Connect with us

    ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಸನ್ನಿಧಾನದಲ್ಲಿ ಬಿ ಫಾರಂ ಪೂಜೆ ಸಲ್ಲಿಸಿದ ಬಿ.ಎನ್.ಚಂದ್ರಪ್ಪ | ರಂಗೇರಿದ ಕೋಟೆನಾಡಿನ ಚುನಾವಣಾ ಅಖಾಡ

    ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಸನ್ನಿಧಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ.

    ಲೋಕಸಮರ 2024

    ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಸನ್ನಿಧಾನದಲ್ಲಿ ಬಿ ಫಾರಂ ಪೂಜೆ ಸಲ್ಲಿಸಿದ ಬಿ.ಎನ್.ಚಂದ್ರಪ್ಪ | ರಂಗೇರಿದ ಕೋಟೆನಾಡಿನ ಚುನಾವಣಾ ಅಖಾಡ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 30 MARCH 2024

    ಚಿತ್ರದುರ್ಗ: ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿ ಬಿ. ಎನ್. ಚಂದ್ರಪ್ಪ ಭೇಟಿ ನೀಡಿ ಬಿ ಫಾರಂ ದೇವರ ಸನ್ನೀಧಿಯಲ್ಲಿಟ್ಟು ಪೂಜೆ ಸಲ್ಲಿಸಿದ್ದಾರೆ. ಬಳಿಕ ಯಾದವ, ಲಂಬಾಣಿ, ಕಬೀರಾನಂದಾ ಮಠ ಸೇರಿದಂತೆ ವಿವಿಧ ಮಠ ಹಾಗೂ ಧರ್ಮಗುರುಗಳನ್ನು ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.

    ಇದನ್ನೂ ಓದಿ: ನಾನು ನಂಬಿದವರೇ ನನ್ನ ಕತ್ತು ಕೊಯ್ದರು | ಶಾಸಕ ಚಂದ್ರಪ್ಪ ವಾಗ್ದಾಳಿ

    ಈ ವೇಳೆ ಮಾತನಾಡಿದ ಅವರು, ಯಾವುದೇ ಕೆಲಸ ಆರಂಭಿಸುವ ಮುನ್ನ ದೇವರು, ಧರ್ಮಗುರುಗಳು, ಹಿರಿಯರ ಆಶೀರ್ವಾದ ಪಡೆದು ಮುನ್ನಡೆಯುವುದು ನಮ್ಮ ಸಂಸ್ಕೃತಿ. ಭಾರತ ವಿಶ್ವದಲ್ಲಿಯೇ ಅತ್ಯಂತ ಉನ್ನತ ಸಂಸ್ಕøತಿ ಹೊಂದಿದ್ದು, ಪ್ರಾದೇಶಿಕವಾಗಿ ಭಿನ್ನವಾಗಿದ್ದರೂ ದೇವರು ಮತ್ತು ಜನರ ಮೇಲೆ ನಂಬಿಕೆ ಹೊಂದಿದ ವ್ಯಕ್ತಿ ಎಂದೂ ಸಂಕಷ್ಟಕ್ಕೆ ಸಿಲುಕಿದ ಉದಾಹರಣೆ ಇಲ್ಲ ಎಂದು ಹೇಳಿದರು.

    ನೂರಾರು ಜಾತಿ, ಹತ್ತಾರು ಧರ್ಮ, ವಿವಿಧ ಆಚರಣೆ, ಅನೇಕ ಭಾಷೆಗಳಲ್ಲಿ ಏಕತೆ ಹೊಂದಿರುವ ಭಾರತೀಯರ ಸಂಸ್ಕಾರ, ಸಂಸ್ಕೃತಿ, ನಡೆ-ನುಡಿ ಶ್ರೀಮಂತವಾಗಿದೆ. ಜೊತೆಗೆ ಇಲ್ಲಿನ ಜನರ ಸೌಹಾರ್ದ ಬದುಕು ಮಾದರಿ ಆಗಿದೆ. ಸ್ವಾಮಿ ವಿವೇಕಾನಂದ, ಬುದ್ಧ, ಬಸವ, ಕನಕ, ವಾಲ್ಮೀಕಿ, ಶ್ರೀಕೃಷ್ಣ, ಗಾಂಧೀಜಿ, ಅಂಬೇಡ್ಕರ್ ಸೇರಿ ಅನೇಕ ಮಹನೀಯರು, ಸಂತರು, ದಾರ್ಶನಿಕರ ಚಿಂತನೆಗಳು ನಾಡಿನ ಸೌಹಾರ್ದತೆಗೆ ಬುನಾದಿ ಹಾಕಿದ್ದಾರೆ ಎಂದು ತಿಳಿಸಿದರು.

    ಇದನ್ನೂ ಓದಿ: ಗೋವಿಂದ ಕಾರಜೋಳ ಗೆ ಗೋ ಬ್ಯಾಕ್ ಸ್ವಾಗತ

    ಆದರೆ ಈಚೆಗೆ ಕೆಲವರು ರಾಜಕೀಯ ಕಾರಣಕ್ಕಾಗಿ ಈ ಸೌಹಾರ್ಧತೆ ಹಾಗೂ ಶಾಂತಿಯ ನಾಡಿನಲ್ಲಿ ಜಾತಿ, ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕಾದ ಜವಾಬ್ದಾರಿ ನಾಗರಿಕರ ಮೇಲೆ ಇದೆ ಎಂದು ಹೇಳಿದರು.

    ಚುನಾವಣೆಗಳು ಪ್ರಜಾಪ್ರಭುತ್ವದ ಹಬ್ಬವಿದ್ದಂತೆ. ಈ ಸಂದರ್ಭದಲ್ಲಿ ಪ್ರತಿಸ್ಪರ್ಧಿಗಳನ್ನು ಎದುರಾಳಿ, ಚುನಾವಣೆಯನ್ನು ಸಮರ, ಯುದ್ಧ ಎಂಬ ಮಾತುಗಳು ಸರಿಯಲ್ಲ. ನಾವೆಲ್ಲರೂ ಸಹೋದರರು. ಚುನಾವಣೆ ಸಂದರ್ಭದಲ್ಲಿ ಗೆಲುವಿಗಾಗಿ ಸ್ಪರ್ಧೆ ಅನಿವಾರ್ಯ. ಅದು ದ್ವೇಷಕ್ಕೆ ತಿರುಗಬಾರದು. ಜೊತೆಗೆ ಸಜ್ಜನಿಕೆ, ಎಲ್ಲ ಜನರ ಪ್ರೀತಿ ಗಳಿಸುವ ಗುಣ ರಾಜಕಾರಣಿಗಳಲ್ಲಿ ಹೆಚ್ಚಬೇಕು. ಸುಳ್ಳು, ಜಾತಿ, ಧರ್ಮಗಳನ್ನು ಮುಂದಿಟ್ಟು ಜನರ ಮನಸ್ಸು ಗೆಲ್ಲುವುದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದರು.

    ಇದನ್ನೂ ಓದಿ: ಏ.4 ರ ವರೆಗೆ ನಾಮಪತ್ರ ಸ್ವೀಕಾರ

    ಜನರು ಹೆಚ್ಚು ಪ್ರಜ್ಞಾವಂತರು ಎಂಬುದನ್ನು ಕಳೆದ ವರ್ಷ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆ ಫಲಿತಾಂಶವೇ ಸ್ಪಷ್ಟ ಉದಾಹರಣೆ. ಎಷ್ಟೇ ಅಬ್ಬರ, ಸುಳ್ಳುಗಳು, ರಂಗು-ರಂಗು ಪ್ರಚಾರಕ್ಕೆ ಜನರು ಮಾರು ಹೋಗುವುದಿಲ್ಲ ಎಂಬುದು ದೃಢಪಟ್ಟಿದೆ.

    ಸತ್ಯ-ಸುಳ್ಳು ಯಾವುದು, ಯಾವ ಪಕ್ಷ, ಯಾವ ನಾಯಕರು ಜನರ ಹಿತ ಬಯಸುತ್ತಾರೆ ಎಂಬ ಚಿಂತನೆ ಮಾಡಿ ಮತ ಚಲಾಯಿಸುತ್ತಾರೆ. ಆದ್ದರಿಂದಲೇ ಕಾಂಗ್ರೆಸ್ ಪಕ್ಷ ಎಲ್ಲರ ನಿರೀಕ್ಷೆ ಮೀರಿ ರಾಜ್ಯದಲ್ಲಿ 135 ಸ್ಥಾನ ಗೆದ್ದು, ಜನಪರ ಆಡಳಿತ ನೀಡಲು ಸಾಧ್ಯವಾಗಿದೆ. ಇದು ಲೋಕಸಭಾ ಚುನಾವಣೆ ಫಲಿತಾಂಶದಲ್ಲೂ ಮರುಕಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಇದನ್ನೂ ಓದಿ: ನಿವೇಶನ ಹಂಚಿಕೆಗೆ ಆಗ್ರಹಿಸಿ ರಸ್ತೆ ಬಂದ್

    ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದ 25 ಮಂದಿ ಕೂಡ ಸ್ಪರ್ಧೆಗೆ ಅರ್ಹರಿದ್ದರು. ಆದರೆ ಪಕ್ಷ ಎಲ್ಲ ರೀತಿಯ ಚಿಂತನೆ ನಡೆಸಿ ನನಗೆ ಅವಕಾಶ ಮಾಡಿಕೊಟ್ಟಿದೆ. ಉಳಿದವರಿಗೆ ಪಕ್ಷ ಬೇರೆ ರೀತಿ ಸ್ಥಾನಮಾನ ಕೊಡಲಿದೆ. ಅದಕ್ಕೆ ಮುಖ್ಯವಾಗಿಪಕ್ಷನಿಷ್ಠೆ ಅಗತ್ಯ. ಈಗಾಗಲೇ ಬಹಳಷ್ಟು ಮಂದಿಗೆ ಮಂಡಳಿ-ನಿಗಮದಲ್ಲಿ ಸ್ಥಾನಮಾನ ನೀಡಿದೆ. ರಾಜಕಾರಣದಲ್ಲಿ ತಾಳ್ಮೆ ಮುಖ್ಯ ಎಂದು ಹೇಳಿದರು.

    ಇದನ್ನೂ ಓದಿ: ಹೆದ್ದಾರಿಯಲ್ಲಿ ಟಯರ್ ಸ್ಫೋಟ ವಾಹನ ಪಲ್ಟಿ ಓರ್ವ ಮೃತ

    ಕ್ಷೇತ್ರದಲ್ಲಿ ಏಳು ಮಂದಿ ಶಾಸಕರು, ಹಾಲಿ-ಮಾಜಿ ಸಚಿವರು, ನೂರಾರು ಮುಖಂಡರು, ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕರ್ತರ ಪಡೆ ಇದೆ. ಈಗಾಗಲೇ ಇವರೆಲ್ಲರೂ ಚುನಾವಣೆ ಕಾರ್ಯದಲ್ಲಿ ಮಗ್ನರಾಗಿದ್ದಾರೆ ಎಂದರು.

    ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ಗುಡುಗಿದ ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ

    ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ರೆಡ್ಡಿ, ಎಸ್‍ಟಿಸೆಲ್ ಜಿಲ್ಲಾಧ್ಯಕ್ಷ ಜಯಣ್ಣ, ಕಾಂಗ್ರೆಸ್ ಮುಖಂಡರುಗಳಾದ ಪ್ರಭುಸ್ವಾಮಿ, ಯೂಸುಫ್, ಜಗದೀಶ್, ಮಲ್ಲೇಶ್, ನಾಗರಾಜ್, ಬಂಡೆ ಓಬಣ್ಣ, ರಾಜು, ಮಂಜಕ್ಕ, ಹನುಮಂತಪ್ಪ, ಶಿವಾರೆಡ್ಡಿ, ವಿಶ್ವನಾಥ್ ರೆಡ್ಡಿ, ಗೊರಸಮುದ್ರ ಓಬಣ್ಣ, ಮುದಿಯಪ್ಪ, ಬಸಣ್ಣ, ಕಾಟಯ್ಯ. ಶ್ರೀಕಾಂತ್ ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಲೋಕಸಮರ 2024

    To Top