CHITRADURGA NEWS | 06 MAY 2026
ಚಿತ್ರದುರ್ಗ: ಮೇ.9ರಂದು ಬೆಳಿಗ್ಗೆ ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ನಡೆಯಲಿದೆ. ಆದ್ದರಿಂದ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್‍ವೈ ಅಭಿಮಾನೋತ್ಸವವು ಬೆಳಿಗ್ಗೆಯ ಬದಲಾಗಿ ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯವರೆಗೆ ನಡೆಯಲಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ 06 | ಮೆಕ್ಕೆಜೋಳ ರೇಟ್…
3.45ರವೇಳೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೀ ಅವರು ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಪ್ರತಿಮ ಹೋರಾಟಗಾರ, ರೈತ ನಾಯಕ, ಬಡವರ ಕಣ್ಮಣಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಜೀವನದ 50 ವರ್ಷಗಳ ಪಯಣ ಪೂರೈಸಿದ ಶುಭ ಘಳಿಗೆಯಲ್ಲಿ ಬಿ.ಎಸ್.ವೈ ಅವರ ಅಭಿಮಾನೋತ್ಸವವನ್ನು ನಡೆಸಲಾಗುತ್ತಿದೆ. ಈ ಸಂಬಂಧ ವ್ಯಾಪಕ ಸಿದ್ಧತೆ ನಡೆದಿದೆ ಎಂದು ವಿವರಿಸಿದರು. 10 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಬರಲಿದ್ದಾರೆ ಎಂದು ತಿಳಿಸಿದರು.
ಪ್ರತಿ ಜಿಲ್ಲೆಗೆ ಹೋಗಿ ಸ್ವಾಮೀಜಿಗಳಿಗೆ ಆಮಂತ್ರಣಪತ್ರ ನೀಡಲು ಯೋಜಿಸಿದ್ದೆವು. ಸಮಯದ ಅಭಾವದಿಂದ ಎಲ್ಲರ ಭೇಟಿ ಸಾಧ್ಯವಾಗಿಲ್ಲ. ನಾಡಿನ ಎಲ್ಲ ಹರಗುರು ಚರಮೂರ್ತಿಗಳು, ಮಠಾಧೀಶರು, ಸ್ವಾಮೀಜಿಗಳು 9ರಂದು ಐತಿಹಾಸಿಕ ಅಭಿಮಾನೋತ್ಸವದಲ್ಲಿ ಪಾಲ್ಗೊಳ್ಳಬೇಕು ಎಂದು ವಿನಂತಿಸಿದರು. ಎಲ್ಲ ಸಮಾಜದ ಗುರುಗಳು ಬಂದು ಆಶೀರ್ವದಿಸಬೇಕೆಂದು ಮನವಿ ಮಾಡಿದರು.
ಇದನ್ನೂ ಓದಿ: ಕುಡಿಯುವ ನೀರಿನ ಸಮಸ್ಯೆ ಇರುವ ಹಳ್ಳಿಗಳಲ್ಲಿ 24 ಗಂಟೆಯೊಳಗೆ ಸಮಸ್ಯೆ ನಿವಾರಿಸಿ | ಗೋವಿಂದ ಎಂ ಕಾರಜೋಳ ಸೂಚನೆ
ಸಂಸದ ಗೋವಿಂದ ಕಾರಜೋಳ, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಶಾಸಕ ಹರೀಶ್ ಪೂಂಜಾ, ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಎಸ್.ಲಿಂಗಮೂರ್ತಿ ಸೇರಿದಂತೆ ಹಲವು ನಾಯಕರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
