ಮುಖ್ಯ ಸುದ್ದಿ
ಚಿತ್ರದುರ್ಗಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ

Published on
CHITRADURGA NEWS | 23 MAY 2024
ಚಿತ್ರದುರ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೇ.25 ರಂದು ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸುತ್ತಿರುವ ಅವರು, ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಪರ ಮತಯಾಚನೆ ಮಾಡಲಿದ್ದಾರೆ.

ಇದನ್ನೂ ಓದಿ: ವಿವಿ ಸಾಗರ ಜಲಾಶಯದ ಇಂದಿನ ಮಟ್ಟ | ಒಂದೇ ಮಳೆಗೆ ಒಂದೂವರೆ ಟಿಎಂಸಿ ನೀರು ಸಂಗ್ರಹ
ಮೇ.25 ಶನಿವಾರ ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯಲ್ಲಿರುವ ವಿನಾಯಕ ಕಲ್ಯಾಣ ಮಂಟಪದಲ್ಲಿ ಸಭೆ ಆಯೋಜಿಸಲಾಗಿದೆ.

ಸಭೆಗೆ ಶಿಕ್ಷಕ ಮತದಾರರು ಆಗಮಿಸಲಿದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಜಿಲ್ಲೆಯ ಹಲವಯ ನಾಯಕರು ಭಾಗವಹಿಸಲಿದ್ದಾರೆ.
Continue Reading
Related Topics:B.Y.Vijayendra, BJP, Chitradurga, Kannada News, Legislative Council Election, State President, Y.A.Narayanaswamy, ಕನ್ನಡ ಸುದ್ದಿ, ಚಿತ್ರದುರ್ಗ, ಬಿ.ವೈ.ವಿಜಯೇಂದ್ರ, ಬಿಜೆಪಿ, ರಾಜ್ಯಾಧ್ಯಕ್ಷ, ವಿಧಾನ ಪರಿಷತ್ ಚುನಾವಣೆ, ವೈ.ಎ.ನಾರಾಯಣಸ್ವಾಮಿ

Click to comment