ಮುಖ್ಯ ಸುದ್ದಿ
ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ
CHITRADURGA NEWS | 17 JUNE 2024
ಚಿತ್ರದುರ್ಗ: ರಾಜ್ಯ ಸರ್ಕಾರ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಿರುವುದನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ವತಿಯಿಂದ ಒನಕೆ ಓಬವ್ವ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ: ರೇಣುಕಸ್ವಾಮಿ ಮನೆಗೆ ಗೃಹ ಸಚಿವರ ಬಾಲ ಹಿಡಿದು ಬರ್ತಾರಾ | ಡಿ.ಸುಧಾಕರ್ ವಿರುದ್ಧ ಗೋವಿಂದ ಎಂ.ಕಾರಜೋಳ ವಾಗ್ದಾಳಿ
ಈ ವೇಳೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್‍ಕುಮಾರ್ ಮಾತನಾಡಿ, ವಿಧಾನಸಭೆ ಚುನಾವಣೆ ಪೂರ್ವದಲ್ಲಿಯೇ ಐದು ಉಚಿತ ಗ್ಯಾರೆಂಟಿಗಳನ್ನು ಘೋಷಿಸಿ ರಾಜ್ಯದ ಜನತೆಯನ್ನು ಮರಳು ಮಾಡಿ ಅಧಿಕಾರಕ್ಕೆ ಬಂದಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ಯಾರೆಂಟಿಗಳನ್ನು ನೀಡಲು ಹಣವಿಲ್ಲದೆ ಪೆಟ್ರೋಲ್-ಡೀಸೆಲ್ ಬೆಲೆಗಳನ್ನು ಹೆಚ್ಚಿಸಿ ಬಡವರ ಮೇಲೆ ಹೊರೆ ಹೇರಿದ್ದಾರೆ.
ಬಡವರ, ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.
ಇದನ್ನೂ ಓದಿ: ಗ್ಯಾರೆಂಟಿಗೆ ಹಣ ಹೊಂದಿಸಲು ಸರ್ಕಸ್ | ಸಂಸದ ಗೋವಿಂದ ಎಂ.ಕಾರಜೋಳ ವಾಗ್ದಾಳಿ
ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳದಿಂದ ಪ್ರಯಾಣ ದರ ಸೇರಿದಂತೆ ಸಾಗಾಣಿಕೆ ವೆಚ್ಚ ಏರಿಕೆಯಾಗುತ್ತದೆ. ತಕ್ಷಣವೇ ಬೆಲೆ ಏರಿಕೆ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿದರು.
ರೈತ ಮೋರ್ಚ ಜಿಲ್ಲಾಧ್ಯಕ್ಷ ವೆಂಕಟೇಶ್‍ಯಾದವ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿ ಸಂಭ್ರಮಾಚರಣೆಯಲ್ಲಿರುವ ಇದರ ಬೆನ್ನಲ್ಲೆ ಸ್ಟಾಂಪ್ ಡ್ಯೂಟಿ, ಮದ್ಯದ ಬೆಲೆ ಹೆಚ್ಚಿಸಿ ಬಡವರಿಗೆ ಬರೆ ಎಳೆದಿದೆ.
ಇದನ್ನೂ ಓದಿ: ಬಿಗ್ ಬಾಸ್ ನಲ್ಲಿ ‘ಡಿ’ ಬಾಸ್ ಗ್ಯಾಂಗ್ !
ಬಿಟ್ಟಿ ಭಾಗ್ಯಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರದಲ್ಲಿ ಬೊಕ್ಕಸ ಖಾಲಿಯಾಗಿದ್ದರೂ. ಸುಮ್ಮನೆ ಶೋ ಕೊಡುತ್ತಿದ್ದಾರೆ. ಡೀಸೆಲ್ 3.50 ರೂ. ಪೆಟ್ರೋಲ್ ಲೀ ಗೆ 3 ರೂ.ಗಳನ್ನು ಜಾಸ್ತಿ ಮಾಡಿ. ಬಡವರು, ಶ್ರೀಸಾಮಾನ್ಯನ ಜೇಬಿಗೆ ಕತ್ತರಿ ಹಾಕಿದೆ.
ರೈತರಿಗೆ ಬೀಜ, ರಸಗೊಬ್ಬರಗಳ ಕೊರತೆಯಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸರಣಿ ಕೊಲೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆಂದು ಎಚ್ಚರಿಸಿದರು.
ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಯಾಗಿ ಕೆಲಸ ಮಾಡ್ತಿನಿ | ಸಂಸದ ಗೋವಿಂದ ಎಂ.ಕಾರಜೋಳ
ಪ್ರತಿಭಟನೆಯಲ್ಲಿ ಬಿಜೆಪಿ ಎಸ್ಸಿ.ಮೋರ್ಚ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್‍ಕಾರಜೋಳ, ರೈತ ಮೋರ್ಚ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್ ಬೇದ್ರೆ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಇದ್ದರು.