
ಚಿತ್ರದುರ್ಗ ನ್ಯೂಸ್.ಕಾಂ:
ಹೊಸದುರ್ಗ: ಬರಗಾಲ, ಬೆಲೆ ಏರಿಕೆ, ರೈತ ಪರ ಯೋಜನೆಗಳನ್ನು ರದ್ದು ಮಾಡಿರುವುದು ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರದ ಕೊಡುಗೆಗಳು ಎಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ನೇತೃತ್ವದಲ್ಲಿ ಶುಕ್ರವಾರ ಹೊಸದುರ್ಗ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಎಂಎಲ್ಸಿ ಕೆ.ಎಸ್.ನವೀನ್ ಮಾತನಾಡಿ, ರಾಜ್ಯದಲ್ಲಿ ಈ ಸರ್ಕಾರ ಅಸ್ತಿತ್ವಕ್ಕೆ ಬಂದು 100 ದಿನಗಳಲ್ಲೇ ವಿದ್ಯುತ್ ಅಭಾವ ತಲೆದೂರಿದೆ. ಅನಿಯಮಿತವಾಗಿ ಲೋಡ್ ಶೆಡ್ಡಿಂಗ್ ಮಾಡುತ್ತಿದ್ದಾರೆ, ಹಿಂದಿನ ಬಿಜೆಪಿ ಸರ್ಕಾರ ರೈತರ ಮಕ್ಕಳಿಗಾಗಿ ವಿದ್ಯಾನಿಧಿಯಂತಹ ಯೋಜನೆಗಳನ್ನು ಜಾರಿ ಮಾಡಿತ್ತು. ಕಿಸಾನ್ ಸಮ್ಮಾನ್ ನಿಧಿ ಕೊಡುತ್ತಿತ್ತು. ಆದರೆ, ಈ ಸರ್ಕಾರ ಎಲ್ಲ ಯೋಜನೆಗಳನ್ನು ನಿಲ್ಲಿಸುವ ಮೂಲಕ ರೈತರ ಪಾಲಿಗೆ ಮರಣ ಶಾಸನ ಬರೆಯಲು ಹೊರಟಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರ ಆಕ್ರೋಶ | ಡಿಸಿ ಕಚೇರಿ ಎದುರು ಸರ್ಕಾರದ ವಿರುದ್ಧ ವಾಗ್ದಾಳಿ
ರಾಜ್ಯದ ಎಲ್ಲ ಜಲಾಶಯಗಳಲ್ಲಿ ನೀರು ಖಾಲಿಯಾಗಿದೆ. ಬರ ಆವರಿಸಿರುವುದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ಎಲ್ಲ ಅಧಿಕಾರಿಗಳನ್ನು ಚುರುಕಾಗಿ ಕೆಲಸ ಮಾಡುವಂತೆ ಮಾಡಬೇಕಾಗಿದೆ. ಮುಖ್ಯಮಂತ್ರಿಗಳು ಸಚಿವ ಸಂಪುಟದ ಎಲ್ಲ ಸಚಿವರಿಗೂ ಸಮರೋಪಾದಿಯಲ್ಲಿ ಕೆಲಸ ಮಾಡುವಂತೆ ಮಾಡಬೇಕಾಗಿದೆ. ಆದರೆ, ಸಿದ್ದರಾಮಯ್ಯ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ. ಅವರು ಕೇವಲ ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಅವರ ದೆಹಲಿ ನಾಯಕರನ್ನು ಓಲೈಕೆ ಮಾಡುವ ಕಸರತ್ತು ಮಾಡುತ್ತಿದ್ದಾರೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬುರುಡೆಕಟ್ಟೆ ಜಗದೀಶ್, ತಾಲೂಕು ಅಧ್ಯಕ್ಷ ಗೂಳಿಹಟ್ಟಿ ಜಗದೀಶ್, ರೈತ ಮೋರ್ಚಾ ಅಧ್ಯಕ್ಷ ಡಿ.ಟಿ.ಲಿಂಗರಾಜ್, ಹೆಬ್ಬಳ್ಳಿ ಮಲ್ಲಿಕಾರ್ಜುನ್, ಸ.ಚಾ.ಮಂಜಯ್ಯ, ಪ್ರಮುಖರಾದ ಡಿ.ಎಸ್.ಪ್ರದೀಪ್, ಶಿವಕುಮಾರ್, ಪ್ರಶಾಂತ್, ದಾಳಿಂಬೆ ಗಿರೀಶ್, ನಾಗರಾಜ್, ದೊಡ್ಡಯ್ಯ ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
