Connect with us

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಖಂಡಿಸಿ ಬಿಜೆಪಿ ಪ್ರತಿಭಟನೆ

ಮುಖ್ಯ ಸುದ್ದಿ

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಖಂಡಿಸಿ ಬಿಜೆಪಿ ಪ್ರತಿಭಟನೆ

CHITRADURGA NEWS | 21 MARCH 2025

ಚಿತ್ರದುರ್ಗ: ಗುತ್ತಿಗೆಯಲ್ಲಿ ಮುಸ್ಲಿಮರಿಗೆ ರಾಜ್ಯ ಸರ್ಕಾರ ಶೇ.4ರಷ್ಟು ಮೀಸಲಾತಿ ನೀಡಿರುವುದನ್ನು ವಿರೋಧಿಸಿ ಬಿಜೆಪಿ ಜಿಲ್ಲಾ ಘಟಕದ ಕಾರ್ಯಕರ್ತರು ನಗರದ ಒನಕೆ ಓಬ್ಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

Also Read: SSLC ಪರೀಕ್ಷೆಗೆ 943 ವಿದ್ಯಾರ್ಥಿಗಳು ಗೈರು | ಗುಲಾಬಿ ಹೂ ಕೊಟ್ಟು ಸ್ವಾಗತಿಸಿದ ಡಿಸಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ನಡುವಳಿಯನ್ನು ಖಂಡಿಸಿ, ಪ್ರತಿಭಟನಾಕಾರರು ಸರ್ಕಾರದ ವಿರುದ್ದ ಭೀತ್ತಿ ಪತ್ರ ಹಿಡಿದು ಘೋಷಣೆ ಕೂಗಿದರು.

ಪ್ರತಿಭಟನೆಯಲ್ಲಿ ರಾಜ್ಯ ಎಸ್.ಸಿ. ಮೋರ್ಚಾದ ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವ ಸರ್ಕಾರ ಅಡಳಿತಕ್ಕೆ ಬಂದಾಗಿನಿಂದಲೂ ಸಹಾ ಪರಿಶಿಷ್ಟ ವರ್ಗ ಮತ್ತು ಪಂಗಡವನ್ನು ನಿರ್ಲಕ್ಷ್ಯ ಮಾಡುತ್ತಾ ಬಂದಿದ್ದಾರೆ.

ತಮ್ಮ ಗ್ಯಾರೆಂಟಿಗಳಿಗೆ ಇವರ ಅಭೀವೃದಿಗಾಗಿ ಮೀಸಲಿಟ್ಟಿದ್ದ ಹಣವನ್ನು ಬಳಕೆ ಮಾಡಿಕೊಂಡಿದ್ದಾರೆ. ಈಗ ಟೆಂಡರ್ ವಿಚಾರದಲ್ಲಿಯೂ ಸಹಾ ಮುಖ್ಯಮಂತ್ರಿಗಳು ಒಂದು ವರ್ಗದ ಓಲೈಕೆಗೆ ಮುಂದಾಗಿದ್ದಾರೆ.

Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?

ಟೆಂಡರ್ ಗಳನ್ನು ಎಲ್ಲಾ ವರ್ಗದವರು ಸಹಾ ಮಾಡುತ್ತಾ ಬಂದಿದ್ದಾರೆ ಈಗ ಹೂಸದಾಗಿ ಮುಸ್ಲಿಂ ಜನರನ್ನು ಓಲೈಕೆ ಮಾಡುವುದಕ್ಕಾಗಿ ಟೆಂಡರ್‍ನಲ್ಲಿ ಅವರಿಗಾಗಿ ಮೀಸಲಾತಿಯನ್ನು ನೀಡಿದ್ದಾರೆ.

ಇದು ಸರಿಯಾದ ಕ್ರಮವಲ್ಲ, ಸರ್ಕಾರ ಹಿಂಪಡೆಯಬೇಕು, ಇಲ್ಲವಾದಲ್ಲಿ ಬಿಜೆಪಿ ರಾಜ್ಯ ಮಟ್ಟದಲ್ಲಿ ಹೋರಾಟವನ್ನು ನಡೆಸುತ್ತದೆ ಎಂದು ಎಚ್ಚರಿಸಿದರು.

ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿ ಮಲ್ಲಿಕಾರ್ಜನ್ ಮಾತನಾಡಿ, ರಾಜ್ಯದಲ್ಲಿ ಆಡಳಿತವನ್ನು ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಸರ್ಕಾರವಾಗಿದೆ. ಪದೇ ಪದೇ ಹಿಂದುಗಳ ಮೇಲೆ ದೌರ್ಜನ್ಯವನ್ನು ನಡೆಸುತ್ತಾ ಬಂದಿದೆ.

ಮುಸ್ಲಿಂರನ್ನು ಓಲೈಕೆ ಮಾಡುವುದಕ್ಕಾಗಿ ಇದನ್ನು ಜಾರಿ ಮಾಡಲಾಗಿದೆ. ಇದರಿಂದ ಸಮಾಜದಲ್ಲಿ ಭೀನ್ನಾಭಿಪ್ರಾಯಗಳು ಮೂಡಿ ಬರುತ್ತವೆ. ಇದರಿಂದ ರಾಜ್ಯದಲ್ಲಿ ಆಶಾಂತಿಯ ವಾತಾವರಣ ಉಂಟಾಗುತ್ತದೆ. ಇದಕ್ಕೆ ಸಿದ್ದರಾಮಯ್ಯರವರು ಅವಕಾಶವನ್ನು ನೀಡಬಾರದು, ಈ ಕೂಡಲೇ ಮುಸ್ಲಿಂರಿಗೆ ನೀಡಿರುವ ಈ ಮೀಸಲಾತಿಯನ್ನು ಹಿಂಡೆಪಯಬೇಕು ಎಂದು ಆಗ್ರಹಿಸಿದರು.

Also Read: ಕಣಿವೆ ಮಾರಮ್ಮ ಜಾತ್ರೆ | ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ | ಭರತ್ ಪೈಲ್ವಾನ್

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಖಜಾಂಚಿ ಮಾಧುರಿ ಗೀರೀಶ್, ರಾಜ್ಯ ಮಹಿಳಾ ಮೋರ್ಚಾದ ಕಾರ್ಯದರ್ಶಿ ಶ್ಯಾಮಲಾ ಶಿವಪ್ರಕಾಶ್, ಮುಖಂಡ ಕುಮಾರಸ್ವಾಮಿ, ಜಿ.ಪಂ.ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಜಿಲ್ಲಾ ಪ್ರಧಾನ ಕಾರ್ಯದರ್ಶೀ ರಾಮದಾಸ್, ಜಿಲ್ಲಾ ಎಸ್.ಟಿ,ಮೋರ್ಚಾದ ಅಧ್ಯಕ್ಷ ಶಿವಣ್ಣ, ಎಸ್.ಸಿ.ಮೋರ್ಚಾದ ಅಧ್ಯಕ್ಷ ತಿಪ್ಪೇಸ್ವಾಮಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version