Connect with us

ತೆಂಗು ಬೆಳೆಗೆ ಕಪ್ಪು ತಲೆ ಹುಳು ಬಾಧೆ | ರೈತರಿಗೆ ಜಾಗೃತಿ ಮೂಡಿಸಿ, ಹತೋಟಿಗೆ ತನ್ನಿ | ಎನ್.ಆರ್.ಮಹೇಶ್ವರಪ್ಪ

ಮುಖ್ಯ ಸುದ್ದಿ

ತೆಂಗು ಬೆಳೆಗೆ ಕಪ್ಪು ತಲೆ ಹುಳು ಬಾಧೆ | ರೈತರಿಗೆ ಜಾಗೃತಿ ಮೂಡಿಸಿ, ಹತೋಟಿಗೆ ತನ್ನಿ | ಎನ್.ಆರ್.ಮಹೇಶ್ವರಪ್ಪ

CHITRADURGA NEWS | 15 FEBRUARY 2025

ಚಿತ್ರದುರ್ಗ: ಜಿಲ್ಲೆಯಲ್ಲಿ ತೆಂಗಿನ ತೋಟಗಳಿಗೆ ತಗುಲಿರುವ ಕಪ್ಪು ತಲೆ ಹುಳು ಬಾಧೆ ಸಮಗ್ರ ಹತೋಟಿಗೆ ಅಗತ್ಯ ಕ್ರಮವಹಿಸಬೇಕು ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎನ್.ಆರ್.ಮಹೇಶ್ವರಪ್ಪ ಸೂಚನೆ ನೀಡಿದರು.

Also Read: ಚಿತ್ರಹಳ್ಳಿ ಪೊಲೀಸರ ಕಾರ್ಯಾಚರಣೆ | ಐವರ ಬಂಧನ | 5 ಲಕ್ಷ ರೂ. ಮೌಲ್ಯದ ಶ್ರೀಗಂಧ ವಶ

ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತೆಂಗಿನ ಮರಗಳಿಗೆ ಬಂದಿರುವ ಕಪ್ಪುತಲೆ ಹುಳು ಬಾಧೆಯಿಂದ ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ರೋಗ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಔಷಧಿ ಸಿಂಪಡಣೆ ಸೇರಿದಂತೆ ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಜಿಲ್ಲೆಯ ಚಿತ್ರದುರ್ಗ, ಚಳ್ಳಕೆರೆ ಹಾಗೂ ಮೊಳಕಾಲ್ಮುರು ತಾಲ್ಲೂಕುಗಳನ್ನು ಸಹ ತೆಂಗು ಕ್ಲಸ್ಟರ್ ವ್ಯಾಪ್ತಿಗೆ ಸೇರಿಸಿ, ಕಪ್ಪು ತಲೆ ಹುಳದ ಬಾಧೆಯಿಂದ ಹಾಳಾದ ತೋಟಗಳ ನಿರ್ವಹಣೆ ಹಾಗೂ ರೋಗದ ಹತೋಟಿಗೆ ಸರ್ಕಾರ ನೀಡಿದ ಸಹಾಯಧನವನ್ನು ತೆಂಗು ಬೆಳೆಯುವ ಜಿಲ್ಲೆಯ ಎಲ್ಲ ತೆಂಗು ಬೆಳೆಗಾರರಿಗೂ ಸೌಲಭ್ಯ ಒದಗಿಸಿ, ರೋಗ ಹತೋಟಿಗೆ ತರುವ ಕೆಲಸ ಮಾಡಬೇಕು ಎಂದರು.

ತೋಟಗಾರಿಕೆ ಉಪನಿರ್ದೇಶಕಿ ಸವಿತಾ ಮಾತನಾಡಿ, ಬೇಸಿಗೆಯಲ್ಲಿ ತೆಂಗಿನ ಮರಗಳಿಗೆ ಕಪ್ಪುತಲೆ ಹುಳು ಬಾಧೆಯು ಹೆಚ್ಚಳವಾಗಲಿದೆ. ರೋಗ ನಿಯಂತ್ರಣಕ್ಕೆ ತೆಂಗು ಅಭಿವೃದ್ಧಿ ಮಂಡಳಿ ವತಿಯಿಂದ ಔಷಧಿ ಸಂಪರಣೆ ಸೇರಿದಂತೆ ಅಗತ್ಯ ಕ್ರಮವಹಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

Also Read: ಐದನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆ

ಜಿಲ್ಲಾ ಕೃಷಿಕ ಸಮಾಜದ ಖಜಾಂಚಿ ಭಕ್ತ ಪ್ರಹ್ಲಾದ್ ಮಾತನಾಡಿ, ಮೈಕ್ರೋ ಪೈನಾನ್ಸ್ ಸಂಸ್ಥೆಗಳ ಕಿರುಕುಳ ತಪ್ಪಿಸುವ ಸಲುವಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (ಪಿಎಲ್‍ಡಿ ಬ್ಯಾಂಕ್) ಮೂಲಕ ಜಿಲ್ಲೆಯ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಹೊಸದಾಗಿ ಸಾಲ ಕೊಡುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎನ್.ಆರ್.ಮಹೇಶ್ವರಪ್ಪ ಅವರು, ಜಿಲ್ಲಾ ಕೃಷಿಕ ಸಮಾಜದ ಸಭೆಯ ನಡವಳಿಯೊಂದಿಗೆ ಪಿಎಲ್‍ಡಿ ಬ್ಯಾಂಕ್‍ಗಳ ಮೂಲಕ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಸಾಲ ಸೌಲಭ್ಯ ಕಲ್ಪಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಜಂಟಿ ಕೃಷಿ ನಿರ್ದೇಶಕರಿಗೆ ಸೂಚನೆ ನೀಡಿದರು.

ಪಿಎಲ್‍ಡಿ ಬ್ಯಾಂಕ್, ವ್ಯವಸಾಯೋತ್ಪನ್ನ ಸಹಕಾರ ಸಂಘಗಳು, ಕೃಷಿ ಪತ್ತಿನ ಸಹಕಾರ ಸಂಘಗಳು ಸೇರಿದಂತೆ ಇತ್ಯಾದಿ ಸಹಕಾರ ಸಂಘಗಳು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರೈತಪರವಾಗಿರುವ ಯಾವ ಯಾವ ಕ್ರಮಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡುವಂತೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಎಆರ್‍ಸಿಎಸ್ ಬಾಹುಬಲಿ ಅವರು ಈ ಕುರಿತು ಒಂದು ವಾರದೊಳಗೆ ಸಂಪೂರ್ಣ ವರದಿ ನೀಡಲಾಗುವುದು ಎಂದು ಸಭೆಯ ಗಮನಕ್ಕೆ ತಂದರು.

Also Read: ನರೇಗಾ ತಾಂತ್ರಿಕಾ ಸಹಾಯಕ ಕೆಲಸದಿಂದ ವಜಾ

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕರು ಹಾಗೂ ಜಿಲ್ಲಾ ಕೃಷಿಕ ಸಮಾಜದ ಪದನಿಮಿತ್ತ ಕಾರ್ಯದರ್ಶಿ ಮಂಜುನಾಥ್, ಜಿಲ್ಲಾ ಕೃಷಿಕ ಸಮಾಜದ ಉಪಾಧ್ಯಕ್ಷ ಧರಣೇಶ್, ರಾಜ್ಯಪ್ರತಿನಿಧಿ ವಿ.ಜಿ.ಪರಮೇಶ್ವರಪ್ಪ, ಖಜಾಂಚಿ ಭಕ್ತ ಪ್ರಹ್ಲಾದ್, ಪ್ರಧಾನ ಕಾರ್ಯದರ್ಶಿ ರಾಗಿ ಶಿವಮೂರ್ತಪ್ಪ, ತಾಲ್ಲೂಕು ಕೃಷಿ ಸಮಾಜದ ಅಧ್ಯಕ್ಷ ಬಿ.ಟಿ.ಜಗದೀಶ್, ಸಿ.ಹೆಚ್.ಕಾಂತರಾಜ್, ಹಿರಿಯೂರು ತಾಲ್ಲೂಕು ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಕೆ.ಜಗದೀಶ್ ಕಂದಿಕೆರೆ, ಕೃಷಿ ಸಮಾಜದ ಜಿಲ್ಲಾ ಪ್ರತಿನಿಧಿ ಶಶಿಧರ್, ರಮೇಶಪ್ಪ ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version