CHITRADURGA NEWS | 01 AUGUST 2026
ಚಿತ್ರದುರ್ಗ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ 2026-27ನೇ ಸಾಲಿನ ‘ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ’ಯಡಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಂದ ಸಾಲ-ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಸಾಮರ್ಥ್ಯವಂತರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ | ರಿಪುನ್ ಬೋರಾ
ಈ ಯೋಜನೆಯಡಿ ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ (ಕ್ಯಾಟರಿಂಗ್), ಅಂಗಡಿ, ಟ್ಯಾಕ್ಸಿ ಹಾಗೂ ಟೈಲರಿಂಗ್ ಉದ್ದೇಶಗಳಿಗಾಗಿ ಕನಿಷ್ಠ ರೂ.1 ಲಕ್ಷ ದಿಂದ ಗರಿಷ್ಠ ರೂ.2 ಲಕ್ಷಗಳವರೆಗೆ ಸಾಲ ನೀಡಲಾಗುತ್ತದೆ. ಒಟ್ಟು ಮೊತ್ತದಲ್ಲಿ ಶೇ. 20 ರಷ್ಟು ಸಬ್ಸಿಡಿ (ಸಹಾಯಧನ) ಲಭ್ಯವಿದ್ದು, ಉಳಿದ ಶೇ.80 ರಷ್ಟು ಸಾಲದ ಮೊತ್ತಕ್ಕೆ ಶೇ. 4 ರ ಬಡ್ಡಿದರದಲ್ಲಿ ಒಟ್ಟು 34 ಕಂತುಗಳಲ್ಲಿ ಮರು ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿದಾರರು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿದ್ದು, ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣ ಪತ್ರ ಹೊಂದಿರಬೇಕು ಹಾಗೂ ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು. 18 ರಿಂದ 65 ವರ್ಷದೊಳಗಿನವರು ಈ ಯೋಜನೆಗೆ ಅರ್ಹರಾಗಿದ್ದು, ಶೇ. 33 ರಷ್ಟು ಮಹಿಳೆಯರಿಗೆ ಹಾಗೂ ಶೇ.5 ರಷ್ಟು ವಿಶೇಷ ಚೇತನರಿಗೆ ಮೀಸಲಾತಿ ಇರಲಿದೆ.
ಒಂದು ಕುಟುಂಬದಿಂದ ಒಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅವಕಾಶವಿರುವುದಿಲ್ಲ. ಅರ್ಜಿದಾರರ ಆಧಾರ್ ಸಂಖ್ಯೆಯು ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಮತ್ತು ಸಾಲದ ಉದ್ದೇಶವನ್ನು ಅರ್ಜಿಯಲ್ಲಿ ಕನಿಷ್ಠ 10 ಪದಗಳಿಗಿಂತ ಕಡಿಮೆಯಿಲ್ಲದಂತೆ ಸ್ಪಷ್ಟವಾಗಿ ನಮೂದಿಸಬೇಕು.
ಇದನ್ನೂ ಓದಿ: ಕಾಂಗ್ರೆಸ್ ಕಚೇರಿಯಲ್ಲಿ ಸಂಘಟನ್ ಸೃಜನ್ ಸಭೆ | ಮುಖಂಡರು–ಕಾರ್ಯಕರ್ತರ ನಡುವೆ ವಾಗ್ವಾದ
ಆಸಕ್ತರು ಮಂಡಳಿಯ ವೆಬ್ಸೈಟ್ www.ksbdb.karnataka.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಆಗಸ್ಟ್ 31, 2026ರ ಸಂಜೆ 5.30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8762249230 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

