CHITRADURGA NEWS | 22 JUNE 2024
ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷಕ್ಕೆ ಒಬ್ಬ ಸಚಿವರು ರಾಜಿನಾಮೆ ಸಲ್ಲಿಸಲು ಕಾರಣವಾಗಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರವಾಗಿ ಬಿಜೆಪಿ ಪ್ರತಿಭಟನೆ ತೀವ್ರಗೊಳಿಸಲು ಮುಂದಾಗಿದೆ.

ಜೂನ್ 28 ರಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆಗೆ ಒತ್ತಡ ಹಾಕಲಿದ್ದಾರೆ.
ಇದನ್ನೂ ಓದಿ: ಪಹಣಿಗೆ ಆಧಾರ್ ಜೋಡಣೆಗೆ ಟಾರ್ಗೆಟ್ ಫಿಕ್ಸ್ ಮಾಡಿದ ಡಿಸಿ
ಪರಿಶಿಷ್ಟ ಪಂಗಡದ ವಾಲ್ಮೀಕಿ ಸಮುದಾಯ ಚಿತ್ರದುರ್ಗ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ, ಕೋಟೆನಾಡಿನಲ್ಲಿ ಬಿಜೆಪಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ಖುದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಿತ್ರದುರ್ಗಕ್ಕೆ ಆಗಮಿಸಲಿದ್ದು, ಜೂ.28 ರಂದು ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಸಾವಿರಾರು ಕಾರ್ಯಕರ್ತರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯೋಜನೆ ರೂಪಿಸಲಾಗಿದೆ.
ಇದನ್ನೂ ಓದಿ: ಜಿಲ್ಲಾ ಪಂಚಾಯತ್ ಕೆಡಿಪಿ ಸಭೆ | ಜೂನ್ 26ಕ್ಕೆ ಮುಂದೂಡಿಕೆ
ಈಗಾಗಲೇ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಬಿಜೆಪಿ(BJP) ಎಸ್ಟಿ ಮೋರ್ಚಾ ನೇತೃತ್ವದಲ್ಲಿ ಸಭೆಗಳು ನಡೆದಿದ್ದು, ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜೂ.21 ರಂದು ಚಿತ್ರದುರ್ಗದ ಬಿಜೆಪಿ ಕಚೇರಿಯಲ್ಲಿ ಹಲವು ಮುಖಂಡರು, ಎಸ್ಟಿ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟಿಸಲು ತೀರ್ಮಾನಿಸಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎಸ್ಸಿ, ಎಸ್ಟಿಗಳಿಗೆ ಸೇರಿದ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಪಕ್ಕದ ಆಂಧ್ರಪ್ರದೇಶಕ್ಕೆ ಕರ್ನಾಟಕದ ವಾಲ್ಮೀಕಿ ನಿಗಮದ ಹಣ ವರ್ಗಾವಣೆ ಆಗಿದೆ.
ಇದನ್ನೂ ಓದಿ: ಮಲ್ಲಿಕಾರ್ಜುನ ಜಗದ್ಗುರುಗಳ ಸ್ಮರಣೋತ್ಸವ | ಎಸ್‍ಜೆಎಂ ವಿದ್ಯಾಪೀಠ ಸಂಸ್ಥಾಪನಾ ದಿನಾಚರಣೆಗೆ ತೀರ್ಮಾನ
ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಬಿ.ನಾಗೇಂದ್ರ ಅವರ ರಾಜಿನಾಮೆ ಸಲ್ಲಿಕೆಯಾಗಿದೆ. ಆದರೆ, ಇಷ್ಟಕ್ಕೆ ಬಿಡದ ಬಿಜೆಪಿ, ಇದು ಮುಖ್ಯಮಂತ್ರಿಗಳ ಪಾತ್ರವಿಲ್ಲದೆ ನಡೆದಿಲ್ಲ. ಹಾಗಾಗಿ ಅವರ ರಾಜಿನಾಮೆಯನ್ನೂ ಪಡೆಯಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಯೇ ಹಣಕಾಸು ಇಲಾಖೆ ಇದೆ. ಹಾಗಾಗಿ ಅವರು ರಾಜಿನಾಮೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಲಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
