ಮುಖ್ಯ ಸುದ್ದಿ
PSI ಗಾದಿಲಿಂಗಪ್ಪ – ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ಹಲ್ಲೇ ಪ್ರಕರಣ | ಪಿಎಸ್ಐ ವಿರುದ್ಧ FIR ದಾಖಲಿಸಲು ಪಟ್ಟು
CHITRADURGA NEWS | 15 MARCH 2025
ಚಿತ್ರದುರ್ಗ: ಬಿಜೆಪಿ ಮಧುಗಿರಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ನಗರಠಾಣೆ ಪಿಎಸ್ಐ ಗಾದಿಲಿಂಗಪ್ಪ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನಗರಠಾಣೆಯಲ್ಲಿ ದೂರು ದಾಖಲಾಗಿದೆ.
Also Read: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಶನಿವಾರದ ಹತ್ತಿ ರೇಟ್ ಎಷ್ಟಿದೆ?
ಇದರ ಬೆನ್ನಲ್ಲೇ ವೀಡಿಯೋ ವೈರಲ್ ಆಗಿದ್ದು, ಅದರಲ್ಲಿ ಪಿಎಸ್ಐ ಗಾದಿಲಿಂಗನಗೌಡರ್ ಅವರು ಹನುಮಂತೇಗೌಡ ಅವರ ಮೇಲೆ ಮೊದಲು ಹಲ್ಲೆ ನಡೆಸಿದ್ದಾರೆ. ನಂತರ ಹನುಮಂತೇಗೌಡ ಕೂಡಾ ಹಲ್ಲೇ ನಡೆಸಿದ್ದಾರೆ.
ಈ ವೀಡಿಯೋ ಇಟ್ಟುಕೊಂಡು ಬಿಜೆಪಿ ಕಾರ್ಯಕರ್ತರು ಪೊಲೀಸ್ ಇಲಾಖೆಯ ಮೇಲೆ ಮುಗಿಬಿದ್ದಿದ್ದು, ಎಸ್ಪಿ ಕಚೇರಿಗೆ ಧಾವಿಸಿ ಪಿಎಸ್ಐ ಮೇಲೆ ದೂರು ದಾಖಲಿಸಲು ಪಟ್ಟು ಹಿಡಿದಿದ್ದಾರೆ.
ನಗರದ ಐಶ್ವರ್ಯಾ ಫೋರ್ಟ್ ಹೋಟೆಲ್ ಬಳಿ ತಡರಾತ್ರಿ ಈ ಘಟನೆ ನಡೆದಿದ್ದು, ರಾತ್ರಿ ಇಷ್ಟೊತ್ತಿನಲ್ಲಿ ಏನು ಮಾಡುತ್ತಿದ್ದೀರಿ ಮನೆಗೆ ಹೋಗಿ ಎಂದು ಪಿಎಸ್ಐ ಹೇಳಿದ್ದಾರೆ.
Also Read : ಉಪಸಭಾಪತಿ ರುದ್ರಪ್ಪ ಲಮಾಣಿಗೆ ಬೈಕ್ ಡಿಕ್ಕಿ | ಹಿರಿಯೂರು ಬಳಿ ಘಟನೆ
ಈ ವೇಳೆ ಹನುಮಂತೇಗೌಡ ಊಟಕ್ಕೆ ಬಂದಿದ್ದೆವು ಹೊರಡುತ್ತೇವೆ ಸರ್ ಎಂದಾಗ ಮತ್ತೆ ಮಾತು ಮುಂದುವರೆದಿದೆ.
ಈ ವೇಳೆ ಹನುಮಂತೇಗೌಡ ನಾನು ಬಿಜೆಪಿ ಜಿಲ್ಲಾಧ್ಯಕ್ಷ ಇದ್ದೀನಿ, ಯಾರಿಗು ತೊಂದರೆ ಮಾಡಿಲ್ಲ ಅವಾಚ್ಯ ಶಬ್ದ ಬಳಸಬೇಡಿ ಎಂದು ಹೇಳಿದ್ದಾರೆ.
ನಾನು ಉಪನ್ಯಾಸಕನಾಗಿ ಕೆಲಸ ಮಾಡಿದ್ದೇನೆ ಜವಾಬ್ದಾರಿ ಇದೆ ಎದರೂ ಐಪಿಎಸ್ ಕೆಟ್ಟ ಶಬ್ದ ಬಳಸಿ ಹಲ್ಲೆ ನಡೆಸಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ, ಎಂಎಲ್ಸಿ ಕೆ.ಎಸ್.ನವೀನ್, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ವಿವರಿಸಿದ್ದಾರೆ.
ಈ ಸಂಬಂಧ ಹನುಮಂತೇಗೌಡ ಅವರು ಪ್ರತಿ ದೂರು ಸಲ್ಲಿಸಿದಾಗ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ.
Also Read: ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಕರುನಾಡ ವಿಜಯಸೇನೆ ಪ್ರತಿಭಟನೆ
ಪಿಎಸ್ಐ ಗಾದಿಲಿಂಗಪ್ಪ ಅವರ ಮೇಲೆ FIR ಹಾಕಿ ಇಲಾಖೆ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿ ಸಂಸದ ಗೋವಿಂದ ಕಾರಜೋಳ, ಎಂಎಲ್ಸಿ ಕೆ.ಎಸ್.ನವೀನ್, ಚಿದಾನಂದ ಗೌಡ, ಮಾಜಿ ಶಾಸಕರಾದ ತಿಪ್ಪಾರೆಡ್ಡಿ, ತಿಮ್ಮರಾಯಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಜಯ್ಯಣ್ಣ ಎಸ್ಪಿ ಕಚೇರಿ ಬಳಿ ಜಮಾಯಿಸಿದ್ದಾರೆ.