Connect with us

    ಯಡಿಯೂರಪ್ಪ ಜನ್ಮ ದಿನಾಚರಣೆ | ಚಿತ್ರದುರ್ಗದಲ್ಲಿ ವಿಶೇಷ ಪೂಜೆ

    ಮುಖ್ಯ ಸುದ್ದಿ

    ಯಡಿಯೂರಪ್ಪ ಜನ್ಮ ದಿನಾಚರಣೆ | ಚಿತ್ರದುರ್ಗದಲ್ಲಿ ವಿಶೇಷ ಪೂಜೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 27 FEBRUARY 2025

    ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 82ನೇ ವರ್ಷದ ಜನ್ಮ ದಿನಾಚರಣೆಯನ್ನು ಚಿತ್ರದುರ್ಗದ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನಗರದ ಶ್ರೀ ಪ್ರಸನ್ನ ಸೇವಾ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಆಚರಣೆ ಮಾಡಲಾಯಿತು.

    Also Read: ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಪ್ರೊ.ಜಿ.ಪರಮೇಶ್ವರಪ್ಪ ಆಯ್ಕೆ

    ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಬಿಜೆಪಿಯನ್ನು ಕಟ್ಟುವುದರಲ್ಲಿ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ. ಇದರಿಂದ ರಾಜ್ಯದಲ್ಲಿ ಬಿಜೆಪಿ ಇಷ್ಟರ ಮಟ್ಟಿಗೆ ಬೆಳೆಯಲು ಸಾಧ್ಯವಾಗಿದೆ.

    ರೈತರ ಪರವಾದ ಹೋರಾಟವನ್ನು ಮಾಡುವುದರ ಮೂಲಕ ರೈತ ನಾಯಕನಾಗಿದ್ದಾರೆ. ನಾಡಿನ ಜನತೆಗೆ ಅಭಿವೃದ್ದಿಯ ಮಹಾ ಪೂರವನ್ನು ಹರಿಸಿದ್ದಾರೆ. ಭಗವಂತ ಅವರಿಗೆ ಆರೋಗ್ಯ ಹಾಗೂ ಆಯಸ್ಸನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಲಾಯಿತು.

    ತಮ್ಮ ಅಧಿಕಾರದ ಅವಧಿಯಲ್ಲಿ ಜನತೆಗೆ ವಿವಿಧ ರೀತಿಯ ಯೋಜನೆಗಳನ್ನು ಜಾರಿ ಮಾಡುವುದರ ಮೂಲಕ ಜನನಾಯಕರಾಗಿದ್ದಾರೆ.

    Also Read: ಜಗದ್ಗುರು ಮುರುಘರಾಜೇಂದ್ರ ಶ್ರೀ ಹೆಸರಿನಲ್ಲಿ ನೂತನ ಸರ್ಕಲ್ ಅನಾವರಣ

    ಬಿಜೆಪಿ ಖಂಜಾಚಿ ಮಾಧುರೀ ಗೀರೀಶ್, ಮಾಧ್ಯಮ ವಕ್ತಾರರಾದ ದಗ್ಗೆ ಶಿವಪ್ರಕಾಶ್, ನಾಗರಾಜ್ ಬೇದ್ರೆ, ಶಂಭು, ಕವನ ಅರುಣಕುಮಾರಿ, ಯಶವಂತ, ವಿರೇಶ್ ಜಾಲಿಕಟ್ಟೆ, ರವಿ, ಶಿವಣ್ಣಚಾರ್, ಉಪಾಧ್ಯಕ್ಷರಾದ ರಾಜಕುಮಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top