ಲೋಕಸಮರ 2024
ಇಂದು ಹೆಲಿಕಾಪ್ಟರ್ ಮೂಲಕ ಬಿ.ಎಸ್.ಯಡಿಯೂರಪ್ಪ ಚಿತ್ರದುರ್ಗ ಜಿಲ್ಲೆಗೆ ಭೇಟಿ

CHITRADURGA NEWS | 21 APRIL 2024
ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಏಪ್ರಿಲ್ 21 ಭಾನುವಾರ(ಇಂದು) ಮೂರನೇ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದಾರೆ.
ಕಳೆದ ವಾರವಷ್ಟೇ ಚಳ್ಳಕೆರೆ, ಚಿತ್ರದುರ್ಗಕ್ಕೆ ಬಂದು ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಮತಭೇಟೆ ಮಾಡಿದ್ದ ಬಿಎಸ್‍ವೈ ಈ ಚುನಾವಣೆ ಅವಧಿಯಲ್ಲಿ ಮೂರನೇ ಅವಧಿಗೆ ಜಿಲ್ಲೆಗೆ ಪ್ರವಾಸ ಹಾಕಿಕೊಂಡಿದ್ದಾರೆ.

ಇದನ್ನೂ ಓದಿ: ಹಂಪಿ ಉತ್ಸವದ ಮಾದರಿಯಲ್ಲಿ ಮದಕರಿ ನಾಯಕ ಉತ್ಸವ | ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಚಿತ್ರದುರ್ಗ ಲೋಕಸಭಾ ಸ್ಥಾನವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಂತೆ ಮೇಲ್ನೋಟಕ್ಕೆ ಭಾಸವಾಗುತ್ತಿದ್ದು, ಮಧ್ಯಾಹ್ನ 2 ಗಂಟೆಗೆ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಭರಮಸಾಗರಕ್ಕೆ ಆಗಮಿಸುತ್ತಿದ್ದಾರೆ.
ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಗುಂಡ್ಲುಪೇಟೆಗೆ ತೆರಳಲಿದ್ದ, ಅಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವರು.
ಇದನ್ನೂ ಓದಿ: ಕಾಂಗ್ರೆಸ್ ನಾಯಕಿ ಕೋಟೆನಾಡಿಗೆ ಪ್ರಿಯಾಂಕ ಗಾಂಧಿ ಭೇಟಿಗೆ ದಿನಾಂಕ ಫಿಕ್ಸ್
ಗುಂಡ್ಲುಪೇಟೆಯಿಂದ ಮಧ್ಯಾಹ್ನ 12.45ಕ್ಕೆ ಹೊರಟು, ಮಧ್ಯಾಹ್ನ 2.30ಕ್ಕೆ ಭರಮಸಾಗರದ ಡಿವಿಎಸ್ ಕಾಲೇಜು ಮೈದಾನದಲ್ಲಿ ಬಂದಿಳಿಯಲಿದ್ದಾರೆ.
ಭರಮಸಾಗರದ ಪ್ರವಾಸಿ ಮಂದಿರದ ಬಳಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುವರು. ಸಂಜೆ 4.15ಕ್ಕೆ ಭರಮಸಾಗರದಿಂದ ಬೆಂಗಳೂರಿಗೆ ತೆರಳಲಿದ್ದಾರೆ.
ಇದನ್ನೂ ಓದಿ: ಹಿರೇಗುಂಟನೂರು ದ್ಯಾಮಲಾಂಬ ದೇವಿ ಜಾತ್ರಾ ಮಹೋತ್ಸವ | ಸಿದ್ದತೆ ಪ್ರಾರಂಭ
ಈ ವೇಳೆ ಶಾಸಕ ಎಂ.ಚಂದ್ರಪ್ಪ, ಎಂಎಲ್ಸಿಗಳಾದ ಕೆ.ಎಸ್.ನವೀನ್, ಎನ್.ರವಿಕುಮಾರ್, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಸಂಚಾಲಕ ಎಸ್.ಲಿಂಗಮೂರ್ತಿ, ಜಿಲ್ಲಾದ್ಯಕ್ಷ ಎ.ಮುರುಳಿ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಜಯಣ್ಣ ಸೇರಿದಂತೆ ಸ್ಥಳೀಯ ಮುಖಂಡರು ಭಾಗವಹಿಸಲಿದ್ದಾರೆ.
