ಮುಖ್ಯ ಸುದ್ದಿ
ಐದನೇ ಸುತ್ತಿನಲ್ಲೂ ಬಿಜೆಪಿ ಮುನ್ನಡೆ | ಹೆಚ್ಚಾಗುತ್ತಿದೆ ಅಂತರ
CHITRADURGA NEWS | 04 JUNE 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು ಐದನೇ ಸುತ್ತಿನಲ್ಲೂ ಬಿಜೆಪಿ ತೀವ್ರ ಮುನ್ನಡೆ ಸಾಧಿಸಿದೆ.
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 1,72,077 ಮತಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 1,57,877 ಮತ ಪಡೆದಿದ್ದಾರೆ. 14,200 ಮತಗಳ ಮುನ್ನಡೆಯನ್ನು ಬಿಜೆಪಿ ಸಾಧಿಸಿದೆ.
ಮೊದಲ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ಚಂದ್ರಪ್ಪ, ಬಳಿಕ ಎರಡು, ಮೂರು, ನಾಲ್ಕು, ಐದನೇ ಸುತ್ತಿನಲ್ಲಿ ಹಿನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 14,200 ಮತಗಳ ಅಂತರ ಕಾಯ್ದುಕೊಂಡಿದ್ದಾರೆ.
ಬಿಜೆಪಿಯ ಗೋವಿಂದ ಕಾರಜೋಳ, ಕಾಂಗ್ರೆಸ್‌ನ ಬಿ.ಎನ್.ಚಂದ್ರಪ್ಪ ಸೇರಿ 20 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಯ ನಡುವೆ ನೇರ ಹಣಾಹಣಿ ನಡೆದಿದ್ದು, ವಿಜಯದ ಮಾಲೆ ಯಾರ ಕೊರಳನ್ನು ಅಲಂಕರಿಸಲಿದೆ ಎಂಬ ಕುತೂಹಲ ಮೂಡಿದೆ.