CHITRADURGA NEWS | 01 MARCH 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಮತ್ತೊಂದು ಕಚೇರಿ ತೆರೆಯುವವರಿಗೆ ನಿರಾಸೆ ಕಟ್ಟಿಟ್ಟಬುತ್ತಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಎಚ್ಚರಿಕೆ ನೀಡಿದರು.
ಚಿತ್ರದುರ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಎರಡು ಬಣಗಳಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದರು.
ಸಾಂದರ್ಭಿಕ ಬಿನ್ನಾಭಿಪ್ರಾಯ ಇರಬಹುದು ಕರೆದು ಮಾತನಾಡಿ ಸರಿಪಡಿಸುತ್ತೇವೆ. ಬಿಜೆಪಿಯಲ್ಲಿ ಎರಡು ಬಣವಿಲ್ಲ ಒಂದೇ ಬಣ ಅದು ಕಮಲ ಬಣ ಎಂದರು.

ಕ್ಲಿಕ್ ಮಾಡಿ ಓದಿ: https://chitradurganews.com/chitradurga-will-be-hit-by-water-shortage/
ಬಿಜೆಪಿ ಪ್ರಜಾಪ್ರಭುತ್ವ ಇರುವ ರಾಜಕೀಯ ಪಕ್ಷ. ಅಭಿಪ್ರಾಯಗಳು ಭಿನ್ನ ಇರುತ್ತವೆ. ಇಂತಹ ಕಡೆಗಳಲ್ಲಿ ಆರೋಗ್ಯಕರ ಪ್ರಜಾಪ್ರಭುತ್ವ ಇರುತ್ತದೆ ಎಂದರ್ಥ. ಚುನಾವಣೆಗಾಗಿ ಹೊಸ ಕಚೇರಿ ಆರಂಭಿಸುವುದು ಹಳೆಯ ಸುದ್ದಿ, ಪತ್ರಿಕಾಗೋಷ್ಠಿ ನಂತರ ಮಾತನಾಡಿಸಿದರೆ ಈ ಸತ್ಯ ಗೊತ್ತಾಗಲಿದೆ. ಹೀಗಾಗಿ ಚುನಾವಣಾ ಕಚೇರಿ ಆರಂಭಿಸಿದವರಿಗೆ ನಿರಾಸೆ ಕಟ್ಟಿಟ್ಟ ಬುತ್ತಿ ಎಂದರು.
ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಜಿಲ್ಲಾಧ್ಯಕ್ಷ ಎ.ಮುರುಳಿ, ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್, ಸಂಪತ್, ಯುವ ಮೋರ್ಚಾ ನಗರ ಅಧ್ಯಕ್ಷ ರಾಮು, ವಕ್ತಾರರಾದ ದಗ್ಗೆ ಶಿವಪ್ರಕಾಶ್, ತಿಪ್ಪೇಸ್ವಾಮಿ ಇತರರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
