CHITRADURGA NEWS | 13 SEPTEMBER 2024
ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ನಿಗಮಗಳಾದ ಡಾ.ಬಿ.ಆರ್.ಅಂಬೇಡ್ಕರ್(BR Ambedkar) ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭೀವೃದ್ಧಿ ನಿಗಮ ಹಾಗೂ ಪ.ಜಾತಿ ಅಲೆಮಾರಿ, ಅರೆ ಅಲೆಮಾರಿಗಳ ಅಭಿವೃದ್ಧಿ ನಿಗಮಗಳಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆ(Scheme)ಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕ್ಲಿಕ್ ಮಾಡಿ ಓದಿ: Arecanut: ಅಡಿಕೆ ಧಾರಣೆ | ಭೀಮಸಮುದ್ರ ಮಾರುಕಟ್ಟೆಯಲ್ಲಿ ಇಂದಿನ ರಾಶಿ ಬೆಲೆ ಎಷ್ಟು ಗೊತ್ತಾ
ಅರ್ಜಿ ಸಲ್ಲಿಸಲು ಅ.10 ಕೊನೆಯ ದಿನವಾಗಿದೆ. ಪರಿಶಿಷ್ಟ ಜಾತಿ ಸಮುದಾಯಗಳ ಆರ್ಥಿಕ ಅಭಿವೃದ್ಧಿಗಾಗಿ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ-1, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ-2, ಉದ್ಯಮಶೀಲತಾ ಅಭಿವೃದ್ಧಿ ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.
ಈ ಯೋಜನೆಗಳ ಕುರಿತಾಗಿ ಸವಿವರವಾದ ಮಾಹಿತಿಯನ್ನು ಸಮಾಜ ಕಲ್ಯಾಣ ಇಲಾಖೆಯ ಸಾಲ ಸೇವೆಗಳ ಪೋರ್ಟಲ್ ವೆಬ್ಸೈಟ್ https://swdcorp.karnataka.gov.
ಆಸಕ್ತರು https://sevasindhu.karnataka.
ಕ್ಲಿಕ್ ಮಾಡಿ ಓದಿ: DC warning: ನಿರ್ಲಕ್ಷ್ಯ ತೋರಿದರೆ ಎಫ್ಐಆರ್ | ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ
2023-24ನೇ ಸಾಲಿನಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ 08194-200214 ಅಥವಾ ಆಯಾ ತಾಲ್ಲೂಕಿನ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
