CHITRADURGA NEWS | 21 JANUARY 2024
ಚಿತ್ರದುರ್ಗ: ಜನವರಿ 23 ರಂದು ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ತ್ವರಿತಗೊಳಿಸಲು ಒತ್ತಾಯಿಸಿ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕರೆ ನೀಡಿರುವ ಚಿತ್ರದುರ್ಗ ನಗರ ಬಂದ್‍ಗೆ ಬಿಜೆಪಿ ಬೆಂಬಲ ವ್ಯಕ್ತಪಡಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ತಿಳಿಸಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭದ್ರಾ ಯೋಜನೆಗೆ ಮೊದಲು ಅನುದಾನ ಬಿಡುಗಡೆ ಮಾಡಿದ್ದೇ ಬಿಜೆಪಿ ಎಂದರು.
ಇದನ್ನೂ ಓದಿ: ಜನವರಿ 23ಕ್ಕೆ ಚಿತ್ರದುರ್ಗ ಬಂದ್ | ಭದ್ರಾ ಮೇಲ್ದಂಡೆ ತ್ವರಿತ ಅನುಷ್ಠಾನಕ್ಕೆ ಆಗ್ರಹ
ರಾಜ್ಯದಲ್ಲಿ ಎರಡು ಬಾರಿ ಅಧಿಕಾರದಲ್ಲಿದ್ದಾಗಲೂ ಆಗ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದ ಗೌಡರು ಸಾಕಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ. ಆದರೆ, ಕಾಂಗ್ರೆಸ್ ಅವಧಿಯಲ್ಲಿ ಯೋಜನೆ ನನೆಗುದಿಗೆ ಬಿದ್ದಿದೆ ಎಂದು ದೂರಿದರು.
ಕೇಂದ್ರದ ದುಡ್ಡು ಕಾಮಗಾರಿಗಲ್ಲ: ರೈತರ ಜಮೀನುಗಳಿಗೆ ನೀರು ಹರಿಸಲು:
ಕೇಂದ್ರ ಸರ್ಕಾರ ತನ್ನ ಬಜೆಟ್‍ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗಾಗಿ 5300 ಕೋಟಿ ರೂ.ಗಳನ್ನು ಘೋಷಣೆ ಮಾಡಿದೆ. ಆದರೆ, ಕಾಂಗ್ರೆಸ್ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ.
ಕೇಂದ್ರದ ಹಣ ಬರುವುದು ಈ ಯೋಜನೆ ಪೂರ್ಣಗೊಂಡ ಬಳಿಕ ಕೃಷಿ ಸಿಂಚಾಯಿ ಯೋಜನೆಯಡಿ ರೈತರ ಜಮೀನುಗಳಿಗೆ ನೀರು ಹರಿಸಲು ಎಂದು ಕೆ.ಎಸ್.ನವೀನ್ ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಅಯೋಧ್ಯೆ ತಲುಪಿದ ಕೋಟೆನಾಡಿನ ಮಠಾಧೀಶರು ಏನು ಹೇಳಿದ್ದಾರೆ ಗೊತ್ತಾ..?
ರಾಜ್ಯ ಸರ್ಕಾರವೂ ತನ್ನ ಬಜೆಟ್‍ನಲ್ಲಿ 2,700 ಕೋಟಿ ರೂ. ಮೀಸಲಿಟ್ಟಿದೆ. ಆದರೆ, ಎಷ್ಟು ಬಿಡುಗಡೆ ಮಾಡಿದೆ, ಕಾಮಗಾರಿ ಯಾವ ಹಂತದಲ್ಲಿದೆ ಎಂಬುದನ್ನು ಸ್ಪಷ್ಟಪಡಿಸುತ್ತಿಲ್ಲ. ಮೊದಲು ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದಾಖಲೆ ಸಮೇತ ಮಾಹಿತಿ ನೀಡಲಿ. ಚಿತ್ರದುರ್ಗಕ್ಕೆ ಅವರು ಭೇಟಿ ನೀಡಿದರೆ, ನಾನೇ ಪ್ರಶ್ನಿಸುತ್ತೇನೆ ಎಂದರು.
50 ವರ್ಷದ ಹೋರಾಟದ ಫಲವಾಗಿ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ನಡೆಯುತ್ತಿದೆ. ವಾಣಿವಿಲಾಸ ಸಾಗರ ಜಲಾಶಯಕ್ಕೆ ನೀರು ಹರಿಯಲು ಬಿಜೆಪಿ ಕಾರಣ. ತುಂಗಾದಿಂದ ಭದ್ರಾಗೆ ನೀರು ಲಿಫ್ಟ್ ಮಾಡುವ ಕಾಮಗಾರಿಯನ್ನೇ ಈಗಿನ ಕಾಂಗ್ರೆಸ್ ಸರ್ಕಾರ ಮಾಡಿಲ್ಲ. ಸಿದ್ದರಾಮಯ್ಯ ಅವರು ಕಾಮಗಾರಿಗೆ ವೇಗ ನೀಡಿ, ಮುಖ್ಯ ಕಾಮಗಾರಿ ಪೂರ್ಣಗೊಳಿಸಿದರೆ, ಕೇಂದ್ರ ಸರ್ಕಾರದಿಂದ ಅನುದಾನ ತರುವುದು ನಿಶ್ಚಿತ. ನಮ್ಮ ಪಕ್ಷದ ರಾಜ್ಯಾಧ್ಯಕ್ಷರು ಸೇರಿ ಬಿಜೆಪಿಗರು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಮುಖಂಡರಾದ ಜಿ.ಎಸ್.ಅನಿತ್‍ಕುಮಾರ್, ಸಂಪತ್, ದಗ್ಗೆ ಶಿವಪ್ರಕಾಶ್, ನಾಗರಾಜ್ ಬೇದ್ರೆ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
