CHITRADURGA NEWS | 13 APRIL 2026
ಚಿತ್ರದುರ್ಗ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಅಂಗವಾಗಿ ಏಪ್ರಿಲ್ 14ರಂದು ಬೆಳಿಗ್ಗೆ 11ಕ್ಕೆ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ವತಿಯಿಂದ ಏಪ್ರಿಲ್ 14ರಂದು ಬೆಳಿಗ್ಗೆ 11 ಗಂಟೆಗೆ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
ಈ ಕಾರ್ಯಕ್ರಮದ ಅಂಗವಾಗಿ ಸಿಟಿ ಹೆಲ್ತ್ ಕೇರ್ ಸೊಸೈಟಿ ವಾಸವಿ ಬ್ಲಡ್ ಸೆಂಟರ್, ಬಸಪ್ಪ ಆಸ್ಪತ್ರೆ ಎದುರು, ತುರುವನೂರು ರಸ್ತೆ, ಚಿತ್ರದುರ್ಗ ಇವರ ಸಹಯೋಗದೊಂದಿಗೆ “ರಕ್ತದಾನ ಶಿಬಿರ” ನಡೆಯಲಿದೆ.
ಸಾರ್ವಜನಿಕರು ಮತ್ತು ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

