ಲೋಕಸಮರ 2024
ಕೋಟೆನಾಡಿನಲ್ಲಿ ರಾಜಾಹುಲಿ ಮತ ಶಿಖಾರಿ | ಒಂದೇ ದಿನ ಮೂರು ಸಮಾವೇಶಗಳಲ್ಲಿ ಭಾಗವಹಿಸಿದ ಬಿಎಸ್‍ವೈ

CHITRADURGA NEWS | 13 APRIL 2024
ಚಿತ್ರದುರ್ಗ: ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಭರ್ಜರಿ ಮತಶಿಖಾರಿ ನಡೆಸಿದರು.
ಬೆಳಗ್ಗೆ 11 ಗಂಟೆ ಸುಮಾರಿಗೆ ಮೊಳಕಾಲ್ಮೂರು ತಾಲೂಕಿನ ರಾಂಪುರಕ್ಕೆ ಬಂದಿಳಿದ ಬಿ.ಎಸ್.ಯಡಿಯೂರಪ್ಪ ಸಂಜೆ 5 ಗಂಟೆವರೆಗೆ ನಿರಂತರವಾಗಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.
ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿಗೆ ಬೆಂಬಲ ಘೋಷಿಸಿದ ಗೂಳಿಹಟ್ಟಿ ಶೇಖರ್
ಮೊಳಕಾಲ್ಮೂರು ತಾಲೂಕಿನಲ್ಲಿ ಸಮಾವೇಶ ನಡೆಸಿದ ನಂತರ ಚಳ್ಳಕೆರೆಗೆ ಆಗಮಿಸಿ ಅಲ್ಲಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಆನಂತರ ಹಿರಿಯೂರಿಗೆ ಆಗಮಿಸಿ ಇಲ್ಲಿನ ತಾಹ್ ಕನ್ವೆನ್ಶನ್ ಹಾಲ್‍ನಲ್ಲಿ ಸಭೆ ನಡೆಸಿ ನಂತರ ಬೆಂಗಳೂರಿಗೆ ತೆರಳಿದರು.
ತಮ್ಮ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿ.ಎಸ್.ಯಡಿಯೂರಪ್ಪ, ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ಅದಕ್ಕೆ ಭವಿಷ್ಯ ಇಲ್ಲ ಎಂದರು.
ಇದನ್ನೂ ಓದಿ: ಭರವಸೆ ಮೂಡಿಸಿದ ವರ್ಷದ ಮೊದಲ ಮಳೆ | ನಿರಾಳರಾದ ಕೃಷಿಕರು
ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಧಾನಿಯಾಗುವುದು ಸೂರ್ಯ ಚಂದ್ರರಷ್ಟೇ ಸತ್ಯ ಎಂದು ಭವಿಷ್ಯ ನುಡಿದರು.

ಕೋಟೆನಾಡಿನಲ್ಲಿ ರಾಜಾಹುಲಿ ಮತ ಶಿಖಾರಿ
ಮೊಳಕಾಲ್ಮೂರು ತಾಲೂಕಿನ ಸಮಾವೇಶದ ಜನಸ್ತೋಮ ನೋಡಿ ಕಾಂಗ್ರೆಸ್ಸಿನವರಿಗೆ ನಡುಕ ಉಂಟಾಗಿದೆ ಎಂದರು.
ಇದನ್ನೂ ಓದಿ: ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾಂಗ್ರೆಸ್ ಗೆಲ್ಲಬೇಕಿದೆ | ಸಚಿವ ಕೆ. ಹೆಚ್. ಮುನಿಯಪ್ಪ
ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಈಗ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೈ ಜೋಡಿಸಿದ್ದಾರೆ. ಇಬ್ಬರೂ ಒಟ್ಟಿಗೆ ಮೈಸೂರಿನಲ್ಲಿ ಬೃಹತ್ ಸಮಾವೇಶ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರದ 6 ಸಾವಿರದ ಜೊತೆಗೆ ರಾಜ್ಯ ಸರ್ಕಾರದಿಂದ 4 ಸಾವಿರ ಸೇರಿಸಿ 10 ಸಾವಿರ ಕೊಡಲಾಗುತ್ತಿತ್ತು. ಆದರೆ, ಈ ಸರ್ಕಾರ ಅದನ್ನು ನಿಲ್ಲಿಸಿದೆ. ಇದು ರೈತರಿಗೆ ಮಾಡಿದ ಅನ್ಯಾಯ ಎಂದರು.
ಇದನ್ನೂ ಓದಿ: ಹೃದಯಾಘಾತದಿಂದ ಮೃತಪಟ್ಟ ಚೇತನ್ PUC ಪರೀಕ್ಷೆಯಲ್ಲಿ FIRSTCLASS
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳು ಗೆಲ್ಲಬೇಕು. ನನಗೆ 78 ವರ್ಷ ಆದರೂ, ನರೇಂದ್ರ ಮೋದಿ ಅವರನ್ನು ಮೂರನೇ ಅವಧಿಗೆ ಪ್ರಧಾನಿ ಮಾಡಲು ಇಡೀ ರಾಜ್ಯ ಸುತ್ತುತ್ತಿದ್ದೇನೆ.
ಚಿತ್ರದುರ್ಗಕ್ಕೆ ಬಿಜೆಪಿ ಅಭ್ಯರ್ಥಿಯಾಗಿರುವ ಗೋವಿಂದ ಕಾರಜೋಳ ಅನುಭವೀ ರಾಜಕಾರಣಿ. ಅನೇಕ ಇಲಾಖೆಗಳ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಇದೆ. ಅವರನ್ನು ಗೆಲ್ಲಿಸಿಕೊಳ್ಳುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಮತ ಹಾಕಿ ಎಂದರು.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ವಿಮಾನ ನಿಲ್ದಾಣಕ್ಕೆ ಆದ್ಯತೆ | ಗೋವಿಂದ ಕಾರಜೋಳ
ಮಾಜಿ ಸಚಿವ ಬೈರತಿ ಬಸವರಾಜ್ ಮಾತನಾಡಿ, ಚಿತ್ರದುರ್ಗ ಕ್ಷೇತ್ರಕ್ಕೆ ಸುಸಂಸ್ಕೃತ ಅಭ್ಯರ್ಥಿಯನ್ನು ಬಿಜೆಪಿಯಿಂದ ನೀಡಲಾಗಿದೆ. ಅಭಿವೃದ್ಧಿ ಪರ ಚಿಂತನೆ ಮಾಡುವ ನಾಯಕ ಕಾರಜೋಳ. ಕ್ಷೇತ್ರದ ಜನರ ಬವಣೆ ಅರಿತು ಕೆಲಸ ಮಾಡುತ್ತಾರೆ. ಕೋವಿಡ್ ಸಂದರ್ಭದಲ್ಲಿ ನಮ್ಮನ್ನು ಕಾಪಾಡಿದ ಮೋದಿ ಅವರಿಗೆ ಮತ ಹಾಕುವ ಮೂಲಕ ಅವರ ಋಣ ತೀರಿಸುವ ಕೆಲಸ ಮಾಡೋಣ ಎಂದು ತಿಳಿಸಿದರು.
ಗಂಗಾವತಿ ಶಾಸಕ ಜನಾರ್ಧನರೆಡ್ಡಿ ಮಾತನಾಡಿ, ದೇಶದಲ್ಲಿ ಇಂಡಿಯಾ ಒಕ್ಕೂಟ ನೂರು ಸ್ಥಾನ ದಾಟಲ್ಲ. ಇಂಡಿಯಾ ಒಕ್ಕೂಟಕ್ಕೆ ಮತ ಹಾಕುವುದು ಡಸ್ಟ್ ಬಿನ್‍ಗೆ ಹಾಕಿದಂತೆ. ಕುಟುಂಬ ತ್ಯಾಗ ಮಾಡಿ ದೇಶ ಕಾಯುವ ಯೋಧರ ಜತೆ ಮೋದಿ ದೀಪಾವಳಿ ಆಚರಿಸುತ್ತಾರೆ. ಮೋದಿ ಬಗ್ಗೆ ಕೀಳಾಗಿ ಮಾತಾಡಿದ ಸಚಿವ ತಂಗಡಗಿಗೆ ಸಿಎಂ ಏನೂ ಹೇಳಲಿಲ್ಲ. ನಾವು ತಂಗಡಗಿ ಕಪಾಳಕ್ಕೆ ಬಾರಿಸುವುದು ಒಂದು ನಿಮಷ ಅಷ್ಟೇ. ನಾವು ಹಾಗೇ ತಂಗಡಗಿ ಕಪಾಳಕ್ಕೆ ಬಾರಿಸುವುದು ಬೇಡ. ಬಿಜೆಪಿಗೆ ಮತ ಹಾಕುವ ಮೂಲಕ ತಂಗಡಗಿ ಕಪಾಳಕ್ಕೆ ಬಾರಿಸೋಣ ಎಂದ ಅವರು ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಜನಾರ್ಧನರೆಡ್ಡಿ ಮತಯಾಚನೆ ಮಾಡಿದರು.
ಇದನ್ನೂ ಓದಿ: ಮತ್ತೆ 50 ಸಾವಿರದ ಗಡಿ ತಲುಪಿದ ಅಡಿಕೆ ರೇಟ್
ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಮಾತನಾಡಿ, ನಮಗೆ ದೇಶ ಮುಖ್ಯ, ದೇಶದ ರಕ್ಷಣೆ ಮಾಡುವವರು ನಮಗೆ ಬೇಕು. ರಾಜ್ಯ ಸರ್ಕಾರ ಅಳಿವಿನ ಅಂಚಿನಲ್ಲಿದೆ. ಪರಿಶಿಷ್ಟ ಜಾತಿ, ವರ್ಗ, ನೀರಾವರಿ ಯೋಜನೆಗಳ ಹಣವನ್ನು ರಾಜ್ಯ ಸರ್ಕಾರ ಗ್ಯಾರೆಂಟಿಗಳಿಗೆ ಬಳಸಿಕೊಳ್ಳುತ್ತಿದೆ ನಾಚಿಕೆ ಆಗಬೇಕು ಎಂದರು.

ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮಾತನಾಡಿ, ಇದು ದೇಶಕ್ಕಾಗಿ ನಡೆಯುತ್ತಿರುವ ಐತಿಹಾಸಿಕ ಚುನಾವಣೆ. ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಇಡೀ ದೇಶದ ಜನತೆ ಹಂಬಲಿಸುತ್ತಿದ್ದಾರೆ. 23 ವರ್ಷಗಳಿಂದ ಭ್ರಷ್ಟಾಚಾರದ ಆರೋಪ ಇಲ್ಲದ ರಾಜಕಾರಣಿ ನರೇಂದ್ರ ಮೋದಿ. ಕಳೆದ 10 ವರ್ಷದಿಂದ ದೇಶದ ಅಭಿವೃದ್ಧಿ ಮಾಡಿದ್ದಾರೆ. ದೇಶದ ಕೀರ್ತಿ ಗೌರವ ಪ್ರಪಂಚದಲ್ಲಿ ಹೆಚ್ಚಿಸಿದ್ದಾರೆ ಎಂದರು.
ಇದನ್ನೂ ಓದಿ: ಹೊಳಲ್ಕೆರೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ | ಕಾಂಗ್ರೆಸ್ ವಿರುದ್ಧ ಹರಿಹಾಯ್ದ ವಿಜಯೇಂದ್ರ
ಚಿತ್ರದುರ್ಗ ಮಧ್ಯ ಕರ್ನಾಟಕದ ಹಿಂದುಳಿದ ಜಿಲ್ಲೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ. ನನಗೆ ಮತ ಹಾಕಿದ್ರೆ, ಮೋದಿ ಜೊತೆಗೆ ನಾನು ಇರುತ್ತೇನೆ. ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ರೆ ಅವರು ವಿರೋಧ ಪಕ್ಷದ ಗುಂಪಿನಲ್ಲಿರುತ್ತಾರೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಜಿಲ್ಲಾಧ್ಯಕ್ಷ ಎ.ಮುರುಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಳೆಕಾಯಿ ರಾಮದಾಸ್, ಮೊಳಕಾಲ್ಮೂರು ಮಂಡಲ ಅಧ್ಯಕ್ಷ ಡಾ.ಮಂಜುನಾಥ್, ಎಸ್.ಲಿಂಗಮೂರ್ತಿ, ಅನಿಲ್ ಕುಮಾರ್, ಸೂರನಹಳ್ಳಿ ಶ್ರೀನಿವಾಸ್, ಕಾಲುವೆಹಳ್ಳಿ ಪಾಲಯ್ಯ ಮತ್ತಿತರರಿದ್ದರು.
