CHITRADURGA NEWS | 04 JUNE 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಮೂರನೇ ಸುತ್ತಿನಲ್ಲಿ ಬಿಜೆಪಿ 8082 ಮತಗಳ ಮುನ್ನಡೆ ಸಾಧಿಸಿದೆ.
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 1,03537 ಮತಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 95455 ಮತ ಪಡೆದಿದ್ದಾರೆ.
ಬಿಜೆಪಿಯ ಗೋವಿಂದ ಕಾರಜೋಳ, ಕಾಂಗ್ರೆಸ್ನ ಬಿ.ಎನ್.ಚಂದ್ರಪ್ಪ ಸೇರಿ 20 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಯ ನಡುವೆ ನೇರ ಹಣಾಹಣಿ ನಡೆದಿದ್ದು, ವಿಜಯದ ಮಾಲೆ ಯಾರ ಕೊರಳನ್ನು ಅಲಂಕರಿಸಲಿದೆ ಎಂಬ ಕುತೂಹಲ ಮೂಡಿದೆ.
ಮೊದಲ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ಚಂದ್ರಪ್ಪ, ಬಳಿಕ ಎರಡು, ಮೂರನೇ ಸುತ್ತಿನಲ್ಲಿ ಹಿನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 8082 ಮತಗಳ ಅಂತರ ಕಾಯ್ದುಕೊಂಡಿದ್ದಾರೆ.
ಮಧ್ಯಾಹ್ನ 12.30ರ ಹೊತ್ತಿಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ. ಏ.26ರಂದು ಮತದಾನ ನಡೆದಿದ್ದು, 39 ದಿನಗಳ ಸುದೀರ್ಘ ಕುತೂಹಲಕ್ಕೆ ತೆರೆಬೀಳಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
