By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಬಿಜೆಪಿ ಪ್ರತಿಭಟನೆ | ಜಿಲ್ಲೆಯಿಂದ 250 ಮಂದಿ ಭಾಗೀ | ಎ.ಮುರುಳಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಬಿಜೆಪಿ ಪ್ರತಿಭಟನೆ | ಜಿಲ್ಲೆಯಿಂದ 250 ಮಂದಿ ಭಾಗೀ | ಎ.ಮುರುಳಿ

ಮುಖ್ಯ ಸುದ್ದಿ

ಬಿಜೆಪಿ ಪ್ರತಿಭಟನೆ | ಜಿಲ್ಲೆಯಿಂದ 250 ಮಂದಿ ಭಾಗೀ | ಎ.ಮುರುಳಿ

News Desk Chitradurga News
Last updated: 1 April 2025 20:23
News Desk Chitradurga News
3 months ago
Share
ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 01 APRIL 2025

ಚಿತ್ರದುರ್ಗ: ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಏಪ್ರಿಲ್ 2 ರಂದು ನಡೆಯಲಿರುವ ಬೆಲೆ ಏರಿಕೆಯ ಕಾಂಗ್ರೆಸ್ ಸರ್ಕಾರ ವಿರುದ್ಧ ಅಹೋರಾತ್ರಿ ಧರಣಿಗೆ ಚಿತ್ರದುರ್ಗ ಜಿಲ್ಲೆಯಿಂದ ಸುಮಾರು 250 ಜನ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ತಿಳಿಸಿದ್ದಾರೆ.

Also Read: ಯುಗಾದಿ ಜೂಜು | ಜಿಲ್ಲೆಯಲ್ಲಿ 850 ಜನರ ಬಂಧನ | ಪೊಲೀಸ್ ಇಲಾಖೆಯ ಭರ್ಜರಿ ಕಾರ್ಯಚರಣೆ

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೆಲೆ-ತೆರಿಗೆ ಹೆಚ್ಚಳದ ಮೂಲಕ ಬಡವರಿಗೆ ಬರೆ ಎಳೆಯುವ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ- ಪ್ರತಿಭಟನೆ ನಡೆಸಲಿದೆ.

ರಾಜ್ಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ, ಮುಸಲ್ಮಾನರಿಗೆ ಓಲೈಕೆ ಮಾತ್ರವಲ್ಲದೆ ಹಿಂದೂಗಳಿಗೆ ಅಪಮಾನ ಮಾಡಲಾಗಿದೆ. ಸರ್ಕಾರಿ ಕಾಮಗಾರಿಗಳಲ್ಲಿ ಮುಸಲ್ಮಾನರಿಗೆ ಶೇ.4 ಮೀಸಲಾತಿ ನೀಡಿದ್ದು, ಕಾನೂನಿನ ವಿರುದ್ಧವಾಗಿದೆ.

ಉನ್ನತ ಶಿಕ್ಷಣಕ್ಕೆ ಹೊರದೇಶಕ್ಕೆ ಹೋಗುವ ಮುಸಲ್ಮಾನ ವಿದ್ಯಾರ್ಥಿಗಳಿಗೆ 20 ಲಕ್ಷ ಇದ್ದುದನ್ನು 30 ಲಕ್ಷಕ್ಕೆ ಏರಿಸಿದ್ದಾರೆ. ಹಿಂದೆ ಮುಸಲ್ಮಾನ ಹೆಣ್ಮಕ್ಕಳಿಗೆ ಶಾದಿ ಭಾಗ್ಯ ನೀಡಿದ್ದರು. ಇದೀಗ ಮುಸ್ಲಿಂ ಹೆಣ್ಮಕ್ಕಳ ಆತ್ಮರಕ್ಷಣೆಗೆ ನೂರಾರು ಕೋಟಿಯನ್ನು ರಾಜ್ಯ ಸರ್ಕಾರ ವೆಚ್ಚ ಮಾಡುತ್ತಿದೆ. ಇಮಾಮರ ವೇತನ ಹೆಚ್ಚಿಸಿದ್ದಾರೆ. ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚುವ ಸರ್ಕಾರ ಇದಾಗಿದೆ ಎಂದು ದೂರಿದ್ದಾರೆ.

Also Read: ಕರ್ತವ್ಯ ಲೋಪ | ಶುಶ್ರೂಷಾಧಿಕಾರಿ ಎಸ್.ಸಿದ್ದೇಶ್ವರ ಅಮಾನತು

ಕೇವಲ ಮುಸ್ಲಿಮರಿಗೆ ಮಾತ್ರ ಇಂಥ ಯೋಜನೆಗಳು ಏಕೆ? ಮೋದಿಜೀ ಅವರು ಜನಧನ ಸೇರಿ ಹಲವು ಯೋಜನೆ ಜಾರಿಗೊಳಿಸಿದ್ದು, ಎಲ್ಲರಿಗೂ ಅವಕಾಶ ನೀಡಿದ್ದಾರೆ.

ಯಡಿಯೂರಪ್ಪ ಅವರು ಭಾಗ್ಯಲಕ್ಷ್ಮಿ ಯೋಜನೆಯನ್ನು ಹಿಂದೂಗಳಿಗೆ ಮಾತ್ರ ಕೊಟ್ಟಿಲ್ಲ. ಮುಸ್ಲಿಮರು ಸೇರಿ ಎಲ್ಲರಿಗೂ ಕೊಟ್ಟಿದ್ದರು. ಹಿಂದೂಗಳ ಅವಮಾನವನ್ನು ನಾವು ಖಂಡಿಸುತ್ತೇವೆ. ಸಿದ್ದರಾಮಯ್ಯನವರು ಹಾಲುಮತ ಸಮುದಾಯ, ಕಾಯಕ ಸಮುದಾಯಗಳ ನಿರ್ಲಕ್ಷಿಸಿದ್ದಾರೆ.

ಪರಿಶಿಷ್ಟ ಜಾತಿ, ಪಂಗಡಗಳನ್ನು ಮತಬ್ಯಾಂಕ್ ಮಾಡಿಕೊಂಡ ಕಾಂಗ್ರೆಸ್ಸಿನವರು ಅವರಿಗೆ ಅನ್ಯಾಯ ಮಾಡುತ್ತಿದೆ. ಇದರ ವಿರುದ್ಧ ಹೋರಾಟ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಕಾoಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿoದ ಬೆಲೆ ಏರಿಕೆ ನಿರಂತರವಾಗಿದೆ. ಪೆಟ್ರೋಲ್, ಡೀಸೆಲ್, ಸ್ಟಾಂಪ್ ಶುಲ್ಕ, ಹಾಲಿನ ದರ, ಮೆಟ್ರೊ ದರ ಏರಿಸುವ ಮೂಲಕ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಜನಸಾಮಾನ್ಯರ ಮೇಲೆ ಬರೆ ಹಾಕುತ್ತಿದೆ.

Also Read: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ | ಇಬ್ಬರು ಸಾವು | ಮೂವರಿಗೆ ಗಾಯ

ದೇಶದಲ್ಲೇ ಅತ್ಯಂತ ದುಬಾರಿ ಜೀವನವನ್ನು ಈ ನಾಡಿನ ಜನ ನಡೆಸಬೇಕಾದ ದುಸ್ಥಿತಿಗೆ ಕಾಂಗ್ರೆಸ್ ಕಾರಣವಾಗಿದೆ. ಸೇವಿಸುವ ಗಾಳಿಯೊಂದನ್ನು ಬಿಟ್ಟರೆ ಉಳಿದೆಲ್ಲವುಗಳ ದರ ಏರಿಸಲಾಗಿದೆ. ಸಾಮಾನ್ಯ ಜನರು, ರೈತರ ಸಂಕಷ್ಟ ಅರ್ಥ ಮಾಡಿಕೊಳ್ಳದ ಸರ್ಕಾರ ಇದು ಎಂದಿದ್ದಾರೆ.

ಏಪ್ರಿಲ್ 2 ರಂದು ಬೆಳಿಗ್ಗೆ 11 ಗಂಟೆಯಿoದ ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಅಹೋರಾತ್ರಿ ಧರಣಿ. ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿದ್ದನ್ನು ಆಕ್ಷೇಪಿಸಿ ಅದೇ ದಿನ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ.

ಇದರಲ್ಲಿ ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ಎಲ್ಲ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ.

Also Read: ಖಾಲಿ ಹೊಟ್ಟೆಯಲ್ಲಿ ಈ 5 ಆಹಾರಗಳನ್ನು ಸೇವಿಸುತ್ತೀದ್ದೀರಾ…? ಹುಷಾರು!

ರಾಜ್ಯ ಹೋರಾಟಕ್ಕೆ ಚಿತ್ರದುರ್ಗ ಜಿಲ್ಲೆಯಿಂದ 250 ಜನ ಜಿಲ್ಲಾ ಮಟ್ಟ ಹಾಗೂ ಮಂಡಲದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:bengaluruBJPChitradurgaChitradurga newsChitradurga UpdatesKannada Latest NewsKannada NewsPrice hikeprotestState Governmentಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರತಿಭಟನೆಬಿಜೆಪಿಬೆಂಗಳೂರುಬೆಲೆ ಏರಿಕೆರಾಜ್ಯ ಸರ್ಕಾರ
Share This Article
Facebook Email Print
Previous Article suspended ಕರ್ತವ್ಯ ಲೋಪ | ಶುಶ್ರೂಷಾಧಿಕಾರಿ ಎಸ್.ಸಿದ್ದೇಶ್ವರ ಅಮಾನತು 
Next Article Chandramm ಹನುಮಲಿ ಷಣ್ಮುಖಪ್ಪ ಅವರ ತಾಯಿ ನಿಧನ | ಏ.2 ರಂದು ಅಂತ್ಯಕ್ರಿಯೆ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 17 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಹಠಾತ್ ಆರ್ಥಿಕ ಲಾಭ, ದೂರದ ಪ್ರಯಾಣ
Dina Bhavishya
arecanut price list
ಅಡಿಕೆ ಧಾರಣೆ | ಜೂನ್‌ 16 | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
ಅಡಕೆ ಧಾರಣೆ
UPSC ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಪಾಪೇಶ್ ಅವಿರೋಧ ಆಯ್ಕೆ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?

Not a member? Sign Up