
CHITRADURGA NEWS | 24 JUNE 2024
ಚಿತ್ರದುರ್ಗ: ತುರ್ತು ಪರಿಸ್ಥಿತಿಯ ಕಾರಳ ದಿನಾಚರಣೆ ವೇಳೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯನ್ನು ಮುತ್ತಿಗೆ ಹಾಕಲು ಬಂದಾಗ ಪೊಲೀಸರು ಅಡ್ಡಗಟ್ಟಿ 25 ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ಗ್ರಾಮಾಂತರ ಠಾಣೆಗೆ ಕರೆದೊಯ್ದು ನಂತರ ಬಿಡುಗಡೆಗೊಳಿಸಿದರು.
ಇದನ್ನೂ ಓದಿ: ಪ್ರತಿಷ್ಠಿತ ಪತಂಜಲಿ ಸ್ಕೂಲ್ ಆಫ್ ನರ್ಸಿಂಗ್ | ಜಿಎನ್‍ಎಂ ನರ್ಸಿಂಗ್ ಪ್ರವೇಶ ಆರಂಭ
ರಾಹುಲ್‍ಗಾಂಧಿ ದೇಶದ ಜನರ ಕ್ಷಮೆ ಕೇಳುವಂತೆ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವುದಕ್ಕಿಂತ ಒಂದುವರೆ ಗಂಟೆ ಮುಂಚೆಯೇ ಒನಕೆ ಓಬವ್ವ ವೃತ್ತದ ಸುತ್ತಲೂ ಬ್ಯಾರಿಕೇಡ್‍ಗಳನ್ನು ಅಡ್ಡವಿಟ್ಟ ಪೊಲೀಸರು ಸರ್ಪಗಾವಲಾಗಿ ನಿಂತಿದ್ದರು. ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಜಟಾಪಟಿಯೂ ನಡೆಯಿತು.
ಇದನ್ನೂ ಓದಿ: ಅಡಿಕೆ ಹರಳು ಉದುರುವ, ಹೊಂಬಾಳೆ ಒಣಗುವ ಸಮಸ್ಯೆ ತೀವ್ರ | ರೈತರು ಕೈಗೊಳ್ಳಬಹುದಾದ ಪರಿಹಾರವೇನು ?

ತುರ್ತು ಪರಿಸ್ಥಿತಿ ಹೇರಿದ್ದನ್ನು ನೆನಪಿಸಿಕೊಂಡರೆ ಕರಾಳ ದಿನ ಕಣ್ಣ ಮುಂದೆ ಬಂದಂತಾಗುತ್ತದೆ. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಂದು ರೀತಿಯಲ್ಲಿ ತುರ್ತು ಪರಿಸ್ಥಿತಿಯನ್ನು ಹೇರುತ್ತಿದ್ದಾರೆ.
ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಹತ್ಯೆ ,ಕೊಲೆ, ಸುಲಿಗೆ ನಿರಂತರವಾಗಿ ನಡೆಯುತ್ತಿದೆ. ಹೈಕೋರ್ಟ್ ತೀರ್ಪಿನ ವಿರುದ್ದ ಇಂದಿರಾಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿ ಪ್ರಶ್ನಿಸಿದವರನ್ನು ಜೈಲಿಗಟ್ಟುತ್ತಿದ್ದರು. ಅಜ್ಜಿ ಮಾಡಿದ ತಪ್ಪಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್‍ಗಾಂಧಿ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾಕಾರರು ಗರ್ಜಿಸಿದರು.
ತುರ್ತು ಪರಿಸ್ಥಿತಿಯಲ್ಲಿ ಸಂವಿಧಾನಕ್ಕೆ ಅವಮಾನವಾಗಿದೆ. ಪ್ರಜಾಪ್ರಭುತ್ವದ ನಾಲ್ಕನೆ ಅಂಗ ಪತ್ರಿಕಾರಂಗವನ್ನು ಮಟ್ಟ ಹಾಕಿದ ಇಂದಿರಾಗಾಂಧಿ ನಂತರ ಚುನಾವಣೆಯಲ್ಲಿ ಸೋಲನುಭವಿಸಬೇಕಾಯಿತು. ತುರ್ತು ಪರಿಸ್ಥಿಯಂತ ಕರಾಳ ದಿನ ದೇಶದಲ್ಲಿ ಮತ್ತೆ ಮರುಕಳಿಸಬಾರದು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.
ಇದನ್ನೂ ಓದಿ: ಹಿರಿಯೂರಿನಲ್ಲಿ ಸಾವಯವ ಸಿರಿಧಾನ್ಯ ಮಳಿಗೆ | ರೈತರಿಗೆ ವಿಶೇಷ ಪ್ರೋತ್ಸಾಹ
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಗ್ರಾಮಾಂತರ ಅಧ್ಯಕ್ಷ ಕಲ್ಲೇಶಯ್ಯ, ಜಿ.ಪಂ.ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸುರೇಶ್, ದಗ್ಗೆ ಶಿವಪ್ರಕಾಶ್, ನಾಗರಾಜ್ ಬೇದ್ರೆ, ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾರೆಡ್ಡಿ, ಅರುಣಕುಮಾರಿ, ಮಿನಾಕ್ಷಿ, ಮಂಜುಳಾ ಸೇರಿದಂತೆ ಕಾರ್ಯಕರ್ತರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
