ಚಿತ್ರದುರ್ಗ ನ್ಯೂಸ್. ಕಾಂ: ನಗರದ ಒನಕೆ ಓಬವ್ವ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಹುತಾತ್ಮ ಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ನುಡಿನಮನ ಹಾಗೂ ಮೇಣದ ಬತ್ತಿ ಬೆಳಗಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಯುವ ಮೋರ್ಚಾ ಚಿತ್ರದುರ್ಗ ಜಿಲ್ಲಾ ಅಧ್ಯಕ್ಷ ಆರ್.ಪಾಲಯ್ಯ ಈ ವೇಳೆ ಮಾತನಾಡಿ, ನಾವೆಲ್ಲ ಇಂದು ನೆಮ್ಮದಿಯಿಂದ ಇರಲು ಗಡಿಯಲ್ಲಿರುವ ಸೈನಿಕರೇ ಕಾರಣ ಎಂದರು.

ನಮ್ಮ ಸೈನಿಕರು ತಮ್ಮ ಪ್ರಾಣವನ್ನೇ ಒತ್ತೆಯಿಟ್ಟು ನಮ್ಮ ಪ್ರಾಣ ರಕ್ಷಣೆ ಮಾಡುತ್ತಿದ್ದಾರೆ. ಅಂತಹ ಪವಿತ್ರ ಕಾರ್ಯ ಮಾಡುತ್ತಿರುವ ಸೈನಿಕರ ಬಗ್ಗೆ ನಾವೆಲ್ಲಾ ಗೌರವ ಭಾವನೆ ಬೆಳೆಸಿಕೊಳ್ಳಬೇಕು. ಅವರ ಕುಟುಂಬಗಳಿಗೆ ನೆರವಾಗಬೇಕು ಎಂದು ಹೇಳಿದರು.

ಕ್ಯಾಪ್ಟನ್ ಪ್ರಾಂಜಲ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಿವೃತ್ತ ಯೋಧ ನಾರಾಯಣ ಮಾತನಾಡಿ, ಉತ್ತರ ಭಾರತದಲ್ಲಿ ಮನೆಗೊಬ್ಬ ಸೈನಿಕ ಇದ್ದಾನೆ. ಅಲ್ಲಿ ಮನೆಯಲ್ಲೊಬ್ಬ ಸೈನಿಕ ಇದ್ದರೆ ಆ ಮನೆಗೆ ಹೆಣ್ಣು ಕೊಡುತ್ತಾರೆ. ಅದೇ ರೀತಿಯಲ್ಲಿ ದಕ್ಷಿಣ ಭಾರತದಲ್ಲಿ ಕೂಡಾ ಸೇನೆಗೆ ಸೇರುವವರ ಸಂಖ್ಯೆ ಹೆಚ್ಚಾಗಬೇಕು ಎಂದು ಕರೆ ನೀಡಿದರು. ಸೈನಿಕರು ಗಡಿ ಭಾಗದಲ್ಲಿ ಅತ್ಯಂತ ಕಠಿಣ ಪರಿಸ್ಥಿತಿ, ಸವಾಲುಗಳ ನಡುವೆ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಈ ಸಮಾಜ ನೈತಿಕ ಸ್ಥೈರ್ಯ ತುಂಬುವ ಕೆಲಸ ಮಾಡಬೇಕಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಇನ್ನೊಬ್ಬ ನಿವೃತ್ತ ಯೋಧರಾದ ಬಸವರಾಜ್ ಹಾಗೂ ಜಿಲ್ಲೆಯ ಭಾಜಪ ಜಿಲ್ಲಾ ಅಧ್ಯಕ್ಷರಾದ ಎ ಮುರುಳಿ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ವಿ ಎಸ್ ಹಳ್ಳಿ ರೈತ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಯಾದವ್, ನಿಕಟಪೂರ್ವ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹನುಮಂತೇಗೌಡ, ಆದರ್ಶ, ರಾಮ್ ಕಿರಣ್, ಜಯದೇವ, ಶ್ಯಾಮಲಾ ಶಿವಪ್ರಕಾಶ್ ,ರೇಖಾ, ಮಾತನಾಡಿದರು.
ಸಂದೀಪ್ ಸಿರಿಗೆರೆ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲೆಯ ಪರಿವಾರದ ಎಲ್ಲಾ ಪ್ರಮುಖರು ಹಾಗೂ ಯುವ ಮೋರ್ಚಾ ನಗರದ ಮತ್ತು ಗ್ರಾಮಾಂತರ ಪದಾಧಿಕಾರಿಗಳು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
