಷಗಳ ಅಭ್ಯರ್ಥಿಗಳು ಒಂದೇ ದಿನ ನಾಮಪತ್ರ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಸಾವಿರಾರು ಕಾರ್ಯಕರ್ತರು ಇಂದು ಚಿತ್ರದುರ್ಗದತ್ತ ಮುಖ ಮಾಡಲಿದ್ದ, ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ.

    ಇದನ್ನೂ ಓದಿ: ಮಳೆ ಆಗಮನಕ್ಕೆ ವಾತಾವರಣ ಸಜ್ಜು | ಕೊನೆಗೂ ಮುನಿಸು ತೊರೆದ ಮಳೆರಾಯ

    ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಈಗಾಗಲೇ ಎರಡು ಸೆಟ್ ನಾಮಪತ್ರ ಸಲ್ಲಿಸಿದ್ದು, ಇಂದು ಅಫಿಡವಿಟ್ ಸಹಿತ ಪೂರ್ಣ ಪ್ರಮಾಣದ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

    ಶ್ರೀ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ.

    ಇದನ್ನೂ ಓದಿ: ಜಿಲ್ಲಾ ಕೇಂದ್ರಕ್ಕೆ 100 ಕಿ.ಮೀ. ಅಭ್ಯರ್ಥಿ ಬೇಕೋ, 500 ಕಿ.ಮೀ ದೂರದ ಅಭ್ಯರ್ಥಿ ಬೇಕೋ? ಕೈ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಪ್ರಶ್ನೆ

    Click to comment

    Leave a Reply

    Your email address will not be published. Required fields are marked *

    More in ಲೋಕಸಮರ 2024

    To Top