CHITRADURGA NEWS | 04 JUNE 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು ಆರನೇ ಸುತ್ತಿನಲ್ಲೂ ಬಿಜೆಪಿ ತೀವ್ರ ಮುನ್ನಡೆ ಸಾಧಿಸಿದೆ.
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 2,09765 ಮತಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 190740ಮತ ಪಡೆದಿದ್ದಾರೆ. 19,025 ಮತಗಳ ಮುನ್ನಡೆಯನ್ನು ಬಿಜೆಪಿ ಸಾಧಿಸಿದೆ.
ಮೊದಲ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ಚಂದ್ರಪ್ಪ, ಬಳಿಕ ಎರಡು, ಮೂರು, ನಾಲ್ಕು, ಐದು, ಆರನೇ ಸುತ್ತಿನಲ್ಲಿ ಹಿನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ19,025 ಮತಗಳ ಅಂತರ ಕಾಯ್ದುಕೊಂಡಿದ್ದಾರೆ.
ಬಿಜೆಪಿಯ ಗೋವಿಂದ ಕಾರಜೋಳ, ಕಾಂಗ್ರೆಸ್‌ನ ಬಿ.ಎನ್.ಚಂದ್ರಪ್ಪ ಸೇರಿ 20 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಯ ನಡುವೆ ನೇರ ಹಣಾಹಣಿ ನಡೆದಿದ್ದು, ವಿಜಯದ ಮಾಲೆ ಯಾರ ಕೊರಳನ್ನು ಅಲಂಕರಿಸಲಿದೆ ಎಂಬ ಕುತೂಹಲ ಮೂಡಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
