ಮುಖ್ಯ ಸುದ್ದಿ
ಹತ್ತನೇ ಸುತ್ತಿನಲ್ಲೂ ಚಂದ್ರಪ್ಪಗೆ ಸೈಡ್ ನೀಡದ ಗೋವಿಂದ ಕಾರಜೋಳ | ಗೆಲುವಿನತ್ತ ನುಗ್ಗುತ್ತಿದೆ ಬಿಜೆಪಿ

CHITRADURGA NEWS | 04 JUNE 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಸರ್ಕಾರಿ ವಿಜ್ಞಾನ ಕಾಲೇಜು ಆವರಣದ ಕೇಂದ್ರದಲ್ಲಿ ನಡೆಯುತ್ತಿರುವ ಮತ ಎಣಿಕೆಯ ಹತ್ತನೇ ಸುತ್ತಿನಲ್ಲೂ ಕಾಂಗ್ರೆಸ್ ಚಂದ್ರಪ್ಪಗೆ ಸೈಡ್ ನೀಡದೆ ಬಿಜೆಪಿ ಗೋವಿಂದ ಕಾರಜೋಳ ಮುನ್ನುಗ್ಗುತ್ತಿದ್ದಾರೆ.
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 3,53,682 ಮತಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 3,17,564ಮತ ಪಡೆದಿದ್ದಾರೆ. 36,118ಮತಗಳ ಮುನ್ನಡೆಯನ್ನು ಬಿಜೆಪಿ ಸಾಧಿಸಿದೆ.
ಮೊದಲ ಸುತ್ತಿನಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಬಳಿಕ ಎರಡು, ಮೂರು, ನಾಲ್ಕು, ಐದು, ಆರು, ಏಳು, ಎಂಟು, ಒಂಭತ್ತು ಮತ್ತು ಹತ್ತನೇ ಸುತ್ತಿನಲ್ಲಿ ಹಿನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಸುತ್ತಿನಿಂದ ಸುತ್ತಿಗೆ ಅಂತರವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. 36,118ಮತಗಳ ಅಂತರ ಕಾಯ್ದುಕೊಂಡಿದ್ದಾರೆ.

ಬಿಜೆಪಿಯ ಗೋವಿಂದ ಕಾರಜೋಳ, ಕಾಂಗ್ರೆಸ್‌ನ ಬಿ.ಎನ್.ಚಂದ್ರಪ್ಪ ಸೇರಿ 20 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಯ ನಡುವೆ ನೇರ ಹಣಾಹಣಿ ನಡೆದಿದ್ದು, ವಿಜಯದ ಮಾಲೆ ಬಹುತೇಕ ಬಿಜೆಪಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಕೊರಳನ್ನು ಅಲಂಕರಿಸುವ ಕ್ಷಣ ಶುರುವಾಗಿದೆ.
