Connect with us

    ಪಂಡಿತ್ ಪುಟ್ಟರಾಜ ಸಾಹಿತ್ಯ ಪುರಸ್ಕಾರಕ್ಕೆ ಪುಸ್ತಕ ಆಹ್ವಾನ | 10 ಕೃತಿಗೆ ಶ್ರೇಷ್ಠ ಕೃತಿ ರತ್ನ ಸಮ್ಮಾನ

    Pandit Puttaraja

    ಮುಖ್ಯ ಸುದ್ದಿ

    ಪಂಡಿತ್ ಪುಟ್ಟರಾಜ ಸಾಹಿತ್ಯ ಪುರಸ್ಕಾರಕ್ಕೆ ಪುಸ್ತಕ ಆಹ್ವಾನ | 10 ಕೃತಿಗೆ ಶ್ರೇಷ್ಠ ಕೃತಿ ರತ್ನ ಸಮ್ಮಾನ

    CHITRADURGA NEWS | 09 JUNE 2024
    ಚಿತ್ರದುರ್ಗ:‌ ಡಾ.ಪಂ.ಪುಟ್ಟರಾಜ ಸೇವಾ ಸಮಿತಿಯಿಂದ ಪಂ.ಪುಟ್ಟರಾಜ ಸಾಹಿತ್ಯ ಪುರಸ್ಕಾರ ರಾಜ್ಯ ಪ್ರಶಸ್ತಿಗೆ ಪುಸ್ತಕ ಆಹ್ವಾನಿಸಲಾಗಿದೆ.

    2023-24 ಸಾಲಿನಲ್ಲಿ ಪ್ರಕಟವಾದ, ಕನ್ನಡ, ಹಿಂದಿ ಮತ್ತು ಸಂಸ್ಕೃತ ಭಾಷೆಯ ಸಾಹಿತ್ಯದ ಎಲ್ಲಾ ಪ್ರಕಾರಗಳ ಕೃತಿಗಳನ್ನು ಸ್ಪರ್ಧೆಗೆ ಆಹ್ವಾನಿಸಲಾಗಿದೆ. ಪ್ರಶಸ್ತಿಗೆ ಕನ್ನಡದ ಕೃತಿಗಳನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ. ಹಿಂದಿ ಮತ್ತು ಸಂಸ್ಕೃತ ಕೃತಿಗಳಿಗೆ ಪುಟ್ಟರಾಜ ಸಾಹಿತ್ಯ ಸಮ್ಮಾನ ನೀಡಲಾಗುತ್ತದೆ.

    ಪ್ರಶಸ್ತಿಯು 5 ಸಾವಿರ ರೂ ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ಪ್ರಶಸ್ತಿಗೆ ಆಯ್ಕೆಯಾದ ಕೃತಿಕರ್ತರಿಗ ಪುಣ್ಯಸ್ಮರಣೋತ್ಸವದ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ವಿವಿಧ ಪ್ರಕಾರದ 10 ಕೃತಿಗಳನ್ನು ಗುರುತಿಸಿ ವರ್ಷದ ಶ್ರೇಷ್ಠ ಕೃತಿ ರತ್ನ ಸಮ್ಮಾನ ನೀಡಿ ಗೌರವಿಸಲಾಗುತ್ತದೆ.

    ಕ್ಲಿಕ್ ಮಾಡಿ ಓದಿ: ಫೋನ್‌ಪೇ ಆ್ಯಕ್ಟಿವೇಷನ್‌ ಕಾಲ್‌ | ಕೆಲವೇ ನಿಮಿಷಕ್ಕೆ ₹1.75 ಲಕ್ಷ ವಂಚನೆ

    ಆಸಕ್ತ ಲೇಖಕರು ತಮ್ಮ ಭಾವಚಿತ್ರ ಸಹಿತ ಪರಿಚಯ ಪತ್ರ, ಎಪ್ರಿಲ್‌ 1, 2023 ರಿಂದ 2024 ಮಾರ್ಚ್‌ 31 ರೊಳಗಾಗಿ ಪ್ರಕಟವಾದ 3 ಕೃತಿಗಳೊಂದಿಗೆ 10 ಜುಲೈ 2024 ರ ಒಳಗಾಗಿ ಸಿ.ಕೆ.ಎಚ್‌.ಶಾಸ್ತ್ರೀ (ಕಡಣಿ) ಸದಸ್ಯರು: ಪಂ.ಪುಟ್ಟರಾಜ ಸಾಹಿತ್ಯ ಪುರಸ್ಕಾರ ಪ್ರಶಸ್ತಿ ಆಯ್ಕೆ ಸಮಿತಿ ‘ಗಿರಿಜಾ ನಿವಾಸ’ ಪಂಚಾಕ್ಷರಿ ನಗರ 3ನೆಯ ಅಡ್ಡರಸ್ತೆ ಗದಗ-582101. ವಿಳಾಸಕ್ಕ ಸಲ್ಲಿಸಬೇಕು ಎಂದು ಕಾರ್ಯಕಾರಿಣಿ ಸದಸ್ಯೆ ಡಾ. ಸುಮಾ ಹಡಪದ ಹಳಿಯಾಳ ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top