CHITRADURGA NEWS | 19 SEPTEMBER 2026
ಚಿತ್ರದುರ್ಗ: ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ಕೆ. ಜಯಲಕ್ಷ್ಮಮ್ಮ ಹೇಳಿದರು.
ಇದನ್ನೂ ಓದಿ: SIR | ಚಿತ್ರದುರ್ಗ ಜಿಲ್ಲೆಯಲ್ಲಿ 64,611 ಮತದಾರರಿಗೆ ನೋಟಿಸ್ ಜಾರಿ
ಹಿರಿಯೂರು ತಾಲ್ಲೂಕಿನ ಬುರುಜಿನರೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-4ರ ಗಣೇಶ ದೇವಸ್ಥಾನದ ಬಳಿ ‘ಸ್ವಚ್ಛತಾ ಹೀ ಸೇವಾ – 2026′ ಅಭಿಯಾನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
ಶ್ರಮದಾನದಲ್ಲಿ ಭಾಗವಹಿಸಿದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹೆದ್ದಾರಿ ಬದಿಯಲ್ಲಿದ್ದ ಪ್ಲಾಸ್ಟಿಕ್ ಹಾಗೂ ತ್ಯಾಜ್ಯವನ್ನು ತೆರವುಗೊಳಿಸಿ ಸ್ವಚ್ಛಗೊಳಿಸಿದರು. ಇದೇ ವೇಳೆ ಅವರು ನೆರೆದಿದ್ದ ಎಲ್ಲರಿಗೂ ಸ್ವಚ್ಛತಾ ಪ್ರತಿಜ್ಞಾವಿಧಿ ಬೋಧಿಸಿದರು.
ಇದನ್ನೂ ಓದಿ: ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ನೀರು ಹರಿವು | ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸಲು ಡಿಸಿ ರಮ್ಯಾ ಸೂಚನೆ
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ವಿಭಾಗದ ಜಿಲ್ಲಾ ಐಇಸಿ, ಎಂಇಎಸ್ ಸಮಾಲೋಚಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

