
CHITRADURGA NEWS | 25 DECEMBER 2025
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಸಮೀಪದ ಗೊರ್ಲತ್ತು ಕ್ರಾಸ್‍ನಲ್ಲಿ (ರಾಷ್ಟ್ರೀಯ ಹೆದ್ದಾರಿ 48 ರಲ್ಲಿ) ಗುರುವಾರ ಮುಂಜಾನೆ ಖಾಸಗಿ ಸ್ಲೀಪರ್ ಬಸ್ ಟ್ರಕ್‍ಗೆ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಬಸ್ ಬೆಂಕಿ ದುರಂತದಲ್ಲಿ ಮೃತಪಟ್ಟವರ ಗುರುತು ಪತ್ತೆ | ತಾಯಿ ಮಗು ಸೇರಿ 6 ಮಂದಿ ದಹನ

6 ಜನ ಮೃತಪಟ್ಟಿದ್ದಾರೆ, ಇನ್ನುಳಿದವರು ಆಸ್ಪತ್ರೆಗೆ ದಾಖಲಾಗಿದ್ದು, ಗಾಯಾಳುಗಳನ್ನು ಸಂಸದ ಗೋವಿಂದ ಕಾರಜೋಳ ಅವರು ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಗಾಯಾಳುಗಳ ಆರೋಗ್ಯ ವಿಚಾರಿಸಿ, ನಂತರ ಮಾತನಾಡಿದ ಅವರು, ಗಾಯಾಳುಗಳ ಪರಿಸ್ಥಿತಿ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ತಲೆಗೆ ಪೆಟ್ಟಾಗಿದೆ, ಬ್ರೈನ್‍ಗೆ ಸ್ವಲ್ಪ ಪೆಟ್ಟು ಬಿದ್ದಿದೆ, ನಾವೇ ಟ್ರೀಟ್ಮೆಂಟ್ ಮಾಡ್ತೀವಿ ಅಂತ ಹೇಳಿದ್ದಾರೆ.
ಗಾಯಾಳುಗಳನ್ನು ಬೆಂಗಳೂರು ಅಥವಾ ಧಾರವಾಡಕ್ಕೆ ಶಿಫ್ಟ್ ಮಾಡೋಣಾ ಅಂತ ನಾನೇ ಕೇಳಿದೆ. ಬೇಡ ಅವರಿಗೆ ನಾವೇ ಚಿಕಿತ್ಸೆ ನೀಡುತ್ತೇವೆ. ಚೆನ್ನಾಗಿ ನೋಡಿಕೊಳ್ಳುತ್ತೇವೆ ಎಂದಿದ್ದಾರೆ. ಹೀಗಾಗಿ ವೈದ್ಯರಿಗೂ ಮನವಿ ಮಾಡಿದ್ದೇನೆ. ಸರಿಯಾದ ರೀತಿಯಲ್ಲಿ ಚಿಕಿತ್ಸೆ ಕೊಡಿ ಎಂದಿದ್ದೇನೆ ಎಂದು ತಿಳಿಸಿದರು.
ಇದನ್ನೂ ಓದಿ: ಬಸ್‌ಗೆ ಬೆಂಕಿ | ಅಪಘಾತ ಸಂಭವಿಸಿದ್ದು ಹೇಗೆ ಗೊತ್ತಾ ?
ಚಾಲರು ಬೇಜವಬ್ದಾರಿಯಿಂದ ಓಡಿಸುವಂತದ್ದು, ಟ್ರಾಫಿಕ್ ನಿಯಮಗಳನ್ನ ಮೀರಿ ಚಾಲನೆ ಮಾಡುವಂತದ್ದು ಇದೆಲ್ಲ ದುರಂತಕ್ಕೆ ಕಾರಣವಾಗುತ್ತದೆ ಎಂದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
