Connect with us

ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ | ದೇಶದ ಅಭಿವೃದ್ಧಿ ದೃಷ್ಟಿಯಿಂದ ಎರಡು ಪಕ್ಷಗಳ ಸಮಾಗಮ

ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ

ಲೋಕಸಮರ 2024

ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ | ದೇಶದ ಅಭಿವೃದ್ಧಿ ದೃಷ್ಟಿಯಿಂದ ಎರಡು ಪಕ್ಷಗಳ ಸಮಾಗಮ

CHITRADURGA NEWS | 09 APRIL 2024

ಚಿತ್ರದುರ್ಗ: ನಗರದ ಉಮಾಪತಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಬಿಜೆಪಿಜೆಡಿಎಸ್ ಸಮನ್ವಯ ಸಮಿತಿ ಹಾಗೂ ಲೋಕಸಭಾ ಚುನಾವಣೆ ಮಹತ್ವದ ಸಭೆ ಜರುಗಿತು.

ಇದನ್ನೂ ಓದಿ: ನಾಲ್ವರು ಪಕ್ಷೇತರರಿಂದ ನಾಮಪತ್ರ ವಾಪಾಸು 20 ಅಭ್ಯರ್ಥಿಗಳು ಕಣದಲ್ಲಿ

ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ದೇಶದ ಅಭಿವೃದ್ಧಿಗೆ ಭಾರತ ಸುರಕ್ಷಿತವಾಗಿರಬೇಕಾದರೆ ಮೊತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು, ಕಾರ್ಯಕರ್ತರು ಪ್ರತಿ ಮನೆ ಮನೆಗೆ ಹೋಗಿ ಯುದ್ದೋಪಾದಿಯಲ್ಲಿ ಸೈನಿಕರಂತೆ ಕೆಲಸ ಮಾಡಿ ಎಂದು ಹೇಳಿದರು.

ಬಿಜೆಪಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಜಾರಿಗೆ ತಂದ ಎಲ್ಲಾ ಯೋಜನೆಗಳನ್ನು ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ರದ್ದುಪಡಿಸಿ ಭಂಡತನದ ಭಾಷಣ ಮಾಡುತ್ತಿರುವುದಕ್ಕೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ.

ನೂರಾರು ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಬಡವರ ಮಕ್ಕಳು ಡಾಕ್ಟರ್ಗಳಾಗಬೇಕೆಂದು ಮೋದಿ ಮೆಡಿಕಲ್ ಕಾಲೇಜುಗಳ ನಿರ್ಮಾಣಕ್ಕೆ ಒತ್ತು ಕೊಟ್ಟ ಪ್ರಯುಕ್ತ ಹತ್ತು ವರ್ಷಗಳಲ್ಲಿ ಒಂದು ಲಕ್ಷದ ಐವತ್ತು ಸಾವಿರ ಡಾಕ್ಟರ್ಗಳು ಹೊರ ಬಂದಿದ್ದಾರೆ.

ಇದನ್ನೂ ಓದಿ: ಬಾಡೂಟ ಸೇವಿಸಿ ಅಸ್ವಸ್ಥರಾದವರ ಆರೋಗ್ಯ ವಿಚಾರಿಸಿದ ಶ್ರೀಗಳು

ಮೋಸಗಾರ ಪಕ್ಷ ಕಾಂಗ್ರೆಸ್ನ್ನು ನಂಬಬೇಡಿ. ಜಾತಿ ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತುವುದು ಕಾಂಗ್ರೆಸ್ ಜಾಯಮಾನ. ಪ್ರಧಾನಿ ಮೋದಿರವರು ಎಂದಿಗೂ ಜಾತಿ ಧರ್ಮವನ್ನು ಚುನಾವಣೆಗೆ ಬಳಸಿಕೊಳ್ಳಲಿಲ್ಲ. ಭಯೋತ್ಪಾದಕರನ್ನು ಹುಟ್ಟುಹಾಕಿದ್ದು, ಕಾಂಗ್ರೆಸ್.

ಮೋದಿ ಆಡಳಿತದಲ್ಲಿ ಭಯೋತ್ಪಾದಕರು ಬಿಲ ಸೇರಿದ್ದಾರೆ. ಕಾಂಗ್ರೆಸ್ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗೂ ಇಲ್ಲ. ಅದಕ್ಕಾಗಿ ಮೋದಿ ಕೈಬಲಪಡಿಸಿ ಮೂರನೆ ಬಾರಿಗೆ ಪ್ರಧಾನಿಯಾಗಲು ಸಹಕರಿಸಿ ಎಂದು ಕಾರ್ಯಕರ್ತರಲ್ಲಿ ಗೋವಿಂದ ಕಾರಜೋಳ ವಿನಂತಿಸಿದರು.

ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ, ಗೋವಿಂದ ಕಾರಜೋಳರವರು ನೀರಾವರಿ ಸಚಿವರಾಗಿದ್ದಾಗ ರೈತರಿಗೆ ಅನೇಕ ಚೆಕ್ಡ್ಯಾಂಗಳನ್ನು ಕೊಟ್ಟಿದ್ದಾರೆ. ಅಪ್ಪರ್ಭದ್ರಾಗೆ ಕೇಂದ್ರ ಸರ್ಕಾರ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಬಿಡುಗಡೆಗೊಳಿಸುವಲ್ಲಿ ಇವರ ಪಾತ್ರ ಬಹಳಷ್ಟಿದೆ.

ನರೇಂದ್ರಮೋದಿಯನ್ನು ಮೂರನೆ ಬಾರಿಗೆ ದೇಶದ ಪ್ರಧಾನಿಯನ್ನಾಗಿ ಮಾಡಲು ಪ್ರಜೆಗಳು ಕಾಯುತ್ತಿದ್ದಾರೆ. ಪ್ರತಿ ಹಳ್ಳಿಯಲ್ಲಿಯೂ ಸಿ.ಸಿ. ರಸ್ತೆ ಆಗಿದೆ ಎಂದರೆ ಅದಕ್ಕೆ ಗೋವಿಂದ ಕಾರಜೋಳ ಕಾರಣ. ಹಾಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತಗಳಿಂದ ಗೆಲ್ಲಿಸಿ ಎಂದು ಎರಡು ಪಕ್ಷಗಳ ಕಾರ್ಯಕರ್ತರಲ್ಲಿ ಕೋರಿದರು.

ಇದನ್ನೂ ಓದಿ: ಮೂರು ದಿನಗಳಲ್ಲಿ ಮಳೆ ಸಾಧ್ಯತೆ

ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ಭಾರತೀಯ ಜನತಾಪಕ್ಷಕ್ಕೆ ತನ್ನದೆ ಆದ ಶಕ್ತಿಯಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು ಬಿಜೆಪಿ. ಜೊತೆ ಮೈತ್ರಿ ಮಾಡಿಕೊಂಡಿರುವುದು ಪಕ್ಷಕ್ಕೆ ಆನೆ ಬಲ ಬಂದಿದೆ. ಗೋವಿಂದ ಕಾರಜೋಳರವರು ಹೆಚ್ಚು ಮತಗಳ ಅಂತರದಿಂದ ಗೆಲ್ಲುವುದರಲ್ಲಿ ಸಂಶಯವಿಲ್ಲ. ಹೈಕಮಾಂಡ್ ತೀರ್ಮಾನಕ್ಕೆ ಬದ್ದನಾಗಿ ಅಭ್ಯರ್ಥಿ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ಮಾತನಾಡಿ, ದೇಶದ ಅಭಿವೃದ್ದಿ ದೃಷ್ಟಿಯಿಂದ ನಮ್ಮ ಪಕ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಬೂತ್ ಮಟ್ಟದಲ್ಲಿ ಉಭಯ ಪಕ್ಷಗಳು ಒಂದಾಗಿ ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಅಭ್ಯರ್ಥಿ ಗೋವಿಂದ ಕಾರಜೋಳರವರ ಗೆಲುವಿಗೆ ಪ್ರಾಮಾಣಿಕಾಗಿ ಶ್ರಮಿಸುತ್ತೇವೆಂದು ಹೇಳಿದರು.

ಇದನ್ನೂ ಓದಿ: ಅಡಿಕೆ ಧಾರಣೆ | ಚನ್ನಗಿರಿಯಲ್ಲಿ ರಾಶಿ ಬೆಲೆಯಲ್ಲಿ ಜಿಗಿತ

ಅಮಿತ್ಷಾ ಚಿತ್ರದುರ್ಗಕ್ಕೆ ಬಂದಾಗ ಮದಕರಿನಾಯಕ ಥೀಂ ಪಾರ್ಕ್ ನಿರ್ಮಾಣ ಮಾಡುವುದಾಗಿ ವಾಗ್ದಾನ ಮಾಡಿದ್ದರು. ಅದು ಮುನ್ನೆಲೆಗೆ ಬರುವಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ ಎಂದು ಬಿಜೆಪಿ. ಮುಖಂಡರುಗಳಲ್ಲಿ ಮನವಿ ಮಾಡಿದರು.

ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡುತ್ತ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ಸಸ್ ದೇಶಕ್ಕೆ ಗ್ಯಾರೆಂಟಿಯಾಗಿರುವ ನರೇಂದ್ರಮೋದಿ ನಡುವೆ ನಡೆಯುತ್ತಿರುವ ಲೋಕಸಭಾ ಚುನಾವಣೆಯನ್ನು ಪ್ರತಿಷ್ಟೆಯಾಗಿ ತೆಗೆದುಕೊಳ್ಳಬೇಕು.

ಭಾರತದ ಶತ್ರು ರಾಷ್ಟ್ರಗಳು ನರೇಂದ್ರಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗುವುದನ್ನು ತಡೆಯುವ ಹುನ್ನಾರ ನಡೆಸುತ್ತಿರುವುದನ್ನು ಮಾಧ್ಯಮಗಳು ಬಹಿರಂಗಪಡಿಸಿವೆ. ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಗೋವಿಂದ ಕಾರಜೋಳರವರನ್ನು ಎರಡು ಲಕ್ಷಗಳ ಮತಗಳ ಅಂತರದಿಂದ ಗೆಲ್ಲಿಸಿ ಮೋದಿ ಕೈಬಲಪಡಿಸಿ ಎಂದು ಕಾರ್ಯಕರ್ತರಲ್ಲಿ ಕೇಳಿಕೊಂಡರು.

ಇದನ್ನೂ ಓದಿ: ಬಸ್ ಪಲ್ಟಿ ಪ್ರಕರಣ | ಮೃತ ಮೂರು ಜನರ ಗುರುತು ಪತ್ತೆ

ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಜೆಡಿಎಸ್ ಜಿಲ್ಲಾಧ್ಯಕ್ಷ ಜಯಣ್ಣ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎನ್.ರವಿಕುಮಾರ್, ಜೆಡಿಎಸ್ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ತಾಲ್ಲೂಕು ಅಧ್ಯಕ್ಷ ತಿಮ್ಮಣ್ಣ, ಯುವ ಘಟಕದ ಅಧ್ಯಕ್ಷ ಪ್ರತಾಪ್ಜೋಗಿ, ಬಿಜೆಪಿ. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಸಿದ್ದಾಪುರ, ಸಂಪತ್ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಗದೀಶ್, ಡಾ.ಸಿದ್ದಾರ್ಥ, ನಗರಸಭೆ ಸದಸ್ಯರುಗಳಾದ ಹರೀಶ್, ಸುರೇಶ್, ದೀಪು ಇದ್ದರು.

Click to comment

Leave a Reply

Your email address will not be published. Required fields are marked *

More in ಲೋಕಸಮರ 2024

To Top
Exit mobile version