
CHITRADURGA NEWS | 07 SEPTEMBER 2O25
ಚಿತ್ರದುರ್ಗ: ಬ್ರಹ್ಮಶ್ರೀ ನಾರಾಯಣ ಗುರುಗಳ ಸಿದ್ದಾಂತಗಳು ಸರ್ವಕಾಲಿಕ ಮೌಲ್ಯಗಳನ್ನು ಹೊಂದಿವೆ ಎಂದು ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ಪೀಠಾಧಿಪತಿ ಸ್ವಾಮಿ ವಿಖ್ಯಾತಾನಂದ ಹೇಳಿದರು.
ಇದನ್ನೂ ಓದಿ: ಹೊಳಲ್ಕೆರೆ ಶಾಸಕ ಚಂದ್ರಪ್ಪ ಅವರಿಗೆ ಸೇರಿದ ಕಾರು ಅಪಘಾತ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಸಮಾರಂಭ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ನಂತರ ಆರ್ಯ ಈಡಿಗರ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಂಡಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ, ಸಿದ್ದಾಂತಗಳು, ಚಿಂತನೆಗಳು ಪ್ರತಿ ಕಾಲಘಟ್ಟಕ್ಕೂ ಪ್ರಚಲಿತವಾಗಿದ್ದು, ಸರ್ವಕಾಲಿಕವಾಗಿವೆ. ನಾವುಗಳು ನಾರಾಯಣ ಗುರುಗಳ ಸಿದ್ದಾಂತವನ್ನು ಜೀವಿತದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದು ತಿಳಿಸಿದ ಅವರು, ನಮ್ಮಲ್ಲಿರುವ ಸಂಪತ್ತಿನ ಹಾಗೂ ಸಮಯದ ಸ್ವಲ್ಪ ಭಾಗವನ್ನು ಸಮಾಜದ ಏಳಿಗೆಗಾಗಿ ವಿನಿಯೋಗಿಸಬೇಕು ಎಂದು ಹೇಳಿದರು.
ಚಿತ್ರದುರ್ಗ ಜಿಲ್ಲಾ ಆರ್ಯ ಈಡಿಗರ ಸಂಘ ಅಧ್ಯಕ್ಷ ಹೆಚ್.ಜೀವನ್ ಮಾತನಾಡಿ, ಸಮುದಾಯದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಜಿಲ್ಲಾ ಸಂಘ ಹೆಚ್ಚಿನ ಒತ್ತು ನೀಡುತ್ತಿದೆ. ಕಳೆದ ಐದು ವರ್ಷಗಳಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಮುದಾಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ, ಸನ್ಮಾನಿಸಿ, ಗೌರವಿಸುವ ಕೆಲಸ ಮಾಡಲಾಗುತ್ತಿದೆ. ಇದರ ಜೊತೆಗೆ ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಕಾರ್ಯಾಗಾರಗಳನ್ನು ನಡೆಸಿ, ಶೈಕ್ಷಣಿಕ ಮಾರ್ಗದರ್ಶನವನ್ನೂ ನೀಡಲಾಗುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ: ಗೌರಸಂದ್ರ ಮಾರಮ್ಮ ಜಾತ್ರೆ | ಸೆ.11ರವರೆಗೆ ವಿವಿಧ ಪೂಜಾ ಕಾರ್ಯ
ವಕೀಲರು, ಹಿರಿಯ ಪತ್ರಕರ್ತರು ಹಾಗೂ ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ ಜಿಲ್ಲಾಧ್ಯಕ್ಷ ಮಾಲತೇಶ್ ಅರಸ್ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ, ಚಿತ್ರದುರ್ಗ ಜಿಲ್ಲಾ ಆರ್ಯ ಈಡಿಗರ ಸಂಘ ಪ್ರಧಾನ ಕಾರ್ಯದರ್ಶಿ ಟಿ.ಮಂಜುನಾಥ್, ಉಪಾಧ್ಯಕ್ಷ ಟಿ.ಸ್ವಾಮಿ, ಮಹಿಳಾ ಸಂಘದ ಅಧ್ಯಕ್ಷೆ ಅನುರಾಧ ರವಿಕುಮಾರ, ತಾಲ್ಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷರು ಹಾಗೂ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಓ.ಜಗದೀಶ, ಪ್ರಧಾನ ಕಾರ್ಯದರ್ಶಿ ಆರ್.ಕುಮಾರಸ್ವಾಮಿ, ಖಜಾಂಚಿ ನಾಗೇಂದ್ರ ಪ್ರಸಾದ್, ಸಂಘಟನಾ ಕಾರ್ಯದರ್ಶಿ ನಾಗರಾಜ್, ಚಿತ್ರದುರ್ಗ ಆರ್ಯ ಈಡಿಗರ ಸಂಘದ ಮುಖಂಡರಾದ ಇ.ಎನ್.ಲಕ್ಷ್ಮೀಕಾಂತ, ಅಜಯ್ ಕುಮಾರ್ ಸೇರಿದಂತೆ ಮತ್ತಿತರರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಮಾಡುವುದು ನಮಗೆ ಖುಷಿ ತರುತ್ತದೆ. ಆದರೆ ಈಡಿಗ ಸಂಘಟನೆಯ ಅಧ್ಯಕ್ಷ ಉಪಾಧ್ಯಕ್ಷ ಕಾರ್ಯದರ್ಶಿ ಅಂತಾ ಕರಿಸಕೊಳ್ಳೋ ವ್ಯಕ್ತಿಗಳೇ ನಿಮಗೆ ಯೋಗ್ಯತೆ ಅನ್ನೋದು ಇದ್ರೇ ಸರಕಾರದಿಂದ ಅನುದಾನವನ್ನು ಪಡೆದು ವಿಧ್ಯಾರ್ಥಿ/ವಿದ್ಯಾರ್ಥಿನಿ ನಿಲಯಗಳನ್ನು ಮಾಡಿಸಿ . ಆಯೋಗ್ಯ್ರ..!