Connect with us

    ಹೊಳಲ್ಕೆರೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ | ಕಾಂಗ್ರೆಸ್ ವಿರುದ್ಧ ಹರಿಹಾಯ್ದ ವಿಜಯೇಂದ್ರ

    ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮಾವೇಶ ಉದ್ಘಾಟಿಸಿದರು.

    ಹೊಳಲ್ಕೆರೆ

    ಹೊಳಲ್ಕೆರೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ | ಕಾಂಗ್ರೆಸ್ ವಿರುದ್ಧ ಹರಿಹಾಯ್ದ ವಿಜಯೇಂದ್ರ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 12 APRIL 2024

    ಹೊಳಲ್ಕೆರೆ: ಬಿಜೆಪಿಯ ಭದ್ರಕೋಟೆ ಎಂದೇ ಹೆಸರಾಗಿರುವ ಹೊಳಲ್ಕೆರೆಯ ಕೊಟ್ರೆ ನಂಜಪ್ಪ ಕಾಲೇಜು ಆವರಣದಲ್ಲಿ ಶುಕ್ರವಾರ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಮಾವೇಶ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮಾವೇಶ ಉದ್ಘಾಟಿಸಿದರು.

    ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಹಿರಿಯ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಭರ್ಜರಿ ಮತಗಳ ಅಂತರದಿಂದ ಗೆಲ್ಲಿಸಲು ಮನವಿ ಮಾಡಿದರು.

    ಇದನ್ನೂ ಓದಿ: ಚಿತ್ರದುರ್ಗದಲ್ಲಿ ವಿಮಾನ ನಿಲ್ದಾಣಕ್ಕೆ ಆದ್ಯತೆ | ಗೋವಿಂದ ಕಾರಜೋಳ

    ದೇಶಕ್ಕೆ ಸಂವಿಧಾನ ನೀಡಿರುವ ಡಾ.ಬಿ.ಆರ್.ಅಂಬೇಡ್ಕರರನ್ನು ಚುನಾವಣೆಯಲ್ಲಿ ಸೋಲಿಸಿದ ಕಾಂಗ್ರೆಸ್ ಪಕ್ಷಕ್ಕೆ ಬಾಬಾ ಸಾಹೇಬರ ಹೆಸರು ಹೇಳುವ ನೈತಿಕತೆ ಇಲ್ಲ. ಅಂಬೇಡ್ಕರರ ಅಂತ್ಯಸಂಸ್ಕಾರಕ್ಕೂ ಜಾಗ ಕೊಡದೆ ಅಗೌರವ ತೋರಿಸಿದೆ ಎಂದು ವಿಜಯೇಂದ್ರ ಹರಿಹಾಯ್ದರು.

    ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದಾಗ ಜಾರಿಗೆ ತಂದ ಕಿಸಾನ್ ಸಮ್ಮಾನ್, ರೈತರ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವ ವಿದ್ಯಾಸಿರಿ ಯೋಜನೆಗಳಿಗೆ ಕಲ್ಲು ಹಾಕಿದ್ದಾರೆ. ರಾಜ್ಯದ ರೈತರಿಗೆ ಬೆಳೆ ನಷ್ಟಕ್ಕೆ, ಬರ ಪರಿಹಾರ ಕೊಡದೆ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ.

    ಇದನ್ನೂ ಓದಿ: ಲೋಕಸಭಾ ಚುನಾವಣಾ ಪ್ರಚಾರ ಅಖಾಡಕ್ಕೆ ಬಿ.ಎಸ್‌.ಯಡಿಯೂರಪ್ಪ | ಜಿಲ್ಲೆಯ ದೇವ ಮೂಲೆಯಿಂದ ಭರ್ಜರಿ ಎಂಟ್ರಿ

    ದೇಶದ ಒಂಬತ್ತು ರಾಜ್ಯಗಳಲ್ಲಿ ಬರಗಾಲವಿದೆ. ಅಲ್ಲಿನ ಮುಖ್ಯಮಂತ್ರಿಗಳೆ ಖಜಾನೆಯಿಂದ ಪರಿಹಾರ ನೀಡಿದ್ದಾರೆ. ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ನಯಾ ಪೈಸೆಯನ್ನು ಕೊಟ್ಟಿಲ್ಲ ಎಂದರು.

    ದೇಶದ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿದ್ದೆ ಕೆಡಿಸಿದೆ. ಈ ಬಾರಿ ರಾಜ್ಯದಲ್ಲಿ ಒಂದು ಕಡೆಯೂ ಕಾಂಗ್ರೆಸ್ ಗೆಲ್ಲಲಾಗದ ಸ್ಥಿತಿ ನಿರ್ಮಾಣವಾಗಿದೆ ಎಂದರು.

    ಇದನ್ನೂ ಓದಿ: ಹೊಸದುರ್ಗ ಆರ್.ಪಿ.ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ

    ದೇಶದ ಭವಿಷ್ಯ ರೂಪಿಸುವ ಚುನಾವಣೆ ಇದಾಗಿರುವುದರಿಂದ ಕಾರ್ಯಕರ್ತರು ಹಗಲು ರಾತ್ರಿ ಕೆಲಸ ಮಾಡಿ ನಮ್ಮ ಅಭ್ಯರ್ಥಿ ಗೋವಿಂದ ಕಾರಜೋಳರನ್ನು ಗೆಲ್ಲಿಸಿ ಎಂದ ಬಿ.ವೈ.ವಿಜಯೇಂದ್ರ ಯಾವ ಮುಖವಿಟ್ಟುಕೊಂಡು ಕಾಂಗ್ರೆಸ್ನವರು ಜನರ ಬಳಿ ಹೋಗಿ ಓಟು ಕೇಳುತ್ತಾರೆಂದು ವ್ಯಂಗ್ಯವಾಡಿದರು.

    ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ರೈತರು ತಮ್ಮ ಹೊಲಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಇಪ್ಪತ್ತೈದು ಸಾವಿರ ರೂ.ಗಳನ್ನು ಪಾವತಿಸಿದರೆ ಟ್ರಾನ್ಸ್‍ಫಾರ್ಮರ್ ಅಳವಡಿಸಿ ವೈರ್ ಎಳೆದು ವಿದ್ಯುತ್ ವ್ಯವಸ್ಥೆ ಕಲ್ಪಿಸಲಾಗುತ್ತಿತ್ತು. ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಲ್ಲಿ ರೈತರು ವಿದ್ಯುತ್ ಸಂಪರ್ಕ ಪಡೆಯಬೇಕಾದರೆ ಎರಡುವರೆಯಿಂದ ಮೂರು ಲಕ್ಷ ರೂ.ಗಳನ್ನು ಕಟ್ಟಬೇಕು. ಅಬಕಾರಿ ಶುಲ್ಕ ಜಾಸ್ತಿಯಾಗಿದೆ. ಬಸ್ ದರ ಏರಿಕೆ, ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಿಂದ ಕಸಿಯುವ ಕೆಲಸ ಮಾಡುತ್ತಿರುವ ಸಿದ್ದರಾಮಯ್ಯನವರದ್ದು ಮೊಸಳೆ ಕಣ್ಣೀರು ಎಂದು ಹೇಳಿದರು.

    ಇದನ್ನೂ ಓದಿ: PUC ಫಲಿತಾಂಶ | ಕೋಟೆನಾಡಿನಲ್ಲಿ ಶೇ.72.92 ರಷ್ಟು ವಿದ್ಯಾರ್ಥಿಗಳು ಪಾಸ್

    ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ನಂಬಿದವರಿಗೆ ಮೋಸ ಮಾಡುವ ಜಾಯಮಾನ ನಮ್ಮದಲ್ಲ. ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ನನ್ನ ಪುತ್ರ ಎಂ.ಸಿ.ರಘುಚಂದನ್ ಕೂಡ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದ. ಆದರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾತಿಗೆ ಬೆಲೆ ಕೊಟ್ಟು ಸುಮ್ಮನಾಗಿದ್ದೇವೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವುದಾಗಿ ಭರವಸೆ ನೀಡಿದರು.

    ಹೊಳಲ್ಕೆರೆಯ ಕೊಟ್ರೆ ನಂಜಪ್ಪ ಕಾಲೇಜು ಆವರಣದಲ್ಲಿ ಶುಕ್ರವಾರ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಮಾವೇಶ

    ಹೊಳಲ್ಕೆರೆಯ ಕೊಟ್ರೆ ನಂಜಪ್ಪ ಕಾಲೇಜು ಆವರಣದಲ್ಲಿ ಶುಕ್ರವಾರ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಮಾವೇಶ

    ಹೊಳಲ್ಕೆರೆ ಕ್ಷೇತ್ರದ ಎಲ್ಲಾ ಕೆರೆಗಳಿಗೆ ಅ.2 ರಂದು ನೀರು ತುಂಬಿಸಲಾಗುವುದು. ಅದಕ್ಕಾಗಿ ಎಲ್ಲಾ ಕೆರೆಗಳಿಗೆ ಪೈಪ್‍ಲೈನ್ ಅಳವಡಿಸಲಾಗಿದೆ. 400 ಕೋಟಿಗೂ ಹೆಚ್ಚು ಅನುದಾನ ತಂದಿದ್ದೇನೆ. ತುಂಗಭದ್ರಾ ಹಾಗೂ ಹಿರಿಯೂರಿನ ವಾಣಿವಿಲಾಸ ಸಾಗರದಿಂದ ನೀರು ತಂದು ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಪೂರೈಸಲಾಗುವುದು. ಎಲ್ಲಾ ಹಳ್ಳಿಗಳಲ್ಲಿ ಸಿಮೆಂಟ್ ರಸ್ತೆ ಮಾಡಿಸಿದ್ದೇನೆ. ಬ್ರಿಟೀಷರ ಕಾಲದ ಶಾಲೆಗಳನ್ನು ಕೆಡವಿ ಗುಣಮಟ್ಟದ ಕಟ್ಟಡಗಳನ್ನು ಕಟ್ಟಿಸಲಾಗಿದೆ. ತಲೆ ತಗ್ಗಿಸಿ ಎಂದಿಗೂ ರಾಜಕಾರಣ ಮಾಡಿದವನಲ್ಲ. ಬಿ.ವೈ.ವಿಜಯೇಂದ್ರರವರು ಮುಂದೆ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂಬ ವಿಶ್ವಾಸವಿದೆ ಎಂದರು.

    ಇದನ್ನೂ ಓದಿ:ಬಸ್‌ ನಿಲ್ದಾಣದಲ್ಲಿ ಯುಗಾದಿ ಚಂದ್ರ ದರ್ಶನ | ವಿಶೇಷ ಕ್ಷಣಕ್ಕೆ ಸಾಕ್ಷಿ

    ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮಾತನಾಡಿ, ಹತ್ತು ವರ್ಷಗಳ ಕಾಲ ದೇಶವನ್ನು ಮುನ್ನಡೆಸಿದ ಪ್ರಧಾನಿ ನರೇಂದ್ರಮೋದಿ ಯಾವುದೇ ಹಗರಣದಲ್ಲಿ ಸಿಕ್ಕಿಹಾಕಿಕೊಂಡಿಲ್ಲ. ಭ್ರμÁ್ಠಚಾರದ ಆಪಾದನೆಯಿಲ್ಲ. ಜಗತ್ತಿನ ಎಲ್ಲಾ ದೇಶಗಳು ಭಾರತದ ಸ್ನೇಹ ಬಯಸುವ ರೀತಿಯಲ್ಲಿ ಅಧಿಕಾರ ನಡೆಸಿದ್ದಾರೆ. ಬಿಜೆಪಿ ಸಾಧನೆಯನ್ನು ಮುಂದಿಟ್ಟುಕೊಂಡು ಬೂತ್ ಮಟ್ಟದಲ್ಲಿ ಮನೆ ಮನೆಗೆ ಹೋಗಿ ಧೈರ್ಯದಿಂದ ಮತ ಕೇಳಿ. ಮತಗಟ್ಟೆಗೆ ಮತದಾರರನ್ನು ಕರೆತಂದು ಮತ ಹಾಕಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ದೇಶದಲ್ಲಿ ಬಿಜೆಪಿ 400ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಬೇಕಿದೆ ಎಂದರು.

    ಯುವ ಮುಖಂಡ ಎಂ.ಸಿ.ರಘುಚಂದನ್ ಮಾತನಾಡಿ, ನಾನು ಕೂಡ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದೆ. ಆದರೆ ಟಿಕೇಟ್ ಸಿಗಲಿಲ್ಲ. ಪಕ್ಷದ ಹಿರಿಯರ ಮಾತಿಗೆ ನನ್ನ ತಂದೆಯವರು ಗೌರವ ಕೊಟ್ಟಿದ್ದರಿಂದ ಗೋವಿಂದ ಕಾರಜೋಳ ಅವರನ್ನು ಬೆಂಬಲಿಸಲು ತೀರ್ಮಾನಿಸಿದೆವು. ಅದರಂತೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದು ಹೇಳಿದರು.

    ಇದನ್ನೂ ಓದಿ: ಮತ್ತೆ 50 ಸಾವಿರದ ಗಡಿ ತಲುಪಿದ ಅಡಿಕೆ ರೇಟ್

    ಬೇರೆ ಬೇರೆ ಪಕ್ಷಗಳಿಂದ ನನಗೆ ಆಹ್ವಾನ ಬಂದಿತ್ತು. ಕಾರ್ಯಕರ್ತರ ಕತ್ತು ಕೊಯ್ದು ಹೋಗುವುದು ಸರಿಯಲ್ಲ. ನಂಬಿಕೆ ಉಳಿಸಿಕೊಂಡಿದ್ದೇನೆ. ಕೊಟ್ಟ ಮಾತಿನಿಂದ ಹಿಂದೆ ಸರಿಯಲ್ಲ. ಈ ಭಾಗದಲ್ಲಿ ಬಿಜೆಪಿ ಅರಳಬೇಕು. ಗೋವಿಂದ ಕಾರಜೋಳರನ್ನು ಎಲ್ಲರೂ ಸೇರಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿಕೊಳ್ಳೋಣ ಎಂದು ಕಾರ್ಯಕರ್ತರನ್ನು ಹುರಿದುಂಬಿಸಿದರು.

    ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಕೆ.ಎಸ್.ನವೀನ್, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಹೊಳಲ್ಕೆರೆ ಮಂಡಲ ಅಧ್ಯಕ್ಷ ಎಂ.ಬಿ.ಸಿದ್ದೇಶ್, ಭರಮಸಾಗರ ಮಂಡಲ ಅಧ್ಯಕ್ಷ ಶೈಲೇಶ್, ಜೆಡಿಎಸ್ ಜಿಲ್ಲಾಧ್ಯಕ್ಷ ಜಯಣ್ಣ, ಲೋಕಸಭಾ ಚುನಾವಣೆ ಸಂಚಾಲಕ ಎಸ್.ಲಿಂಗಮೂರ್ತಿ, ಬಿಜೆಪಿ ಮತ್ತು ಜೆಡಿಎಸ್ ಚುನಾಯಿತ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಿದ್ದರು.

    Click to comment

    Leave a Reply

    Your email address will not be published. Required fields are marked *

    More in ಹೊಳಲ್ಕೆರೆ

    To Top