CHITRADURGA NEWS | 25 JUNE 2025
ಚಿತ್ರದುರ್ಗ: ಚಿತ್ರದುರ್ಗ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಆವರಣದಲ್ಲಿ ಬುಧವಾರ ಬುಲೆರೋ ನಿಯೋ ಹೊಸ ಮಾದರಿಯ ವಾಹನವನ್ನು ಪೊಲೀಸ್ ಇಲಾಖೆಗೆ ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ಹಸ್ತಾಂತರಿಸಿದರು.
ಚಳ್ಳಕೆರೆ ಶಾಸಕರಾದ ಟಿ.ರಘುಮೂರ್ತಿಯವರು 2024-25ನೇ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಅಂದಾಜು ರೂ.11.7 ಲಕ್ಷ ವೆಚ್ಚದಲ್ಲಿ ಒಂದು ಬುಲೆರೋ ನಿಯೋ ವಾಹನವನ್ನು ಪೊಲೀಸ್ ಇಲಾಖೆಗೆ ನೀಡಿದ್ದಾರೆ.
Also Read: ಗೈರು ಹಾಜರಿ | ಇಬ್ಬರು ಸರ್ಕಾರಿ ನೌಕರರ ಅಮಾನತು
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಚಿತ್ರದುರ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ದಿನಕರ್, ಚಳ್ಳಕೆರೆ ಪೊಲೀಸ್ ಉಪಾಧೀಕ್ಷಕ ರಾಜಣ್ಣ, ಪೊಲೀಸ್ ಇನ್ಸ್ಪೆಕ್ಟರ್ಗಳಾದ ಶಶಿಕುಮಾರ್, ತಿಮ್ಮಣ್ಣ, ಮುತ್ತುರಾಜ್, ಉಮೇಶ್ ಸೇರಿದಂತೆ ಮತ್ತಿತರರು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

