CHITRADURGA NEWS | 30 MAY 2025
ಚಿತ್ರದುರ್ಗ: ಕೇಂದ್ರ ಸರ್ಕಾರದ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರದ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Also Read: ತಮಿಳು ನಟ ಕಮಲಹಾಸನ್ ವಿವಾದಾತ್ಮಕ ಹೇಳಿಕೆ | ಕ್ಷಮೆ ಕೇಳುವಂತೆ ಕರವೇ ಪ್ರತಿಭಟನೆ
ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್‍ಕುಮಾರ್ ಮಾತನಾಡಿ, ಬಡವರು ಮತ್ತು ಮಧ್ಯಮ ವರ್ಗದವರಿಗೆ ಸುಲಭವಾಗಿ ಔಷಧಿಗಳು ಕೈಗೆಟುಕಲಿ ಎನ್ನುವ ಸದುದ್ದೇಶದಿಂದ ಕೇಂದ್ರ ಸರ್ಕಾರ ಜನೌಷಧಿ ಕೇಂದ್ರಗಳನ್ನು ತೆರೆದಿರುವುದು.
ರಾಜ್ಯ ಸರ್ಕಾರ ಉದ್ದೇಶಪೂರ್ವಕವಾಗಿ ಮುಚ್ಚಲು ತೀರ್ಮಾನಿಸಿರುವುದು ನಿಜಕ್ಕೂ ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ. ಯಾವುದೇ ಕಾರಣಕ್ಕೂ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡಬಾರದು ಎಂದು ಒತ್ತಾಯಿಸಿದರು.
Also Read: ಪೌರ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಜಿ.ಹೆಚ್.ತಿಪ್ಪಾರೆಡ್ಡಿ ಒತ್ತಾಯ
ಬಿಜೆಪಿ ಜಿಲ್ಲಾ ಖಜಾಂಚಿ ಮಾಧುರಿ ಗಿರೀಶ್, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶೈಲಜಾರೆಡ್ಡಿ ಮಾತನಾಡಿದರು.
ಪ್ರತಿಭಟನೆಯಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಲೋಕೇಶ್, ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗರಾಜ್, ವಕ್ತಾರ ನಾಗರಾಜ್‍ಬೇದ್ರೆ, ಮಾಧ್ಯಮ ಪ್ರಮುಖ ತಿಪ್ಪೇಸ್ವಾಮಿ ಛಲವಾದಿ, ನವೀನ್ ಚಾಲುಕ್ಯ, ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷ ವಿರುಪಾಕ್ಷಿ, ಬಸಮ್ಮ, ನಾಗರಾಜ್, ಶಾಂತಮ್ಮ, ಅರುಣ, ಗಾಯತ್ರಿ, ವೀಣ, ಕಾಂಚನ, ಕವಿತ, ಸುಮ, ಟಿ.ಬಸವರಾಜಪ್ಪ, ಭರತ್‍ಕುಮಾರ್, ಅಂಬೇಡ್ಕರ್ ದಲಿತ ಸೇನೆ ಕಾರ್ಯದರ್ಶಿ ರಿಶಿ ಪಾಲ್ಗೊಂಡಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
