
CHITRADURGA NEWS | 19 APRIL 2026
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ಹಾನಗಲ್ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ.
ಸ್ನೇಹಿತರೊಟ್ಟಿಗೆ ಈಜಲು ತೆರಳಿದ ವೇಳೆ, ಈಜು ಬಾರದೇ ನೀರಿನಲ್ಲಿ ಮುಳುಗಿದ್ದಾನೆ. ಹಳೇಕೆರೆ ಸಮೀಪದ ಸರ್ಕಾರಿ ಕೃಷಿ ಹೊಂಡದಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
ಬೇಸಿಗೆ ರಜೆಯಲ್ಲಿ ಸ್ನೇಹಿತರ ಜತೆಗೂಡಿ ಈಜು ಕಲಿಯಲು ಹೋಗಿದ್ದಾರೆ. ಹಾನಗಲ್ ಗ್ರಾಮದ 9ನೇ ತರಗತಿ ವಿದ್ಯಾರ್ಥಿ ಕಾರ್ತಿಕ್ ಮೃತ ದುರ್ದೈವಿ.
ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರಲ್ಲಿ ಮುಗಿಲು ಮುಟ್ಟಿದೆ ಆಕ್ರಂದನ. ಮೊಳಕಾಲ್ಮುರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

