ಮುಖ್ಯ ಸುದ್ದಿ
ತೀವ್ರ ಏರಿಕೆಯಾಗುತ್ತಿದೆ ಬಿಜೆಪಿ ಮತಗಳಿಕೆ | ಏಳನೇ ಸುತ್ತಿನಲ್ಲೂ ಕಾಂಗ್ರೆಸ್‌ಗೆ ಹಿನ್ನಡೆ

CHITRADURGA NEWS | 04 JUNE 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಸರ್ಕಾರಿ ವಿಜ್ಞಾನ ಕಾಲೇಜು ಆವರಣದ ಮತ ಎಣಿಕೆ ಕೇಂದ್ರದಲ್ಲಿ ಮಂಗಳವಾರ ಬಿರುಸಿನಿಂದ ಸಾಗುತ್ತಿದೆ. ಏಳನೇ ಸುತ್ತಿನಲ್ಲೂ ಬಿಜೆಪಿ ಮತಗಳಿಕೆಯಲ್ಲಿ ಮುನ್ನಡೆ ಸಾಧಿಸಿದೆ.
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 2,47,194 ಮತಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 2,20,643ಮತ ಪಡೆದಿದ್ದಾರೆ. 26,551ಮತಗಳ ಮುನ್ನಡೆಯನ್ನು ಬಿಜೆಪಿ ಸಾಧಿಸಿದೆ.
ಮೊದಲ ಸುತ್ತಿನಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಬಳಿಕ ಎರಡು, ಮೂರು, ನಾಲ್ಕು, ಐದು, ಆರು ಮತ್ತು ಏಳನೇ ಸುತ್ತಿನಲ್ಲಿ ಹಿನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ26,551 ಮತಗಳ ಅಂತರ ಕಾಯ್ದುಕೊಂಡಿದ್ದಾರೆ.

ಬಿಜೆಪಿಯ ಗೋವಿಂದ ಕಾರಜೋಳ, ಕಾಂಗ್ರೆಸ್‌ನ ಬಿ.ಎನ್.ಚಂದ್ರಪ್ಪ ಸೇರಿ 20 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಯ ನಡುವೆ ನೇರ ಹಣಾಹಣಿ ನಡೆದಿದ್ದು, ವಿಜಯದ ಮಾಲೆ ಯಾರ ಕೊರಳನ್ನು ಅಲಂಕರಿಸಲಿದೆ ಎಂಬ ಕುತೂಹಲ ಮೂಡಿದೆ.
