CHITRADURGA NEWS | 18 AUGUST 2026
ಚಿತ್ರದುರ್ಗ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅನುದಾನ ದುರುಪಯೋಗ ಪ್ರಕರಣವನ್ನು ಖಂಡಿಸಿ ಹಾಗೂ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಹೊಳಲ್ಕೆರೆ ಮಂಡಲದ ನೇತೃತ್ವದಲ್ಲಿ ನಡೆದ ಎರಡನೇ ದಿನದ ಪ್ರತಿಭಟನೆಯಲ್ಲಿ ಬಿಜೆಪಿ ಉಪಾಧ್ಯಕ್ಷ ಡಾ. ಸಿದ್ದಾರ್ಥ ಗುಂಡಾರ್ಪಿ ಮಾತನಾಡಿ, ಅಕ್ರಮದ ಆರೋಪ ಎದುರಿಸುತ್ತಿರುವ ಹಾಗೂ ಜಾಮೀನಿನ ಮೇಲಿರುವ ಸಚಿವ ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಂಡಿರುವುದು ಕಾಂಗ್ರೆಸ್ ಸರ್ಕಾರದ ನೈತಿಕತೆಯ ಕೊರತೆಯನ್ನು ತೋರಿಸುತ್ತದೆ ಎಂದು ಟೀಕಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗವಾಗಿರುವ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು. ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೆ ಬಿ. ನಾಗೇಂದ್ರ ಅವರನ್ನು ಸಂಪುಟದಿಂದ ಹೊರಗಿಡಬೇಕು ಎಂದು ಆಗ್ರಹಿಸಿದರು.
ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮೀಸಲಿದ್ದ ಹಣವನ್ನು ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿದ ಅವರು, ಮನೆ, ಕೊಳವೆಬಾವಿ, ರಸ್ತೆ ಹಾಗೂ ಶಿಕ್ಷಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಬಳಕೆಯಾಗಬೇಕಿದ್ದ ಎಸ್‌ಸಿಪಿ, ಟಿಎಸ್‌ಪಿ ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಸಲಾಗಿದೆ ಎಂದು ದೂರಿದರು.
ಇದನ್ನೂ ಓದಿ: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ | ಆ.31 ಅರ್ಜಿ ಸಲ್ಲಿಸಲು ಕೊನೆಯ ದಿನ
ಬಡವರಿಗೆ ತಲುಪಬೇಕಾದ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸದೆ, ಸರ್ಕಾರ ರಾಜಕೀಯ ವಿಚಾರಗಳಲ್ಲಿ ತೊಡಗಿದೆ. ಜಿಲ್ಲೆಯಲ್ಲಿ ಪಿಂಚಣಿ ರದ್ದು ಹಾಗೂ ಜಮೀನಿಗಾಗಿ ಸಲ್ಲಿಸಿದ ಅರ್ಜಿಗಳ ತಿರಸ್ಕಾರ ಸೇರಿದಂತೆ ಹಲವು ಸಮಸ್ಯೆಗಳಿವೆ. ಕುಡಿಯುವ ನೀರಿನ ಸಮಸ್ಯೆಯ ನಡುವೆಯೂ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದ ಸಮಗ್ರ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಬಿ.ನಾಗೇಂದ್ರ ಅವರಿಂದ ರಾಜೀನಾಮೆ ಪಡೆದು ಸಂಪುಟದಿಂದ ಹೊರಗಿಡಬೇಕು. ಇಲ್ಲವಾದರೆ ಮುಂಬರುವ ಸ್ಥಳೀಯ ಹಾಗೂ ರಾಜ್ಯಮಟ್ಟದ ಚುನಾವಣೆಗಳಲ್ಲಿ ಜನರು ಸರ್ಕಾರಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿದರು.
ಹೊಳಲ್ಕೆರೆ ಮಂಡಲ ಬಿಜೆಪಿ ಅಧ್ಯಕ್ಷ ಡಿ.ಬಿ.ಕುಮಾರ್ ಮಾತನಾಡಿ, ನಾಗೇಂದ್ರ ಅವರ ವಿರುದ್ಧದ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ಪಕ್ಷದಿಂದ ತೀವ್ರ ವಿರೋಧ ವ್ಯಕ್ತಪಡಿಸಲಾಗುತ್ತಿದೆ. ಅವರು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದರು.
ಇದನ್ನೂ ಓದಿ: 2026-27ನೇ ಸಾಲಿನ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತಿಪ್ಪೇಸ್ವಾಮಿ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸೇರಿದ ಸುಮಾರು ₹187 ಕೋಟಿ ಅನುದಾನ ದುರುಪಯೋಗವಾಗಿದೆ ಎಂದು ಆರೋಪಿಸಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿದ್ದ ಎಸ್‌ಸಿಪಿ ಮತ್ತು ಟಿಎಸ್‌ಪಿ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಲಾಗಿದೆ ಎಂದು ದೂರಿದರು.
ರಾಜ್ಯಾದ್ಯಂತ ಬಿಜೆಪಿ ಹಾಗೂ ವಿವಿಧ ಸಮುದಾಯಗಳ ಒಕ್ಕೂಟದಿಂದ ಪ್ರತಿಭಟನೆ ಮುಂದುವರಿಯುತ್ತಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲೂ ಪ್ರತ್ಯೇಕ ಧರಣಿ ಸತ್ಯಾಗ್ರಹ ನಡೆಸಲಾಗುವುದು. ಸಚಿವರ ರಾಜೀನಾಮೆ ಹಾಗೂ ಸಮಗ್ರ ತನಿಖೆಗೆ ಆಗ್ರಹಿಸಿ ಹೋರಾಟವನ್ನು ತಾಲೂಕು ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: ಗೃಹಲಕ್ಷ್ಮಿ | 32ನೇ ಕಂತಿನ ಹಣ ಬಿಡುಗಡೆ
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್, ಹೊಳಲ್ಕೆರೆ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್, ಮಾಜಿ ಅಧ್ಯಕ್ಷ ಚಿತ್ರಲಿಂಗಪ್ಪ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಆರುಣ್ ಸೇರಿದಂತೆ ಪಕ್ಷದ ವಿವಿಧ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

