
CHITRADURGA NEWS | 15 APRIL 2024
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಭರ್ಜರಿ ಚುನಾವಣಾ ಪ್ರಚಾರ ನಡೆಸುತ್ತಿದ್ದು, ಮತಬೇಟೆಗಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಂದೇ ವಾರದಲ್ಲಿ ಎರಡನೇ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿದ್ದಾರೆ.
ಇದರೊಟ್ಟಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಇಬ್ಬರೂ ಘಟಾನುಘಟಿಗಳು ಒಂದೇ ದಿನ ಜಿಲ್ಲೆಗೆ ಆಗಮಿಸುತ್ತಿರುವುದಕ್ಕೆ ಬಿಜೆಪಿ ಕಾರ್ಯಕರ್ತರು ಉತ್ಸಾಹ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶ್ರೀರಾಮನ ಕೃಪೆಯಿಂದ ಬದಲಾಗಲಿದೆ ಅದೃಷ್ಟ | ಇನ್ಮುಂದೆ ಈ ರಾಶಿಯವರಿಗೆ ಎಲ್ಲವೂ ಶುಭ
ಬೆಳಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯಲ್ಲಿರುವ ಎಸ್.ಜಿ.ಕನ್ವೆನ್ಷನ್ ಹಾಲ್‍ನಲ್ಲಿ ವೀರಶೈವ ಲಿಂಗಾಯತ ಮುಖಂಡರ ಸಭೆ ಕರೆದಿದ್ದು, ಈ ಸಭೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸುತ್ತಿದ್ದಾರೆ.
ಇದಾದ ನಂತರ ಮಧ್ಯಾಹ್ನ 3ಕ್ಕೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶಕ್ತಿಕೇಂದ್ರ ಪ್ರಮುಖರ ಸಭೆ ಹಮ್ಮಿಕೊಂಡಿದ್ದು, ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಭಾಗವಹಿಸಿ ಮಾತನಾಡಲಿದ್ದಾರೆ.
ಇದನ್ನೂ ಓದಿ: ಶ್ರೀಲಕ್ಷ್ಮೀದೇವಿ ಜಾತ್ರೆಗೆ 23 ವರ್ಷಗಳ ನಂತರ ಅಪ್ಪಣೆ
ಮಂಗಳವಾರ ಬೆಳಗ್ಗೆಯಿಂದಲೇ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಚಿತ್ರದುರ್ಗ ನಗರದಲ್ಲಿ ಮತಭೇಟಿಯಾಡಲಿದ್ದಾರೆ. ಬೆಳಗ್ಗೆ 8 ಗಂಟೆಗೆ ಸವಿತಾ ಸಮಾಜದ ಮುಖಂಡ ಲಿಂಗರಾಜು ಅವರ ಮನೆಯಲ್ಲಿ ಉಪಹಾರ ಸೇವಿಸಲಿದ್ದಾರೆ.
ಬೆಳಗ್ಗೆ 10.30ಕ್ಕೆ ಜಿಲ್ಲಾ ವಕೀಲರ ಸಂಘದ ಸದಸ್ಯರನ್ನು ಭೇಟಿಯಾಗಲಿದ್ದಾರೆ. ಸಂಜೆ 5.30ಕ್ಕೆ ತುರುವನೂರು ಗ್ರಾಮದಲ್ಲಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಲಿದ್ದಾರೆ. ಈ ವೇಳೆ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಎಂಎಲ್ಸಿ ಕೆ.ಎಸ್.ನವೀನ್, ಜಿಲ್ಲಾಧ್ಯಕ್ಷ ಎ.ಮುರುಳಿ, ಸಂಚಾಲಕ ಎಸ್.ಲಿಂಗಮೂರ್ತಿ, ಮಧುಗಿರಿ ಜಿಲ್ಲಾಧ್ಯಕ್ಷ ಹನುಮಂತೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಜಯಣ್ಣ, ತುಮಕೂರು ಜೆಡಿಎಸ್ ಜಿಲ್ಲಾಧ್ಯಕ್ಷ ಅಂಜಿನಪ್ಪ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
