CHITRADURGA NEWS | 13 JULY 2026
ಮೊಳಕಾಲ್ಮೂರು: ಮೊಳಕಾಲ್ಮೂರು ತಾಲೂಕು ಕೋನಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 150ಎ ನಲ್ಲಿ ಖಾಸಗಿ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿದ್ದು, ಬಸ್ಸಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, 28 ಜನ ಗಾಯಗೊಂಡಿದ್ದಾರೆ.
ಚಳ್ಳಕೆರೆ ಕಡೆಯಿಂದ ಬಳ್ಳಾರಿ ಕಡೆಗೆ ತೆರಳುತ್ತಿದ್ದ ಸೋಮೇಶ್ವರ ಎಂಬ ಖಾಸಗಿ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಬಸ್ ಚಾಲಕ ಮೊಳಕಾಲ್ಮೂರು ತಾಲೂಕು ಸಂತೆಗುಡ್ಡದ ಮಹಮ್ಮದ್ ಯಾಯ್(45) ಹಾಗೂ ಮತ್ತೋರ್ವ ಪ್ರಯಾಣಿಕರು ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್ ಪ್ರಸಾದ್ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರನ್ನು ರಾಂಪುರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ನಂತರ ಬಳ್ಳಾರಿಯ ವಿಮ್ಸ್‌ಗೆ ಕಳುಹಿಸಲಾಗಿದೆ.
ಅಪಘಾತದ ತೀವ್ರತೆ ಆತಂಕ ಮೂಡಿಸಿದ್ದು, ಕೂದಲೆಳೆ ಅಂತರದಲ್ಲಿ ಹಲವು ಜೀವಗಳು ಉಳಿದಿವೆ ಎಂದು ಅಪಘಾತದ ದೃಶ್ಯ ನೋಡಿದವರು ತಿಳಿಸಿದ್ದಾರೆ.
ಇದನ್ನೂ ಓದಿ:ಚಿತ್ರದುರ್ಗಕ್ಕಿಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ | DCM ಡಾ.ಜಿ.ಪರಮೇಶ್ವರ ಆಗಮನ
ಘಟನಾ ಸ್ಥಳಕ್ಕೆ ರಾಂಪುರ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು, ದೂರು ದಾಖಲಿಸಿಕೊಂಡಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

