
CHITRADURGA NEWS | 02 MAY 2026
ಚಿತ್ರದುರ್ಗ: ಯಡಿಯೂರಪ್ಪ ಅಭಿಮಾನೋತ್ಸವ ಯಾವುದೇ ರಾಜಕಾರಣದ ಉದ್ದೇಶದಿಂದ ನಡೆಯುತ್ತಿರುವುದಲ್ಲ, ಅವರ ಮೇಲಿನ ಅಭಿಮಾನಕ್ಕಾಗಿ ನಡೆಯುತ್ತಿರುವುದು. ಇಲ್ಲಿ ಯಾವ ಶಕ್ತಿ ಪ್ರದರ್ಶನವೂ ಅಗತ್ಯವಿಲ್ಲ. ಕೇವಲ ಅಭಿಮಾನಕ್ಕೋಸ್ಕರ ಮಾಡ್ತಾ ಇರುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.
ಇದನ್ನೂ ಓದಿ: ಬಿಎಸ್‌ವೈ ಅಭಿಮಾನೋತ್ಸವದ ಪೂರ್ವಭಾವಿ ಸಭೆ ನಾಳೆ | ಜಿ.ಎಚ್.ತಿಪ್ಪಾರೆಡ್ಡಿ
ನಗರದ ಹೊರವಲಯದ ಶ್ರೀ ಮಾದರ ಚೆನ್ನಯ್ಯ ಗುರುಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಬೇಟಿ ನೀಡಿ, ಪೆಂಡಾಲ್ ನಿರ್ಮಾಣ ಸ್ಥಳವನ್ನು ವೀಕ್ಷಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಯಡಿಯೂರಪ್ಪರವರ ಪರಿಶ್ರಮ ಅಧಿಕವಾಗಿದೆ, ಅವರ ಹೋರಾಟದ ಫಲವಾಗಿ ರಾಜ್ಯದಲ್ಲಿ ಬಿಜೆಪಿ ಅಧಿಕಾರವನ್ನು ನಡೆಸಲು ಕಾರಣವಾಯಿತು. ಈ ಹಿನ್ನಲೆಯಲ್ಲಿ ಅವರ 50 ವರ್ಷದ ರಾಜಕೀಯ ಸಾರ್ಥಕ ಜೀವನಕ್ಕೆ ಪೂರಕವಾಗಿ ಮೇ.9 ರಂದು ಅಭಿಮಾನೋತ್ಸವ ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕದಲ್ಲಿ ಹೋರಾಟಕ್ಕೆ ಮತ್ತೊಂದು ಹೆಸರು ಅಂದ್ರೆ ಬಿಎಸ್ ಯಡಿಯೂರಪ್ಪ, ಹಾಗಾಗಿ ಕರ್ನಾಟಕದಲ್ಲಿ ಕಳೆದ 50 ವರ್ಷಗಳಿಂದ ಬಡವರ, ಶೋಷಿತ ವರ್ಗದವರ, ರೈತರ ಪರವಾದ ಧ್ವನಿಯಾಗಿ, ನಿರಂತರವಾಗಿ, ದಣಿವರಿಯದೆ, ರಾಜ್ಯದ ಮೂಲೆಮೂಲೆಗಳಿಗೆ ಪ್ರವಾಸ ಮಾಡಿ, ರೈತರು ಎಲ್ಲಿಯೇ ಹೋರಾಟ ಮಾಡ್ತಾ ಇದ್ದರೆ ಅಲ್ಲಿ ಬಿ.ಎಸ್. ಯಡಿಯೂರಪ್ಪ ಅವರು ಇರ್ತಾ ಇದ್ದರು.
ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಲು ಸಕಾಲ | ಛಲವಾದಿ ಮಹಾಸಭಾ ರಾಜ್ಯಾಧ್ಯಕ್ಷ ಎಚ್.ಕೆ.ಬಸವರಾಜ್
ಅಂಥೊಬ್ಬ ಹೋರಾಟಗಾರ, ಜನನಾಯಕನನ್ನು ಗೌರವಿಸಬೇಕು ಎಂಬ ಕಾರಣಕ್ಕೆ ಅಭಿಮಾನೋತ್ಸವವನ್ನು ಮಾಡಲಾಗುತ್ತಿದೆ ಎಂದರು.
ನಾಡಿಗೆ ಯಡಿಯೂರಪ್ಪ ನೀಡಿದ ಕೊಡುಗೆಗೆ ಎಲ್ಲ ವರ್ಗದವರೂ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಇದಕ್ಕಾಗಿ ಅರ್ಥಪೂರ್ಣ, ಭವ್ಯ ಕಾರ್ಯಕ್ರಮ ನಡೆಸುತ್ತಿದ್ದೇವೆ. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಜನರು ಬರಲಿದ್ದಾರೆ. ಒಂದು ಐತಿಹಾಸಿಕ ಕಾರ್ಯಕ್ರಮ ಇದಾಗಲಿದೆ ಎಂದರು.
ಜನ ಸೇವೆಗಾಗಿಯೇ ತಮ್ಮ ಜೀವನನ್ನೇ ಮುಡುಪಾಗಿ ಇಟ್ಟಿದ್ದಾರೆ. ತಮ್ಮ ಅಧಿಕಾರದ ಅವಧಿಯಲ್ಲಿ ದಲಿತರು, ಪರಿಶಿಷ್ಟ ಜಾತಿ ಮತ್ತು ಪಂಗಡ, ಮಹಿಳೆಯರಿಗೆ ಧ್ವನಿಯಾಗಿ ಕೆಲಸವನ್ನು ಮಾಡಿದ್ದಾರೆ ಬಿಎಸ್.ವೈ ಎಂದರೆ ಹೋರಾಟ ಎಂಬ ಮನೋಭಾವ ಎಲ್ಲರಲ್ಲೂ ಸಹಾ ಮೂಡಿದೆ. ಛಲಕ್ಕೆ ಮತ್ತೊಂದು ಹೆಸರು ಯಡಿಯೂರಪ್ಪ ಎನ್ನಬಹುದಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಮೇ.31 ವರೆಗೆ ಲಿಡ್ಕರ್ ಉತ್ಪನ್ನಗಳ ಮೇಲೆ ಶೇ.15 ರಿಯಾಯಿತಿ ಮಾರಾಟ
ವಿಧಾನ ಪರಿಷತ್ ಮಾಜಿ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ರಾಜ್ಯ ಕಾರ್ಯದರ್ಶಿ ರಮೇಶ್ ಗೌಡ್ರು, ಶರಣು ತಳ್ಳಿಕೇರೆ, ವಿಭಾಗ ಸಹಾ ಪ್ರಬಾರಿ ಎ.ಮುರಳಿ, ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧುರಿ ಗೀರೀಶ್, ವೆಂಕಟೇಶ್ ಯಾದವ್, ಮೋಹನ್ ಕುಮಾರ್, ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್‍ಕುಮಾರ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ಸಹ ವಕ್ತಾರ ಚಾಲುಕ್ಯ ನವೀನ್, ಎಸ್.ಸಿ.ಮೋರ್ಚಾದ ಅಧ್ಯಕ್ಷ ಪರಶುರಾಮ್, ರಾಜ್ಯ ರೈತ ಮೋರ್ಚಾದ ಮಲ್ಲಿಕಾರ್ಜನ್, ರಾಜ್ಯ ಯುವ ಮೋರ್ಚಾದ ಕಾರ್ಯದರ್ಶಿ ಭಾರ್ಗವಿ ದ್ರಾವಿಡ್, ಮೋಹನ್ ಸಿರಿಗೆರೆ, ಯಶವಂತ, ಗ್ರಾಮಾಂತರ ಅಧ್ಯಕ್ಷ ನಾಗರಾಜ್ ಸೇರಿದಂತೆ ಇತರರು ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
