CHITRADURGA NEWS | 18 NOVEMBER 2026
ಚಿತ್ರದುರ್ಗ: ರಾಜ್ಯ ಹಾಗೂ ಜಿಲ್ಲೆಯಲ್ಲಿ ತೀವ್ರ ಬರ ತಾಂಡವವಾಡುತ್ತಿರುವ ಹಿನ್ನಲೆಯಲ್ಲಿ, ಈ ಬಾರಿ ಸರಳವಾಗಿ ಸಂತಶ್ರೇಷ್ಠ ಕನಕದಾಸ ಜಯಂತಿ ಆಚರಿಸಿ, ಜಯಂತಿ ಅನುದಾನವನ್ನು ಬರ ನಿರ್ವಹಣೆ ನೀಡುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಇದನ್ನೂ ಓದಿ: ಕರ್ನಾಟಕದ ಅತೀ ದೊಡ್ಡ ಪಿರಮಿಡ್ ಧ್ಯಾನ ಮಂದಿರ ಲೋಕಾರ್ಪಣೆ
ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಬುಧವಾರ ಸಮುದಾಯದ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡಿಸಿ ಅವರು ಮಾತನಾಡಿದರು.
ನೀತಿ ಸಂಹಿತೆ ಬರಲಿ ಅಥವಾ ಬರದಿರಲಿ ಈ ಬಾರಿ ಕನಕದಾಸರ ಜಯಂತಿ ಆಚರಣೆಯಲ್ಲಿ ಮೆರವಣಿಗೆ ಇರುವುದಿಲ್ಲ. ನ.27 ರಂದು ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಸಮುದಾಯದ ಮುಖಂಡರ ಸಮ್ಮುಖದಲ್ಲಿ ಸರಳವಾಗಿ ಜಯಂತಿ ಆಚರಿಸಲಾಗುವುದು. ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಹಾಗೂ ಕನಕದಾಸರ ಕೀರ್ತಿನೆಗಳ ಗಾಯನ ಕಾರ್ಯಕ್ರಮ ಆಯೋಜಿಸಲಾಗುವುದು. ಕಡ್ಡಾಯವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ತಪ್ಪದೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸುತ್ತೋಲೆ ಹೊರಡಿಸಲಾಗುವುದು ಎಂದರು.
ಇದೇ ವೇಳೆ ಮಾನವೀಯ ನೆಲೆಗಟ್ಟಿನಲ್ಲಿ ಇತರರಿಗೆ ಮಾದರಿಯಾಗುವಂತೆ, ಸರಳ ಜಯಂತಿ ಆಚರಣೆಗೆ ಸೂಚಿಸಿದ ಸಮುದಾಯದ ಮುಖಂಡರಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಭಿನಂಧಿಸಿದರು.
ಇದನ್ನೂ ಓದಿ: ನಿಮ್ಮ ಸಮಸ್ಯೆಗೆ ಸ್ಥಳದಲ್ಲೇ ಸಿಗಲಿದೆ ಪರಿಹಾರ | ನ.21ಕ್ಕೆ ಹಿರಿಯೂರಿಗೆ ಸಿಎಂ
ಸಭೆ ನಡಾವಳಿಯಲ್ಲಿ ಜಯಂತಿ ಅನುದಾನವನ್ನು ಬರ ನಿರ್ವಹಣೆ ನೀಡುವ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಿ, ನಿಯಮಗಳಲ್ಲಿ ಅವಕಾಶವಿದೆಯೇ ಎಂಬುದನ್ನು ಖಚಿತ ಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಗರಸಭೆ ವತಿಯಿಂದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದಲ್ಲಿನ ಕನಕದಾಸ ಪುತ್ಥಳಿಯನ್ನು ಸ್ವಚ್ಛಗೊಳಿಸಿ ಅಲಂಕಾರ ಮಾಡಬೇಕು. ಸಾರ್ವಜನಿಕರ ವೀಕ್ಷಣೆಗಾಗಿ ಪ್ರತಿ ಶನಿವಾರ ಹಾಗೂ ಭಾನುವಾರ ಪುತ್ಥಳಿ ಮುಂದಿನ ಕಾರಂಜಿಯನ್ನು ಚಾಲನೆ ಮಾಡುವ ಕೆಲಸವಾಗಬೇಕು. ಕನಕ ವೃತ್ತದಲ್ಲಿ ಟ್ಯಾಕ್ಟರ್ ಡಿಕ್ಕಿ ಹೊಡೆದು ಕಟ್ಟೆಗೆ ಹಾನಿಯಾಗಿದೆ. ಅದನ್ನು ಕೂಡಲೇ ದುರಸ್ಥಿ ಮಾಡಬೇಕು.
ಸಾರ್ವಜನಿಕರ ಹಿತದೃಷ್ಠಿಯಿಂದ ಕನಕ ವೃತ್ತದಲ್ಲಿ ಸಿ.ಸಿ. ಕ್ಯಾಮಾರ ಅಳವಡಿಸಬೇಕು. ಇದೇ ರೀತಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತ ಪೂರ್ಣ ಹಾಳಾಗಿದ್ದು, ಇದರ ಅಭಿವೃದ್ಧಿ ಈಗಾಗಲೇ ನಗರಸಭೆಯಿಂದ ಅನುದಾನ ನೀಡಲಾಗಿದೆ. ಕೂಡಲೇ ಕಾಮಗಾರಿ ಪೂರ್ಣಗೊಳಿಸಿ, ವೃತ್ತವನ್ನು ಸ್ಥಾಪಿಸುವ ಕೆಲಸವಾಗಬೇಕು. ಜಯಂತಿ ದಿನದಂದು ಪ್ರಮುಖ ವೃತ್ತಗಳಲ್ಲಿರುವ ಎಲ್ಲ ಮಹನೀಯರ ಪುತ್ಥಳಿಗಳನ್ನು ಸ್ವಚ್ಛಗೊಳಿಸಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಬೇಕು ಎಂದು ಸಮುದಾಯದ ಮುಖಂಡರು ಸಭೆಯಲ್ಲಿ ಕೋರಿದರು.
ಇದನ್ನೂ ಓದಿ: ತುಂಗಾದಿಂದ ಭದ್ರಾ ಜಲಾಶಯಕ್ಕೆ ನೀರು ಹರಿಸಲು ರೈತರ ಆಗ್ರಹ
ಆಹಾರ ಇಲಾಖೆ ಜಂಟಿ ನಿರ್ದೇಶಕ ಸಿದ್ರಾಮ ಮಾರಿಹಾಳ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಮಹೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ.ಗುರುನಾಥ್, ನಗರ ಸಭೆ ಆಯುಕ್ತೆ ಲಕ್ಷ್ಮಿ, ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷ ಶ್ರೀರಾಮ್, ಕಾರ್ಯದರ್ಶಿ ಬಿ.ಟಿ.ಜಗದೀಶ್, ಖಜಾಂಚಿ ಮುತ್ತುರಾಜ್, ಮಾಜಿ ನಗರ ಸಭೆ ಅಧ್ಯಕ್ಷ ಹೆಚ್.ಮಂಜಪ್ಪ ಸೇರಿದಂತೆ ಇತರೆ ಮುಖಂಡರು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

