
ಚಿತ್ರದುರ್ಗ ನ್ಯೂಸ್.ಕಾಂ: ಚಿತ್ರದುರ್ಗ ನಗರದಲ್ಲಿ ಮನೆಯೊಂದರಲ್ಲಿ ಐದು ಜನರ ಅಸ್ಥಿಪಂಜರ ಪತ್ತೆಯಾಗಿ ಜನ ಶಾಕ್‍ನಲ್ಲಿರುವಾಗಲೇ ಮತ್ತೊಂದು ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ತಾಲೂಕಿನ ಸಿದ್ದವ್ವನದುರ್ಗ ಗ್ರಾಮದ ಜಮೀನೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಇದನ್ನೂ ಓದಿ: ಡೆತ್‍ನೋಟ್ ರಹಸ್ಯ | ಐವರ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ತಿರುವು
ಚಿತ್ರದುರ್ಗ ತಾಲೂಕು ಮುದ್ದಾಪುರ ಗ್ರಾಮದ ಬಸವರಾಜಪ್ಪ(68) ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದು, ಈ ಸಂಬಂಧ ತುರುವನೂರು ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಪ್ರಕರಣ ದಾಖಲಾಗಿತ್ತು.
ಈಗ ಬಸವರಾಜಪ್ಪ ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆಯಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಕೊಲೆ ಮಾಡಿ ಜಮೀನಿನಲ್ಲಿ ಹೂತಿಟ್ಟಿದ್ದ ಶವವನ್ನು ಪ್ರಾಣಿಗಳು ಹೊರಗೆ ಎಳೆದು ತಂದಿರುವ ಮಾಹಿತಿ ಲಭ್ಯವಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
