Connect with us

BJP protest: ರಾಹುಲ್ ಗಾಂಧಿ ‌ದೇಶದ ಜನರ ಕ್ಷಮೆ ಕೇಳಲಿ | ಬಿಜೆಪಿ ಕಾರ್ಯಕರ್ತರ ಆಗ್ರಹ

bjp protest

ಮುಖ್ಯ ಸುದ್ದಿ

BJP protest: ರಾಹುಲ್ ಗಾಂಧಿ ‌ದೇಶದ ಜನರ ಕ್ಷಮೆ ಕೇಳಲಿ | ಬಿಜೆಪಿ ಕಾರ್ಯಕರ್ತರ ಆಗ್ರಹ

CHITRADURGA NEWS | 13 SEPTEMBER 2024
ಚಿತ್ರದುರ್ಗ: ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಪರಿಶಿಷ್ಟ ಜಾತಿ, ವರ್ಗದವರ ಮೀಸಲಾತಿ ರದ್ದುಪಡಿಸುತ್ತೇವೆಂದು ರಾಹುಲ್‌ ಗಾಂಧಿ ವಿದೇಶದಲ್ಲಿ ನೀಡಿರುವ ಹೇಳಿಕೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿತು. ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಕಾಂಗ್ರೆಸ್, ರಾಹುಲ್‌ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

‘ರಾಹುಲ್‌ ಗಾಂಧಿ ಮೀಸಲಾತಿ ತೆಗೆಯುತ್ತೇವೆಂದು ಅಮೇರಿಕಾದಲ್ಲಿ ಹೇಳಿರುವುದನ್ನು ನೋಡಿದರೆ ದಲಿತರನ್ನು ಕೇವಲ ಮತಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆನ್ನುವುದು ಖಚಿತವಾಗಿದೆ. ದೇಶಕ್ಕೆ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ ಡಾ.ಬಿ.ಆರ್.ಅಂಬೇಡ್ಕರ್‌ ಅವರನ್ನು ಎರಡು ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಿಸಿದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲುತ್ತದೆ. ಎಸ್‌ಎಸ್‌ಪಿ. ಟಿಎಸ್‌ಪಿ ಯೋಜನೆಯ 25 ಸಾವಿರ ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸಿಕೊಂಡಿರುವುದು ಯಾವ ನ್ಯಾಯ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಟಿ.ಸುರೇಶ್‌ ಸಿದ್ದಾಪುರ ಪ್ರಶ್ನಿಸಿದರು?.

ಕ್ಲಿಕ್ ಮಾಡಿ ಓದಿ: ಸಂಜೆವರೆಗೂ ವಿದ್ಯುತ್ ಇರಲ್ಲ | ಕಾಮಗಾರಿ ಹಿನ್ನೆಲೆ

‘ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ₹ 187 ಕೋಟಿ ಲೂಟಿ ಹೊಡೆದಿರುವ ದಲಿತ ವಿರೋಧಿ ಕಾಂಗ್ರೆಸ್ ಡಾ.ಬಿ.ಆರ್‌.ಅಂಬೇಡ್ಕರ್‌ ಅಂತ್ಯಕ್ರಿಯೆಗೂ ಜಾಗ ಕೊಡಲಿಲ್ಲ. ರಾಹುಲ್‌ ಗಾಂಧಿ ತನ್ನ ಹೇಳಿಕೆ ಹಿಂಪಡೆದು ದೇಶದ ಜನರ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್‌ ಕುಮಾರ್‌, ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್, ವಕ್ತಾರ ನಾಗರಾಜ್ ಬೇದ್ರೆ, ಖಜಾಂಚಿ ಮಾಧುರಿ ಗಿರೀಶ್, ಶಿವಣ್ಣಾಚಾರಿ, ಎಸ್ಸಿ ಮೋರ್ಚಾ ಅಧ್ಯಕ್ಷ ತಿಪ್ಪೇಸ್ವಾಮಿ, ಮಂಜು, ಕೃಷ್ಣ, ಪ್ರಕಾಶ್‌, ಬಸವೇಶ್‌, ಶಂಭು, ಪಲ್ಲವಿ ಪ್ರಸನ್ನ, ಕಿರಣ್, ಪಾಂಡು, ಪರಶುರಾಮ್‌, ಭರತ್‌, ಜನಾರ್ಧನಸ್ವಾಮಿ, ರಾಮು, ವಸಂತ ಕುಮಾರ್‌, ವೀರೇಶ್‌ ಜಾಲಿಕಟ್ಟೆ, ನಗರಸಭೆ ಸದಸ್ಯರಾದ ಎಚ್‌.ಶ್ರೀನಿವಾಸ್‌, ಹರೀಶ್, ಪ್ರಭು, ಉದಯ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಶೈಲಜಾರೆಡ್ಡಿ, ಉಪಾಧ್ಯಕ್ಷೆ ಶ್ಯಾಮಲಾ ಶಿವಪ್ರಕಾಶ್‌, ಎಸ್ಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಭಾರ್ಗವಿ ದ್ರಾವಿಡ್‌, ಪ್ರಧಾನ ಕಾರ್ಯದರ್ಶಿ ಶಾಂತಮ್ಮ, ಬಸಮ್ಮ, ಭಾರತಿ, ವೀಣಾ, ರಜಿನಿ, ಕವನ, ಕವಿತ ಇದ್ದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version