CHITRADURGA NEWS | 24 JULY 2026
ಚಿತ್ರದುರ್ಗ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹೋರಾಟದ ನೆಪದಲ್ಲಿ ಅರಾಜಕತೆ ಸೃಷ್ಟಿಸುತ್ತಿರುವ ಕಾಂಗ್ರೆಸ್ ವಿರುದ್ದ ಬಿಜೆಪಿ ಕಾರ್ಯಕರ್ತರು ನಗರದ ಒನಕೆ ಓಬವ್ವ ವೃತ್ತದಲ್ಲಿ ಶುಕ್ರವಾರ ಪ್ರತಿಭಟಿಸಿ ಕಾಂಗ್ರೆಸ್ ಗೂಂಡಾ ವರ್ತನೆ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
ಒನಕೆ ಓಬವ್ವ ವೃತ್ತದಲ್ಲಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಶಾಸಕ ಬಿ.ಪಿ.ಹರೀಶ್ ಹಾಗೂ ಮಾಜಿ ಮಂತ್ರಿ ಅಶ್ವಥ್‍ನಾರಾಯಣ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆಗಳನ್ನು ಎಸೆದಿರುವುದು ಖಂಡನೀಯ ಎಂದರು.
ನೇರವಾಗಿ ನಿಂತು ಹೋರಾಟ ಮಾಡುವ ಶಕ್ತಿಯಿಲ್ಲದ ಕಾಂಗ್ರೆಸ್‍ನವರು ಕದ್ದುಮುಚ್ಚಿ ಬಿಜೆಪಿ ನಾಯಕರ ಮೇಲೆ ಹಲ್ಲೆಗೆ ಮುಂದಾಗಿರುವುದಕ್ಕೆ ಕಾಂಗ್ರೆಸ್ ನಾಯಕರುಗಳು ಉತ್ತರಿಸಬೇಕು. ಆಡಳಿತ ಪಕ್ಷದ ವಿರುದ್ದ ವಿರೋಧ ಪಕ್ಷದವರು ಹೋರಾಟ ಮಾಡುವುದನ್ನು ತಡೆಯಲು ಪ್ರಜಾಪ್ರಭುತ್ವದಲ್ಲಿ ಅವಕಾಶವಿಲ್ಲ.
ದೆಹಲಿ ಹೋರಾಟದಲ್ಲಿ ಏಕಾಏಕಿ ರಾಹುಲ್‍ಗಾಂಧಿ ಕಾಣಿಸಿಕೊಂಡು ಪ್ರಧಾನಿ ಮೋದಿರವರ ನಿವಾಸದ ಎದುರು ಧರಣಿ ನಡೆಸಿ ಹೋರಾಟದ ಕೀರ್ತಿ, ಯಶಸ್ಸನ್ನು ಪಡೆಯಲು ಹೊರಟಿರುವುದರಲ್ಲಿ ಅರ್ಥವಿಲ್ಲ. ಕೊತ್ವಾಲ್ ಶಿಷ್ಯರಾಗಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಕರ್ನಾಟಕವನ್ನು ಗೂಂಡಾ ರಾಜ್ಯವನ್ನಾಗಿ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು.
ಇದನ್ನೂ ಓದಿ: 3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
ಮೂರು ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರ ನಡೆಸುತ್ತಿದೆ. ಉಳಿದ 22 ರಾಜ್ಯಗಳಲ್ಲಿ ಬಿಜೆಪಿ, ಎನ್‍ಡಿಎ ನೇತೃತ್ವದ ಸರ್ಕಾರಗಳು ಅಧಿಕಾರದಲ್ಲಿವೆ. ಹದಿಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಿಲ್ಲ. ವಿದ್ಯಾರ್ಥಿಗಳ ಹೋರಾಟವನ್ನು ಕಾಂಗ್ರೆಸ್ ನಾಯಕರು ಬೇರೆ ದಿಕ್ಕಿಗೆ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದಾರೆ. ದೇಶ ವಿಭಜಿಸುವ ಶಕ್ತಿಯನ್ನು ಮುಂದಿಟ್ಟುಕೊಂಡು ರಾಹುಲ್‍ಗಾಂಧಿ ದೇಶದಲ್ಲಿ ಅಶಾಂತಿಯನ್ನುಂಟು ಮಾಡುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೆಹಲಿಯ ಜಂತರ್-ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸಿದ ಹೋರಾಟದಲ್ಲಿ ಭಯೋತ್ಪಾದಕರು ಸೇರಿಕೊಂಡಿದ್ದಾರೆ. ವಿದೇಶಿ ಕೈಗೊಂಬೆಯಾಗಿರುವ ರಾಹುಲ್‍ಗಾಂಧಿ ಖಲಿಸ್ಥಾನಿಗಳನ್ನು ಜೊತೆಯಲ್ಲಿಟ್ಟುಕೊಂಡಿದ್ದಾರೆ. ಶಾಂತಿಪ್ರಿಯರನ್ನು ಪ್ರಚೋದಿಸಲು ನಾವು ಬಿಡುವುದಿಲ್ಲ ಕೆ.ಎಸ್.ನವೀನ್ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಿ.ಎಚ್.ಮೋಹನ್, ವೆಂಕಟೇಶ್‍ಯಾದವ್, ಡಾ.ಮಂಜುನಾಥ್, ಉಪಾಧ್ಯಕ್ಷರಾದ ರವಿಕುಮಾರ್, ಮಂಜುನಾಥ್, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್, ಮುಖಂಡರಾದ ನಾಗರಾಜ್, ಅರುಣ್‍ಕುಮಾರ್, ರೇಖಾ, ಭಾರ್ಗವಿ ದ್ರಾವಿಡ್, ಪರಶುರಾಂ, ಪ್ರಸಾದ್‍ಬಾಬು, ಶೈಲಜಾರೆಡ್ಡಿ, ದಗ್ಗೆ ಶಿವಪ್ರಕಾಶ್, ಲೋಕೇಶ್, ಶಂಭು ಇತರರಿದ್ದರು.
ಕಾಂಗ್ರೆಸ್ ಕಚೇರಿ ಎದುರು ಹೈಡ್ರಾಮ:
ಒನಕೆ ಓಬವ್ವ ವೃತ್ತದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ನಾಯಕರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಬರದ ನಾಡಲ್ಲಿ ಮುಖ್ಯಮಂತ್ರಿ ಪ್ರಗತಿ ಪರಿಶೀಲನಾ ಸಭೆ | ಅನುಭವ ಮಂಟಪದಲ್ಲಿ ಭರದ ತಯಾರಿ
ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ಚದುರಿಸಿದರು. ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಬಿಜೆಪಿ ವಿರುದ್ಧ ಘೋಷಣೆ ಕೂಗಲು ಯತ್ನಿಸಿದಾಗ ಪೊಲೀಸರು ಅವರನ್ನು ಕಚೇರಿಯ ಒಳಗೆ ಕರೆದೊಯ್ದರು. ಬಿಜೆಪಿಯ ಮಹಿಳಾ ಕಾರ್ಯಕರ್ತೆಯರಾದ ರೇಖಾ, ಭಾರ್ಗವಿ ದ್ರಾವಿಡ್ ಇತರರು ಪೊಲೀಸರಿಂದ ನುಸುಳಿ ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದರು. ಈ ವೇಳೆ ಮಹಿಳಾ ಪೊಲೀಸರು ತಡೆದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

