
CHITRADURGA NEWS | 27 MAY 2026
ಚಿತ್ರದುರ್ಗ: ಜೂ.13 ರಂದು ವಾಲ್ಮೀಕಿ ಭವನದಲ್ಲಿ ಬ್ರಾಂಡ್ ಚಿತ್ರದುರ್ಗ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಎಕಾನಮಿಕ್ ಫೋರಂ, ಚಿತ್ರದುರ್ಗ ಚಾಪ್ಟರ್‍ನ ಸಂಘಟನಾ ಕಾರ್ಯದರ್ಶಿ ಶಿವಪ್ರಸಾದ್ ತಿಳಿಸಿದರು.
ಇದನ್ನೂ ಓದಿ: ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಖಾಸಗಿ ಬಸ್ ಮಾಲಿಕರ ತೀರ್ಮಾನ
ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂಗಳು ಒಗ್ಗಟ್ಟಾಗಿ ವ್ಯಾಪಾರ ಉದ್ಯಮಗಳಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎನ್ನುವ ಉದ್ದೇಶದಿಂದ ಸಮಾವೇಶ ನಡೆಯಲಿದ್ದು, ಬೀದರ್‍ನಿಂದ ಹಿಡಿದು ಮೈಸೂರುವರೆಗೂ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬ್ರಾಂಡ್ ಹೆಸರಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
ಬೆಂಗಳೂರಿನಿಂದ ತಂಡ ಆಗಮಿಸಲಿದ್ದು, ಜಿಲ್ಲೆಯಲ್ಲಿ ಸಿಗುವ ಉತ್ಪನ್ನಗಳನ್ನು ಹೊರಗೆ ಕಳಿಸುವ ಪ್ರಯತ್ನ ಸಮಾವೇಶದ ಉದ್ದೇಶ ಎಂದು ಹೇಳಿದರು.
ರಾಜ್ಯದಲ್ಲಿ ಐದು ಸೊಸೈಟಿಯಿದೆ. ಚಿತ್ರದುರ್ಗದಲ್ಲಿ ವಿ.ಡಿ.ಸಾವರ್ಕರ್ ಸೌಹಾರ್ಧ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಆರಂಭಗೊಂಡಿದ್ದು, 25 ಲಕ್ಷ ರೂ.ಗಳ ಠೇವಣಿಯಿದೆ. ಆರ್ಥಿಕ ಅಭಿವೃದ್ದಿಯನ್ನು ಗಮನದಲ್ಲಿಟ್ಟುಕೊಂಡು ಸೊಸೈಟಿಯನ್ನು ಮುನ್ನಡೆಸಿಕೊಂಡು ಹೋಗಲಾಗುವುದು ಎಂದರು.
ಇದನ್ನೂ ಓದಿ: ತಾಂತ್ರಿಕ ಮತ್ತು ವೈದ್ಯಕೀಯ ಸ್ನಾತಕ ಪದವಿ ವಿದ್ಯಾಭ್ಯಾಸಕ್ಕಾಗಿ ಅರ್ಜಿ ಆಹ್ವಾನ
ಚಿತ್ರದುರ್ಗವನ್ನು ಲಾಜಿಸ್ಟಿಕ್ ಹಬ್ ಅನ್ನಾಗಿ ಮಾಡುವುದು. ಪ್ರವಾಸೋದ್ಯಮ ಅಭಿವೃದ್ದಿ, ಮೊಳಕಾಲ್ಮುರು ಸೀರೆಗಳು ಮತ್ತು ಕೈಮಗ್ಗ ಉದ್ಯಮದ ಬೆಳವಣಿಗೆ ಕೃಷಿ ಮತ್ತು ಕೃಷಿ ಆಧಾರಿತ ಉದ್ಯಮಗಳ ಅಭಿವೃದ್ದಿ, ಚಿತ್ರದುರ್ಗದ ರಫ್ತು ಸಾಮಥ್ರ್ಯ ಹೊಂದಿರುವ ಉತ್ಪನ್ನಗಳು, ಡಿಆರ್‍ಡಿಓ/ಐಐಎಸ್‍ಸಿ/ಇಸ್ರೊ ಸಂಬಂಧಿತ ಅವಕಾಶಗಳು, ಚಿತ್ರದುರ್ಗವನ್ನು ಕೈಗಾರಿಕಾ ಹಬ್ ಆಗಿ ರೂಪಿಸುವುದು, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ದಿ, ಮಹಿಳಾ ಉದ್ಯಮಿಗಳ ಬೆಳವಣಿಗೆ ಕುರಿತು ಸಮಾವೇಶದಲ್ಲಿ ಚರ್ಚಿಸಲಾಗುವುದೆಂದರು.
ರಾಘವೇಂದ್ರ ಮಾತನಾಡಿ, ಸ್ಥಳೀಯ ಯುವಕರಿಗೆ ವ್ಯಾಪಾರಸ್ಥರಿಗೆ ಉದ್ಯಮಿಗಳಿಗೆ ಅನುಕೂಲವಾಗಲಿ ಎನ್ನುವುದು ಸಮಾವೇಶದ ಉದ್ದೇಶ. ಕಾರ್ಯಾಗಾರದ ಜೊತೆ ಸ್ಟಾಲ್‍ಗಳನ್ನು ಹಾಕಲಾಗುವುದು. ಜಿಲ್ಲೆಯ ಎಲ್ಲಾ ಜನತೆ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ನಾಗೇಂದ್ರ, ಟಿ.ಎಲ್.ಅಶೋಕ್ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

