CHITRADURGA NEWS | 12 September 2026
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಈಜಲು ಹೋದ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಹೊಸದುರ್ಗ ತಾಲೂಕಿನ ದೊಡ್ಡಘಟ್ಟ ಗ್ರಾಮದ ಮಾರುತಿ(17) ಮೃತ ಬಾಲಕ.
ಇದನ್ನೂ ಓದಿ: ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮಯಿಂದ ಸಾಲ-ಸೌಲಭ್ಯಕ್ಕೆ ಅರ್ಜಿ ಅಹ್ವಾನ
ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಪ್ರಾಯೋಗಿಕವಾಗಿ ನೀರು ಹರಿಸುತ್ತಿದ್ದು, ಈ ವೇಳೆ ಈಜಲು ತೆರಳಿದ್ದ ಮಾರುತಿ ಮೃತಪಟ್ಟಿದ್ದಾನೆ.
ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು, ಬಾಲಕನ ಪೋಷಕರಾದ ದೀಪ ಮತ್ತು ವಸಂತ ದಂಪತಿಯ ಆಕ್ರಂಧನ ಮುಗಿಲು ಮುಟ್ಟಿತ್ತು.
ಕಾಲುವೆಯಲ್ಲಿನ ಕೆಸರಲ್ಲಿ ಸಿಲುಕಿ ಹೊರಬರಲಾಗದೆ ಸಾವಿನ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ತುರುವನೂರು ಹೋಬಳಿಮಟ್ಟದ ಕ್ರೀಡಾಕೂಟ | ಕೂನಬೇವು ಶಾಲಾ ವಿದ್ಯಾರ್ಥಿಗಳ ಉತ್ತಮ ಸಾಧನೆ
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ತೆರಳಿ ಮೃತದೇಹ ಹೊರ ತೆಗೆದಿದ್ದು , ಹೊಸದುರ್ಗ ಠಾಣೆ PI ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________


ಸಕಾಲದಲ್ಲಿ ಸಮೃದ್ಧಿ ಮಾಹಿತಿ ನೀಡುವ ನಿಮಗೆ ವಂದನೆಗಳು 🙏😊