ಲೋಕಸಮರ 2024
ಮುಖ್ಯಮಂತ್ರಿಗೆ ಶ್ರೀಗಳಿಂದ ಆಶೀರ್ವಾದ | ಭೋವಿ ಗುರುಪೀಠಕ್ಕೆ ಭೇಟಿ

CHITRADURGA NEWS | 05 MARCH 2024
ಚಿತ್ರದುರ್ಗ: ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪರ ಚುನಾವಣಾ ಪ್ರಚಾರಕ್ಕಾಗಿ ಗುರುವಾರ ಚಿತ್ರದುರ್ಗಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನಗರದ ಭೋವಿ ಗುರುಪೀಠಕ್ಕೆ ಭೇಟಿ ನೀಡಿ ವಿವಿಧ ಮಠಾಧೀಶರಿಂದ ಆಶೀರ್ವಾದ ಪಡೆದುಕೊಂಡರು.
ಇದನ್ನೂ ಓದಿ: ನಾಮಪತ್ರ ಸಲ್ಲಿಸುವ ಅವಧಿ ಮುಕ್ತಾಯ | ಚಿತ್ರದುರ್ಗ ಲೋಕಸಭೆಗೆ ಸಲ್ಲಿಕೆಯಾದ ನಾಮಪತ್ರಗಳೆಷ್ಟು ಗೊತ್ತಾ
ಈ ವೇಳೆ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶ್ರೀ ಶಾಂತವೀರ ಸ್ವಾಮೀಜಿ, ಭಗೀರಥ ಗುರುಪೀಠದ ಶ್ರೀ ಪುರುμÉೂೀತ್ತಮಾನಂದಪುರಿ ಸ್ವಾಮೀಜಿ, ಯಾದವ ಗುರುಪೀಠದ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ, ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಈಡಿಗ ಗುರುಪೀಠದ ಶ್ರೀ ರೇಣುಕಾನಂದ ಸ್ವಾಮೀಜಿ, ಹಡಪದ ಗುರುಪೀಠದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಕುಂಬಾರ ಗುರುಪೀಠದ ಶ್ರೀ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ, ಮೇದಾರ ಗುರು ಪೀಠದ ಶ್ರೀ ಬಸವ ಪ್ರಭು ಇಮ್ಮಡಿ ಕೇತೇಶ್ವರ ಸ್ವಾಮೀಜಿ, ಅಥಣಿ ಗಚ್ಚಿನಮಠದ ಶ್ರೀ ಶಿವಬಸವ ಸ್ವಾಮೀಜಿ, ಕೊರಟಗೆರೆ ಅನ್ನಪೂರ್ಣೇಶ್ವರಿ ಮಠದ ಶ್ರೀ ಬಸವ ಮಹಾಲಿಂಗ ಸ್ವಾಮೀಜಿ, ಶಿಕಾರಿಪುರ ವಿರಕ್ತಮಠದ ಶ್ರೀ ಚನ್ನಬಸವ ಸ್ವಾಮೀಜಿ, ಶ್ರೀ ತಿಪ್ಪೇರುದ್ರ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಇದನ್ನೂ ಓದಿ: ಸಿದ್ದರಾಮಯ್ಯ, ವಿಜಯೇಂದ್ರ ಆಗಮಿಸಿದ ಹೆಲಿಕಾಪ್ಟರ್ ತಪಾಸಣೆ
ಶಾಸಕರಾದ ಕೆ.ಸಿ.ವೀರೇಂದ್ರ(ಪಪ್ಪಿ) ಪಾವಗಡದ ವಿ.ವೆಂಕಟೇಶ್, ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ, ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್.ಮಂಜುನಾಥ್, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ನೇರಲಗುಂಟೆ ರಾಮಪ್ಪ, ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ಚಿಕ್ಕಂದವಾಡಿ ತಿಪ್ಪಣ್ಣ, ಬಂಡೆ ರುದ್ರಪ್ಪ ಈ ಮಂಜುನಾಥ, ಹಿರಿಯೂರು ಕೃಷ್ಣಮೂರ್ತಿ, ಈಶ್ವರಪ್ಪ, ಚಳ್ಳಕೆರೆ ತಿಪ್ಪೇಸ್ವಾಮಿ, ದಾವಣಗೆರೆ ಉಮಾ ಕುಮಾರ್ ಉಪಸ್ಥಿತರಿದ್ದರು.
