CHITRADURGA NEWS | 01 SEPTEMBER 2024
ಚಿತ್ರದುರ್ಗ: ಚಿತ್ರದುರ್ಗದ ಲಂಕೇಶ್ ವಿಚಾರ ವೇದಿಕೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ನಾಡು-ನುಡಿ ಬಳಗದ ಸಹಯೋಗಯಿಂದ ನಗರದ ತರಾಸು ರಂಗಮಂದಿರದಲ್ಲಿ ಇಂದು ಸಂಜೆ 6 ಗಂಟೆಗೆ ಬೆಂಗಳೂರಿನ ಜಂಗಮ ಕಲೆಕ್ಟಿವ್ ನಾಟಕ ತಂಡದಿಂದ ‘ಬಾಬ್ ಮಾರ್ಲಿ ಫ್ರಂ ಕೋಡಿಹಳ್ಳಿ'(Bob Marley From Kodihalli) ನಾಟಕ ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ.
ಕ್ಲಿಕ್ ಮಾಡಿ ಓದಿ: Mp Office: ಸಂಸದ ಗೋವಿಂದ ಕಾರಜೋಳ ಹೊಸ ಕಚೇರಿ ಹೇಗಿದೆ | ಲೋಕಸಭಾ ಸದಸ್ಯರ ಕಚೇರಿ ವಿಳಾಸ ಇಲ್ಲಿದೆ ನೋಡಿ
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಉದ್ಘಾಟಿಸಲಿದ್ದಾರೆ. ನಾಟಕದ ಪೋಸ್ಟರ್ ಬಿಡುಗಡೆಯನ್ನು ಜೆಡಿಎಸ್ ರಾಜ್ಯ ಮುಖಂಡ ಬಿ. ಕಾಂತರಾಜ್ ಅನಾವರಣಗೊಳಿಸುವರು. ಶಾಸಕ ಕೆ.ಸಿ. ವೀರೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿ ಸಿಇಓ ಸೋಮಶೇಖರ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖ, ಮಾಧ್ಯಮ ಆಕಾಡೆಮಿ ಸದಸ್ಯ ಹಾಗೂ ಪತ್ರಕರ್ತ ಎಂ.ಎನ್. ಅಹೋಬಳಪತಿ, ಕಾರ್ಯ ನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಗೌಡಗೆರೆ, ಸಾಮಾಜಿಕ ಚಿಂತಕ ಕೋಡಿಹಳ್ಳಿ ಸಂತೋಷ್, ವಕೀಲ ದಾಸರಹಳ್ಳಿ ರಾಜು, ಉದ್ಯಮಿ ಅಹೋಬಳ ಅರುಣ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number