
CHITRADURGA NEWS | 03 April 2026
ಚಿತ್ರದುರ್ಗ: ಎತ್ತಿನ ಗಾಡಿಗೆ ಹಿಂಬದಿಯಿಂದ ಬುಲೆರೋ ಡಿಕ್ಕಿಯಾಗಿ, ಸ್ಥಳದಲ್ಲೇ ಎತ್ತುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿತ್ರದುರ್ಗ ತಾಲೂಕಿನ ಬೊಗಳೇರಹಟ್ಟಿ ಚಿಕ್ಕಗೊಂಡನಹಳ್ಳಿ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ರೈತ ತಿಮ್ಮಣ್ಣ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ರೈತರು ಸಂಯುಕ್ತ ರಸಗೊಬ್ಬರ ಬಳಸಿ | ಕೃಷಿ ನಿರ್ದೇಶಕ ಮಂಜುನಾಥ್ ಸಲಹೆ
ಚಿಕ್ಕಗೊಂಡನಹಳ್ಳಿಯ ರೈತ ತಿಮ್ಮಣ್ಣ ಎಂಬರಿಗೆ ಸೇರಿದ ಎತ್ತುಗಳು, ಮನೆಯಿಂದ ಜಮೀನಿಗೆ ತೆರಳುವ ವೇಳೆ ಘಟನೆ ನಡೆದಿದೆ.
ಬುಲೆರೋ ಚಾಲಕನ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

